Karnataka By Election Result 2021: ಸಿಎಂ ತವರು ಜಿಲ್ಲೆಯಲ್ಲೇ ಸೋಲು; ಬಿಜೆಪಿ ನಾಯಕರ ಮಹತ್ವದ ನಿರ್ಧಾರ

ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai)ತವರು ಜಿಲ್ಲೆಯಲ್ಲಿಯೇ ಬಿಜೆಪಿ ಸೋತಿದೆ. ಹಾಗಾಗಿ ವಿಪಕ್ಷಗಳು ಇದನ್ನೇ ಗಾಳವಾಗಿ ತೆಗೆದುಕೊಂಡು ಸಿಎಂ  ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(KPCC President DK Shivakumar), ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. 

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

  • Share this:
ಬೆಂಗಳೂರು: ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯ ಫಲಿತಾಂಶ (Karnataka By Election Results 2021) ಹೊರ ಬಂದಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai)ತವರು ಜಿಲ್ಲೆಯಲ್ಲಿಯೇ ಬಿಜೆಪಿ ಸೋತಿದೆ. ಹಾಗಾಗಿ ವಿಪಕ್ಷಗಳು ಇದನ್ನೇ ಗಾಳವಾಗಿ ತೆಗೆದುಕೊಂಡು ಸಿಎಂ  ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(KPCC President DK Shivakumar), ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.  ಹಾನಗಲ್ ಕ್ಷೇತ್ರದ ಸೋಲಿನಿಂದ ಕೆಂಗಟ್ಟಿರುವ ಕಮಲ ನಾಯಕರು ಸೋಲಿನ ಪರಮಾರ್ಶೆ ನಡೆಸಲು ಬೆಂಗಳೂರಿನಲ್ಲಿ ಸಭೆ ನಡೆಸಲು ಮುಂದಾಗಿದ್ದಾರೆ.

ಹಾನಗಲ್ ಸೋಲಿನ ಪರಮಾರ್ಶೆ ಸಭೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ನೇತೃತ್ವದಲ್ಲಿ ನಡೆಯಲಿದೆ. ನವೆಂಬರ್ 9ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಭೆಗೆ ಅರುಣ್ ಸಿಂಗ್, ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಅಹ್ವಾನಿಸಲಾಗಿದೆ. ನವಂಬರ್ ೯ ರ ಸಭೆಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ (BL Santhosh) ಭಾಗಿಯಾಗುವ ಸಾಧ್ಯತೆಗಳಿವೆ. ಆದ್ರೆ ಈ ಬಗ್ಗೆ ಅಧಿಕೃತಗೊಂಡಿಲ್ಲ.

ಇದನ್ನೂ ಓದಿ:  Sindagi-Hangal By Election Results: JDS ಠೇವಣಿ ಕಳೆದುಕೊಳ್ಳುತ್ತೆ ಅಂತ ನಾನು ಮೊದಲೇ ಹೇಳಿದ್ದೆ; ಸಿದ್ದರಾಮಯ್ಯ ವ್ಯಂಗ್ಯ

ಸೋಲಿನ ಬಗ್ಗೆ ಗಂಭೀರ ಚರ್ಚೆ

ಮುಂದೆ ವಿಧಾನ ಪರಿಷತ್, ಜಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳು ನಡೆಯಲಿವೆ. ಹಾಗಾಗಿ ಹಾನಗಲ್ ಸೋಲಿನ ಬಗ್ಗೆ ಗಂಭೀರ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಇದೇ ವೇಳೆ ಬಿಬಿಎಂಪಿ (BBMP) ಚುನಾವಣೆ ತಯಾರಿಯ ರೂಪರೇಷ ಸಿದ್ಧಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸೋಲಿನ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಉಪ ಚುನಾವಣೆಯ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಾಗುವುದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವBsavaraಣೆ ಎದುರಿಸಿದ್ದು ಸೋಲಿನ ಹೊಣೆಯನ್ನು ಎಲ್ಲರೂ ಹೊರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಿದೆ. ಸೋಲಿಗೆ ನಾನೊಬ್ಬನೇ ಕಾರಣನಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಮಾಡಿದ್ದೇವೆ. ಸೋಲಿನ ಹೊಣೆಯನ್ನು ಎಲ್ಲರೂ ಸಾಮೂಹಿಕವಾಗಿ ಹೊರುತ್ತೇವೆ ಎಂದರು.

ಇದನ್ನೂ ಓದಿ:  HD Devegowda : ಉಪ ಸಮರದಲ್ಲೂ ಚುಕ್ಕಾಣಿ ಹಿಡಿಯದ `ದಳಪತಿ’ಗಳು: ಇನ್ನೂ ಜೀವಂತವಾಗಿದ್ದೇನೆ ಎಂದ ದೇವೇಗೌಡರು

ಕಾಂಗ್ರೆಸ್ ಅಭ್ಯರ್ಥಿಯ ಜನಪರ ಕೆಲಸ

ನಮ್ಮ ಕೇಂದ್ರದ  ನಾಯಕ ಅಮಿತ್ ಶಾ (Union Minister Amit Shah) ನನ್ನ ಹೆಸರು ಹೇಳಿದಾಗಲೇ ಹೇಳಿದ್ದೆ. ನಾನು ಒಬ್ಬ ತಂಡದ ಮುಖ್ಯಸ್ಥ ಇರಬಹುದು. ಆದ್ರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಮಾಡುತ್ತೇವೆ ಎಂದಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಉದಾಸಿ ಇದ್ದಾಗಲೂ ಒಮ್ಮೆ ಬಿಜೆಪಿ - ಒಮ್ಮೆ ಕಾಂಗ್ರೆಸ್  ಗೆದ್ದು ಬರುತ್ತಿತ್ತು. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಪರ‌ ಕೆಲಸಗಳನ್ನು ಜನರು ಬೆಂಬಲಿಸಿದ್ದಾರೆ. ಸೋಲಿನ ಪರಾಮರ್ಶೆ ಮಾಡಲಾಗುವುದು ಎಂದರು.

ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ ಏನು?

  • 2018ರ ಚುನಾವಣೆಯಲ್ಲಿ ಶ್ರೀನಿವಾಸ್ ಮಾನೆ ಸೋತಿದ್ದರು. ಸೋತರೂ ಕ್ಷೇತ್ರದಲ್ಲಿಯೇ ಇದ್ದರು.

  • ಕ್ಷೇತ್ರದಲ್ಲಿಯೇ ಉಳಿದು ತಮ್ಮದೇ ಯುವಕರ ಪಡೆ ರಚಿಸಿಕೊಂಡಿದ್ದರು.

  • ಕೋವಿಡ್ ಸಂದರ್ಭದಲ್ಲಿ ಜನರ ನೆರವಿಗೆ ತಮ್ಮ ಯುವ ಪಡೆ ಮೂಲಕ ನೆರವಾಗಿದ್ದರು.

  • 2018ರ ಸೋಲಿನ ಅನುಕಂಪ

  • ಅಹಿಂದ ಮತಗಳನ್ನು ಒಟ್ಟುಗೂಡಿಸುವ ಮೂಲಕ ತಮ್ಮ ವರ್ಚಸ್ಸು ಹೆಚ್ಚಿಸಿಕೊಂಡಿದ್ದರು.

  • 2018ರಲ್ಲಿ ಗೆದ್ದಿದ್ದ ಸಿ.ಎಂ.ಉದಾಸಿ ಕ್ಷೇತ್ರದ ಸಂಪರ್ಕ ಕಳೆದುಕೊಂಡಿದ್ದರು.

  • ಹಾನಗಲ್ ನಲ್ಲಿ ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ರಚಾರ ನಡೆಸಿತ್ತು.

  • ಹಾನಗಲ್ ನಲ್ಲಿ ಭಿನ್ನಮತ ಶಮನ ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿ

  • ಚುನಾವಣೆಯಲ್ಲಿ ಸೋತರೂ ಕ್ಷೇತ್ರದಲ್ಲಿಯೇ ಉಳಿದುಕೊಂಡು ವರ್ಚಸ್ಸು ಹೆಚ್ಚಿಸಿಕೊಂಡಿದ್ದರು.

Published by:Mahmadrafik K
First published: