ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ: ನಗರದಲ್ಲಿ ಪಕ್ಷ ಬಲಪಡಿಸಲು ಬಿಎಸ್​ವೈ ಕಾರ್ಯತಂತ್ರ

news18
Updated:August 4, 2018, 10:14 AM IST
ಇಂದು ಬಿಜೆಪಿ ಕಾರ್ಯಕಾರಿಣಿ ಸಭೆ: ನಗರದಲ್ಲಿ ಪಕ್ಷ ಬಲಪಡಿಸಲು ಬಿಎಸ್​ವೈ ಕಾರ್ಯತಂತ್ರ
news18
Updated: August 4, 2018, 10:14 AM IST
ರಮೇಶ್​ ಹಿರೇಜಂಬೂರು, ನ್ಯೂಸ್​18 ಕನ್ನಡ

ಬೆಂಗಳೂರು (ಆ. 4): ಬೆಂಗಳೂರಿನಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿರುವ ಬಿಜೆಪಿ ಈ ಕುರಿತು ಚರ್ಚಿಸಲು ಇಂದು ಬೆಂಗಳೂರು ನಗರ ಕಾರ್ಯಕಾರಿಣಿ ಸಭೆ ನಡೆಸಲಿದೆ.

ಮಲ್ಲೇಶ್ವರದಲ್ಲಿರುವ  ಬಿಜೆಪಿ ಕಚೇರಿಯಲ್ಲಿ ಬಿ.ಎಸ್​. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ನಗರ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಬೆಂಗಳೂರು ನಗರದ ಬೆಂಗಳೂರು ಸೆಂಟ್ರಲ್​, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಈ 3 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರ ರೂಪಿಸಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ ಸುಮಾರು 70 ಸಾವಿರಕ್ಕೂ ಅಧಿಕ ಒಕ್ಕಲಿಗ ಮತಗಳಿರುವುದರಿಂದ ಒಕ್ಕಲಿಗರೇ ನಿರ್ಣಾಯಕರಾಗಿದ್ದಾರೆ.

 

ಬೆಂಗಳೂರು ಉತ್ತರ ಹಾಗೂ ಸೆಂಟ್ರಲ್ ಕ್ಷೇತ್ರಗಳಲ್ಲಿ ಅಹಿಂದ ಹಾಗೂ ಒಕ್ಕಲಿಗ ಮತಗಳೇ ಹೆಚ್ಚಾಗಿವೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆಯಿಂದ ಬಿಜೆಪಿಗೆ ಏಟು ಬೀಳುವ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ವಿಶೇಷ ರಣತಂತ್ರ ರೂಪಿಸಲಿರುವ ಬಿಜೆಪಿ ನಗರದ ನಾಯಕರೊಂದಿಗೆ ಚರ್ಚೆ ನಡೆಸಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಬೆಂಗಳೂರು ನಗರದಲ್ಲಿ ಕಾಂಗ್ರೆಸ್​-ಜೆಡಿಎಸ್ ಪಕ್ಷಗಳಿಗೆ ಅತಿಹೆಚ್ಚು ಮತಗಳು ದೊರಕಿದ್ದವು. ಆದ್ದರಿಂದ ವಿಧಾನಸಭೆ ಚುನಾವಣೆಗಿಂತ ಪರಿಣಾಮಕಾರಿಯಾಗಿ ಈ ಬಾರಿ ನಗರದಲ್ಲಿ ಬಿಜೆಪಿಯನ್ನು ಭದ್ರಗೊಳಿಸಲು ರಣತಂತ್ರ ರೂಪಿಸಲಾಗುತ್ತಿದೆ.

ರಾಜ್ಯದಲ್ಲಿ 25 ಲೋಕಸಭಾ ಕ್ಷೇತ್ರ ಗೆಲ್ಲುವುದರ ಜೊತೆಗೆ ಬೆಂಗಳೂರಿನ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಗುರಿಯನ್ನು ಯಡಿಯೂರಪ್ಪ ಹೊಂದಿದ್ದಾರೆ. ಹೀಗಾಗಿ ಇಂದು ಕಾರ್ಯಕಾರಿಕಾರಿಣಿ ಸಭೆಗೆ ಯಡಿಯೂರಪ್ಪನವರು ಖುದ್ದು ತಾವೇ ಹಾಜರಾಗಲಿದ್ದಾರೆ.
First published:August 4, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ