ಬೆಂಗಳೂರು(ನ.01): ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಕಾವು ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣೆಗೆ ಇನ್ನೂ ಎರಡು ದಿನಗಳಷ್ಟೆ ಬಾಕಿ ಇದ್ದು ಮತದಾರರ ಓಲೈಕೆಗೆ ಮುಂದಾಗಿದ್ದಾರೆ. ಇದೇ ವೇಳೆ ಆರ್ ಆರ್ ನಗರ ಕ್ಷೇತ್ರದ ಕೆಲವೆಡೆ ಹಣ ಹಂಚಿಕೆ ಆರೋಪವು ಕೇಳಿ ಬರ್ತಿದೆ. ಲಗ್ಗೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚಿಕೆ ಮಾಡ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ತಡರಾತ್ರಿ ಪ್ರತಿಭಟನೆ ನಡೆಸಿದರು. ಲಗ್ಗೆರೆಯಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಬಿಜೆಪಿ ಕಾರ್ಯಕರ್ತರು, ಬೇರೆಡೆಯಿಂದ ಬಂದತಂಹ ಕಾಂಗ್ರೆಸ್ ಕಾರ್ಯಕರ್ತರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಸ್ತೆ ತಡೆ ನಡೆಸಿದರು.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದು ಬಳಿಕ ಲಗ್ಗೆರೆಯಿಂದ ನಂದಿನಿ ಲೇಔಟ್ ಪೊಲೀಸ್ ಠಾಣೆ ಕಡೆಗೆ ಪ್ರತಿಭಟನೆ ಸಾಗಿತ್ತು. ಬಳಿಕ ರಾಜ್ ಕುಮಾರ್ ಸಮಾಧಿ ಬಳಿ ವಾಹನಗಳನ್ನ ತಡೆದು ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನ ತಡೆದ ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಕುಕ್ಕೆ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಗೆ ವಿರೋಧ; ಅವಕಾಶ ಕಲ್ಪಿಸದ ಸರ್ಕಾರದ ವಿರುದ್ಧ ಮಲೆಕುಡಿಯ ಜನಾಂಗ ಆಕ್ರೋಶ
ಪೊಲೀಸರಿಗೂ ಬಗ್ಗದ ಬಿಜೆಪಿಯ ಮಹಿಳಾ ಕಾರ್ಯಕರ್ತರು ವಾಹನ ಸಂಚಾರದ ನಡುವೆಯೇ ಕಾರಿನ ಕೆಳಗೆ ಮಲಗಿ ರಸ್ತೆ ತಡೆದು ಜೋರು ಘೋಷಣೆ ಕೂಗುತ್ತಾ ರಸ್ತೆ ತಡೆ ನಡೆಸಿದರು. ಪ್ರತಿಭಟನೆ ಕಾವು ಜೋರಾಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ರಸ್ತೆಯುದ್ದಕ್ಕೂ ವಾಹನಗಳು ನಿಂತಿದ್ದವು. ಮಹಿಳಾ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿನ್ನಲೆ ಪರಿಸ್ಥಿತಿ ನಿಯಂತ್ರಿಸಲು ಪೋಲೀಸರ ಹರಸಹಾಸ ಪಡುವಂತಾಯಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ