ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಎಂಬಿ ಪಾಟೀಲ್ (Minister MB Patil) ಹೇಳಿಕೆ ಸಂಚಲನ ಸೃಷ್ಟಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ಗೆ (Congress) ಬಹುಮತ ಸಿಗುತ್ತಿದ್ದಂತೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಮಧ್ಯೆ ಸಿಎಂ ಸ್ಥಾನಕ್ಕೆ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ (Congress High command) ಅಧಿಕಾರ ಹಂಚಿಕೆಯ ಸೂತ್ರವನ್ನು ಇರಿಸಿ ಉಭಯ ನಾಯಕರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅಧಿಕಾರ ಹಂಚಿಕೆಯ ಸೂತ್ರವನ್ನು (Congress Power Sharing Formula) ಒಪ್ಪಿಕೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಬಹಿರಂಗವಾಗಿಯೇ ಒಪ್ಪಿಕೊಂಡಿದ್ದರು. ಈಗ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದನ್ನು ಬಿಜೆಪಿ (BJP) ಆಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದೆ.
ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗುವುದು ಇಲ್ಲ, ಅವರನ್ನು ಆಗಲು ಸಿದ್ದರಾಮಯ್ಯನವರು ಬಿಡುವುದು ಇಲ್ಲ. ಎಂಬಿ ಪಾಟೀಲ್ ಅವರ ಈ ಹೇಳಿಕೆಯ ಮೂಲಕ ಡಿಕೆ ಶಿವಕುಮಾರ್ ಅವರಿಗೆ ನೇರವಾದ ಎಚ್ಚರಿಕೆಯನ್ನು ರವಾನಿಸಿದ್ದಾರಷ್ಟೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಈ ಆದೇಶ ರಾಜ್ಯದ ಪ್ರಗತಿಗೆ ಮಾರಕ
ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕಾಮಗಾರಿ ತಡೆ ಹಿಡಿದು ಆದೇಶ ಹೊರಡಿಸಿರೋದಕ್ಕೆ ಕಿಡಿಕಾರಿರುವ ಬಿಜೆಪಿ, ದೆಹಲಿಗೆ ಕಪ್ಪ ಕಳುಹಿಸಲೇಬೇಕು. ಕಾಂಗ್ರೆಸ್ ಹೈಕಮಾಂಡಿಗು ಸಿದ್ದರಾಮಯ್ಯನವರ #ATMSarkarಕ್ಕೂ ಇರುವ ಡೀಲೇ ಅದು. ಸರಕಾರದ ಈ ಆದೇಶ ರಾಜ್ಯದ ಪ್ರಗತಿಗೆ ಮಾರಕ, ಕಾಂಗ್ರೆಸ್ ಖಜಾನೆಗೆ ಪೂರಕ ಎಂದು ಗಂಭೀರ ಆರೋಪವನ್ನ ಮಾಡಿದೆ.
ಗ್ಯಾರಂಟಿಯೂ ಇಲ್ಲ
ಅದೇನೆ ಇದ್ದರೂ ಬಹುಮತ ದೊರಕಿದ ನಂತರದ ಈವರೆಗಿನ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ, ಈ ಸರಕಾರ ಸುಸ್ತಿರವಾಗಿರಲಿದೆ ಎಂಬ ಯಾವ ಲಕ್ಷಣವೂ ಕಾಣುತ್ತಿಲ್ಲ, ಗ್ಯಾರಂಟಿಯೂ ಇಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.
ಇದನ್ನೂ ಓದಿ: Karnataka Lokayukta: ಯಾರಾದ್ರೂ ಲಂಚಕ್ಕೆ ಬೇಡಿಕೆಯಿಟ್ರೆ ಹೀಗೆ ಮಾಡಿ
ದೆಹಲಿಯ ತಮ್ಮ ಹೈಕಮಾಂಡಿಗೆ ಕಪ್ಪ ಪೂರೈಸಬೇಕಾದ ಏಕೈಕ ಮಾನದಂಡದಲ್ಲಿ ಈ #ATMSarkara ರಚನೆಯಾಗಿರುವುದು ಮತ್ತು ಅದಷ್ಟೇ ಇದರ ಆದ್ಯತೆಯಾಗಿರುವುದು ರಾಜ್ಯದ ದುರಂತ ಎಂದು ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ