HOME » NEWS » State » BJP RAJYA SABHA MP ASHOK GASTI PASSES AWAY DUE TO CORONAVIRUS IN MANIPAL HOSPITAL SESR

Ashok Gasti: ಕೊರೋನಾ ಸೋಂಕಿನಿಂದ ರಾಜ್ಯಸಭಾ ಸದಸ್ಯ ಅಶೋಕ್​ ಗಸ್ತಿ ನಿಧನ

ಕಳೆದ ಕೆಲವು ದಿನಗಳ ಹಿಂದೆ ಸೋಂಕಿಗೆ ಗುರಿಯಾಗಿದ್ದ ಅವರು, ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ.


Updated:September 17, 2020, 5:27 PM IST
Ashok Gasti: ಕೊರೋನಾ ಸೋಂಕಿನಿಂದ ರಾಜ್ಯಸಭಾ ಸದಸ್ಯ ಅಶೋಕ್​ ಗಸ್ತಿ ನಿಧನ
ಬಿಜೆಪಿ ನಾಯಕ ಅಶೋಕ್​ ಗಸ್ತಿ
  • Share this:
ಬೆಂಗಳೂರು (ಸೆ.17): ಕೊರೋನಾ ಸೋಂಕಿಗೆ ಗುರಿಯಾಗಿದ್ದ ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಅಶೋಕ್​ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆ ಸೋಂಕಿಗೆ ಗುರಿಯಾಗಿದ್ದ ಅವರು, ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ. ಕಳೆದ ಜೂನ್​ನಲ್ಲಿ  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಈರಣ್ಣ ಕಡಾಡಿ ಜೊತೆ ಅಶೋಕ ಗಸ್ತಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ರಾಯಚೂರಿನ ಲಿಂಗಸಗೂರಿನ ಅವರು ಸವಿತಾ ಸಮಾಜಕ್ಕೆ ಸೇರಿದವರು. ಕಾಲೇಜಿನಲ್ಲಿದ್ದಾಗಲೇ ಹೋರಾಟಕ್ಕೆ ಧುಮಿಕಿದ್ದರು.    1990ರಿಂದ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತಿದ್ದರು.  ಬಳ್ಳಾರಿ ಹಾಗು ರಾಯಚೂರು ಪಕ್ಷದ ಸಂಘಟನಾ ಮುಖಂಡರಾಗಿ ಕೆಲಸ ಮಾಡುತ್ತಿದ್ದಾರೆ. 2001ರಲ್ಲಿ ರಾಯಚೂರು ನಗರಸಭೆಯ ಸದಸ್ಯರಾಗಿ ಆಯ್ಕೆಯಾದರು. 2012ರಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ‌ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿ ಯುವ ಮೋರ್ಚ, ವಕೀಲರ ಘಟಕ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಹಲವು ನಾಯಕರಿಂದ ಸಂತಾಪ:

ಅಶೋಕ್​ ಗಸ್ತಿ ಅವರ ಅಕಾಲಿಕ ನಿಧನಕ್ಕೆ ಬಿಜೆಪಿ ಪಕ್ಷ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ.

Published by: Seema R
First published: September 17, 2020, 4:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories