ವಿಶ್ವಾಸಮತ ಯಾಚನೆಗೆ ಸಮಯ ನಿಗದಿಗೊಳಿಸುವಂತೆ ನಾಳೆ ಸುಪ್ರೀಂಕೊರ್ಟ್​ಗೆ ಅರ್ಜಿ ಸಲ್ಲಿಸಲು ಬಿಜೆಪಿ ನಿರ್ಧಾರ

2018ರ ಮೇ 18ರಂದು ಬಹುಮತ ಸಾಬೀತು ಮಾಡುವಂತೆ ಸುಪ್ರೀಂಕೋರ್ಟ್​ ಆದೇಶ ನೀಡಿದಂತೆ, ಈಗಲೂ ಕಾಲಮಿತಿಯೊಳಗೆ ವಿಶ್ವಾಸ ಮತ ಯಾಚಿಸುವಂತೆ ಸರ್ಕಾರಕ್ಕೆ ತಿಳಿಸಲು ರಾಜ್ಯಪಾಲ ಮತ್ತು ಸ್ಪೀಕರ್ ಇಬ್ಬರಿಗೂ ಸೂಚನೆ ನೀಡಿ ಎಂದು ಮನವಿ ಮಾಡಿ, ವಕೀಲ ರೋಹಟಗಿ ನಾಳೆ ಬಿಜೆಪಿ ಪರ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.

HR Ramesh | news18
Updated:July 18, 2019, 8:22 PM IST
ವಿಶ್ವಾಸಮತ ಯಾಚನೆಗೆ ಸಮಯ ನಿಗದಿಗೊಳಿಸುವಂತೆ ನಾಳೆ ಸುಪ್ರೀಂಕೊರ್ಟ್​ಗೆ ಅರ್ಜಿ ಸಲ್ಲಿಸಲು ಬಿಜೆಪಿ ನಿರ್ಧಾರ
ಸರ್ವೋಚ್ಛ ನ್ಯಾಯಾಲಯ
  • News18
  • Last Updated: July 18, 2019, 8:22 PM IST
  • Share this:
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇಂದು ಬೆಳಗ್ಗೆ 11 ಗಂಟೆಗೆ ಸಮಯವನ್ನು ನಿಗದಿಗೊಳಿಸಲಾಗಿತ್ತು. ಆದರೆ, ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ ವಿಪ್​ ಕುರಿತ ಗೊಂದಲದ ಬಗ್ಗೆ ಮೈತ್ರಿ ನಾಯಕರು ಚರ್ಚಿಸಿ, ವಿಶ್ವಾಸಮತ ಯಾಚನೆಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿದ್ದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು, ನೀವೇ ಹೇಳಿದಂತೆ ಇಂದು ವಿಶ್ವಾಸಮತ ಯಾಚಿಸಿ ಎಂದು ಪಟ್ಟು ಹಿಡಿದು ಕುಳಿತರು. ಇದರಿಂದ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ವಾಗ್ಸಮರ ನಡೆದು, ಸದನದಲ್ಲಿ ಕೋಲಾಹಲ ಏರ್ಪಟ್ಟಿತು. ಹೀಗಾಗಿ ಸದನವನ್ನು ಮೂರು ಬಾರಿ ಮುಂದೂಡಲಾಯಿತು. ದಿನವಿಡೀ ಇದೇ ಹೈಡ್ರಾಮಾ ನಡೆದಿದ್ದರಿಂದ ಸದನವನ್ನು ನಾಳೆಗೆ ಮುಂದೂಡಲಾಯಿತು.

ಅನವಶ್ಯಕವಾಗಿ ವಿಶ್ವಾಸಮತ ಯಾಚನೆಯನ್ನು ಮುಂದೂಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಇಂದು ಸದನದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಕರ್ನಾಟಕ ವಿಧಾನಸಭೆಯಲ್ಲಿ ಆಡಳಿತ ಪಕ್ಷ ವಿಶ್ವಾಸಮತ ಯಾಚನೆಗೆ ಸಮಯ ನಿಗದಿಗೊಳಿಸುವಂತೆ ಮನವಿ ಮಾಡಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಅದಕ್ಕಾಗಿ ಅರ್ಜಿ ಸಲ್ಲಿಸುವಂತೆ ವಕೀಲ ಮುಕುಲ್ ರೋಹಟಗಿ ಅವರಿಗೆ ತಿಳಿಸಿದ್ದಾರೆ.

ಇದನ್ನು ಓದಿ: ಸದನವನ್ನು ಶುಕ್ರವಾರಕ್ಕೆ ಮುಂದೂಡಿದ ಸ್ಪೀಕರ್; ಬಹುಮತ ಸಾಬೀತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿಗೆ ಕರೆಕೊಟ್ಟ ಬಿಎಸ್​ವೈ!

2018ರ ಮೇ 18ರಂದು ಬಹುಮತ ಸಾಬೀತು ಮಾಡುವಂತೆ ಸುಪ್ರೀಂಕೋರ್ಟ್​ ಆದೇಶ ನೀಡಿದಂತೆ, ಈಗಲೂ ಕಾಲಮಿತಿಯೊಳಗೆ ವಿಶ್ವಾಸ ಮತ ಯಾಚಿಸುವಂತೆ ಸರ್ಕಾರಕ್ಕೆ ತಿಳಿಸಲು ರಾಜ್ಯಪಾಲ ಮತ್ತು ಸ್ಪೀಕರ್ ಇಬ್ಬರಿಗೂ ಸೂಚನೆ ನೀಡಿ ಎಂದು ಮನವಿ ಮಾಡಿ, ವಕೀಲ ರೋಹಟಗಿ ನಾಳೆ ಬಿಜೆಪಿ ಪರ ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ.

First published: July 18, 2019, 8:20 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading