ಬೆಂಗಳೂರು: ಕರ್ನಾಟಕ ಚುನಾವಣೆಗೆ (Karnataka Election 2023) ಹಿನ್ನೆಲೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು (Manifesto) ಬಿಡುಗಡೆ ಮಾಡಿದೆ. ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ಕರುನಾಡಿನ ಜನತೆ ಮುಂದೆ ಹಲವು ಭರವಸೆಯನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai), ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಜೆಪಿ ಭರವಸೆಗಳು
ಬಿಪಿಎಲ್ ಕುಟುಂಬಗಳಿಗೆ ಯುಗಾದಿ, ಗಣೇಶ ಮತ್ತು ದೀಪಾವಳಿ ಹಬ್ಬಕ್ಕೆ ಮೂರು ಎಲ್ಪಿಜಿ ಸಿಲಿಂಡರ್ ಉಚಿತ
ಪ್ರತಿ ವಾರ್ಡ್ನಲ್ಲಿಯೂ ಅಟಲ್ ಆಹಾರ ಕೇಂದ್ರ ಸ್ಥಾಪನೆ
ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಉಚಿತವಾಗಿ ಅರ್ಧ ಲೀಟರ್ ನಂದಿನಿ ಹಾಲು ವಿತರಣೆ
ಶ್ರೀ ಅನ್ನ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ 5 ಕೆಜಿ ಅಕ್ಕಿ ಮತ್ತು 5 ಕೆಜಿ ಸಿರಿಧಾನ್ಯ ವಿತರಣೆ
ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ಮನೆಗಳ ನಿರ್ಮಾಣ
ಏಕರೂಪ ನಾಗರಿಕೆ ಸಂಹಿತೆ ಅಭಯ
ಮುಂದಿನ ಐದು ವರ್ಷಗಳಲ್ಲಿ 200 ಮೀನು ಕೃಷಿ ಉತ್ಪಾದನಾ ಕೇಂದ್ರಗಳ ಸ್ಥಾಪನೆ.
ಹೈನುಗಾರರಿಗೆ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ಗೆ 5 ರಿಂದ 7 ರೂಪಾಯಿ ಏರಿಕೆ
ಮೊಬೈಲ್ ಪಶು ಆರೋಗ್ಯ ಕ್ಲಿನಿಕ್ ಆರಂಭ
ಪ್ರತಿ ಜಿಲ್ಲೆಯಲ್ಲಿ ಐಐಟಿ ಮಾದರಿಯ ಕೆಐಟಿ (ಕರ್ನಾಟಕ ತಂತ್ರಜ್ಞಾನ ಸಂಸ್ಥೆ) ಆರಂಭ
ಇದನ್ನೂ ಓದಿ: Kusuma H: ಸಚಿವ ಮುನಿರತ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಗಂಭೀರ ಆರೋಪ; ದೂರು ದಾಖಲು
ವಿಶ್ವೇಶ್ವರಯ್ಯ ವಿದ್ಯಾ ಯೋಜನೆಯಡಿ ಸರ್ಕಾರಿ ಶಾಲೆಗಳ ಮೇಲ್ದರ್ಜೆ
ಮೈಸೂರಿನಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ ದೇಶದ ಅತಿದೊಡ್ಡ ಪುನೀತ್ ರಾಜ್ಕುಮಾರ್ ಫಿಲ್ಮ್ ಸಿಟಿ ಸ್ಥಾಪನೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ