#LuckyDipCM, ವಚನಭ್ರಷ್ಟ: ಕುಮಾರಸ್ವಾಮಿ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ದಾಳಿ

ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ  ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ

ಹೆಚ್ ಡಿ ಕುಮಾರಸ್ವಾಮಿ

ಹೆಚ್ ಡಿ ಕುಮಾರಸ್ವಾಮಿ

  • Share this:
ಬೆಂಗಳೂರು (ಏ.2): ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸೋ ಬರದಲ್ಲಿ ಗಂಡಸ್ತನದ ಪದ ಬಳಸಿ ಮಾಜಿ ಸಿಎಂ ಕುಮಾರಸ್ವಾಮಿ (H.D Kumaraswamya) ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಬಗ್ಗೆ ಗಂಡಸ್ತನದ ಮಾತುಗಳನ್ನು ಆಡಿರೋದಕ್ಕೆ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಟ್ವಿಟ್ಟರ್​ನಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಯಿಗೆ ಬಂದಂತೆ ಮಾತನಾಡುವುದು ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ @hd_kumaraswamy ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?

 ಬಿಜೆಪಿ ಪೇಜ್​ನಲ್ಲಿ ಸರಣಿ ಟ್ವೀಟ್​

ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ, ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ಬಿಜೆಪಿ ಟ್ವೀಟ್​ ಮಾಡಿದೆ.

ನಿಮ್ಮಿಂದ ಯಾರು ಪಾಠ ಕಲಿಯಬೇಕಿಲ್ಲ

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ  ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ. ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: NIA First Report: ಶಿವಮೊಗ್ಗ ಹರ್ಷ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಲ್ಲ, ಕೋಮುಗಲಭೆ ಸೃಷ್ಟಿಸೋದೆ ಆರೋಪಿಗಳ ಉದ್ದೇಶ

#ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ?

ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಕುರ್ಚಿಗಾಗಿ ಮಾತುಮುರಿದು #ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ? ಎಂದು ಟ್ವೀಟ್​ ಮಾಡಿದ್ದಾರೆ.

ಹಿಂದೂ ವಿರೋಧಿ ಜೆಡಿಎಸ್​

ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರ ಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ

ವಿಷಾದ ಕೋರಿಕೆ!

ಹಿಜಾಬ್ ವಿವಾದ ಶುರುವಾದಾಗಿನಿಂದ ರಾಜ್ಯದಲ್ಲಿ ಒಂದಲ್ಲಾ ಒಂದು ಸರಣಿ ವಿವಾದಗಳು ಹುಟ್ಟುತ್ತಲೇ ಇವೆ. ಸರಣಿ ವಿವಾದಗಳಿಂದ ರಾಜ್ಯದಲ್ಲಿ ಹಿಂದೂ, ಮುಸ್ಲಿಂ ಸಮುದಾಯದ ಮಧ್ಯೆ ಬಿರುಕು ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಗಂಡಸ್ತನ ಇದ್ರೆ ಎಲ್ಲವನ್ನೂ ನಿಲ್ಲಿಸಿ. ವಿಹೆಚ್‌ಪಿ, ಬಜರಂಗದಳದವರು ಸಮಾಜ ಘಾತುಕರು, ಪೋಲಿಗಳು. ಕಾಂಗ್ರೆಸ್ನವರಿಗೆ ತಾಕತ್ತಿಲ್ಲ ಎಂದು ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ರೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದರು. ಈ ಹೇಳಿಕೆಯ ಬಳಿಕ ಬಿಜೆಪಿ ಮುಖಂಡರು ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದ್ರೆ ಈಗ ಹೆಚ್ಡಿ ಕುಮಾರಸ್ವಾಮಿ ಗಂಡಸ್ತನ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಎಂದಿನಂತೆ ಯುಗಾದಿ, ವರ್ಷತೊಡಕು ಆಚರಿಸಿ, ಇವರ ಸೋಗಲಾಡಿತನಕ್ಕೆ ಇತಿಶ್ರೀ ಹಾಡೋಣ: HD Kumaraswamy ಕರೆ

ಮಾತನಾಡುವ ಭರದಲ್ಲಿ ಗಂಡಸ್ತನದ ಕುರಿತು ಹೇಳಿದ್ದೇನೆ. ಕೂಡಲೇ ಅದನ್ನ ಸರಿ ಮಾಡಿಕೊಂಡಿದ್ದೇನೆ. ನನ್ನ ಪದ ಬಳಕೆ ನೋವು ತಂದಿದ್ರೆ ಸಾರ್ವಜನಿಕವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಅಮಾಯಕ ಮಕ್ಕಳ ಬಲಿದಾನ. ಇದನ್ನು ನೋಡಿದ ಮೇಲೆ ನನಗೆ ರೋಷ ಉಕ್ಕಿ ಬಂತು. ಆವೇಶದಲ್ಲಿ ನಾನು ಗಂಡಸ್ತನ ಎಂದು ಮಾತನಾಡಿದ್ದೇನೆ. ನನ್ನ ಪದ ಬಳಕೆ ನೋವು ತಂದಿದ್ರೆ ವಿಷಾದ ವ್ಯಕ್ತಪಡಿಸ್ತೇನೆ. ಆಗಲೇ ಪದ ಬಳಕೆ ಬಗ್ಗೆ ಅನ್ಯಥಾ ಭಾವಿಸಬೇಡಿ ಅಂದಿದ್ದೇನೆ ಎಂದು ಗಂಡಸ್ತನ ಹೇಳಿಕೆಗೆ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
Published by:Pavana HS
First published: