BJP Tweet: ಸಿದ್ದರಾಮಯ್ಯಗೆ ತಾಕತ್ತಿದ್ರೆ ಡಿ.ಕೆ ಶಿವಕುಮಾರ್ ವಿರುದ್ಧ ಸೆಟೆದು ನಿಲ್ಲಲಿ; ಬಿಜೆಪಿ ಸವಾಲ್

ಹಿಂದೂ ವಿರೋಧಿ ಧೋರಣೆಯಿಂದಲೇ ಸಿದ್ದರಾಮಯ್ಯ ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ. ಬದಾಮಿಯಲ್ಲೂ ಬನಶಂಕರಿಯ ಶಾಪ, ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

  • Share this:
ಬೆಂಗಳೂರು (ಜು.2): ಸಿದ್ದರಾಮೋತ್ಸಕ್ಕೆ ಭಾರೀ ವಿರೋಧ ವ್ಯಕ್ತಪಡಿಸ್ತಿರೋ ಬಿಜೆಪಿ, ಮತ್ತೆ ಸಿದ್ದರಾಮಯ್ಯಗೆ (Siddaramaiah) ಸವಾಲು ಹಾಕಿದೆ. ಬಿಜೆಪಿಗೆ ನನ್ನನ್ನು ಕಂಡ್ರೆ ಭಯ ಎಂದಿದ್ದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ (BJP) ಸಿಡಿದೆದಿದ್ದೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದರೆ ಈಗಲೇ ಡಿ.ಕೆ.ಶಿವಕುಮಾರ್ (D K Shivakumar) ವಿರುದ್ಧ ಸೆಟೆದು ನಿಲ್ಲಲಿ ಎಂದು ಬಿಜೆಪಿ ಸವಾಲು ಹಾಕಿದೆ. ಸರಣಿ ಟ್ವೀಟ್ (Tweet) ಮಾಡಿರುವ ಬಿಜೆಪಿ, ‘ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ. ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಇದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ’ ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಬಗ್ಗೆ ಬಿಜೆಪಿ ವ್ಯಂಗ್ಯ

‘ಸಿದ್ದರಾಮಯ್ಯ ಅವರು ತಳಹದಿಯಿಲ್ಲದೆ ಮಹಡಿ ಮನೆ ಕಟ್ಟಲು ಹೊರಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರಿಗೆ ಮುಂದಿನ ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಸಿಗಲಾರದ ಪರಿಸ್ಥಿತಿ ಯಾವ ನಾಯಕರಿಗೂ ಬರಬಾರದು. ಸಿದ್ದರಾಮಯ್ಯನವರೇ, ಇದಕ್ಕಾಗಿ ನಿಮ್ಮ ಬಗ್ಗೆ ನಮಗೆ ಅನುಕಂಪವಿದೆ!’ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ, ಅದು ಉತ್ತರಕುಮಾರನ ಪೌರುಷ ಅಷ್ಟೇ.


ತಾಕತ್ತು ಅನ್ನುವುದಿದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ ತಂದಿಡುವುದು ಸಾಮರ್ಥ್ಯವೇ?#ಸಿದ್ದುಹಾಸ್ಯೋತ್ಸವ


— BJP Karnataka (@BJP4Karnataka) July 2, 2022ನಿಮ್ಮ ಸಹಾಯಕ್ಕೆ ಬರಲಿಲ್ಲ ಆ ಭಾಗ್ಯ.. ಈ ಭಾಗ್ಯ

‘ಆ ಭಾಗ್ಯ, ಈ ಭಾಗ್ಯ ಎಂದು ಘೋಷಣೆ ಮಾಡಿದ್ದೇ ಬಂತು, ಜನಪ್ರಿಯತೆ, ಪ್ರಚಾರಕ್ಕಾಗಿ ಮಾಡಿದ ಯಾವ ಕಾರ್ಯವೂ ಈಗ ಸಿದ್ದರಾಮಯ್ಯ ಅವರ ಸಹಾಯಕ್ಕೆ ಬರುತ್ತಿಲ್ಲ. ಹಲವು ಬಿಟ್ಟಿ ಭಾಗ್ಯ ನೀಡಿದ ಅವರಿಗೆ ಈಗ ಕ್ಷೇತ್ರ ಭಾಗ್ಯದ ಫಲಾನುಭವಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕಿಂತ ನಾಚಿಗಗೇಡಿನ ಸಂಗತಿ ಮತ್ತೊಂದಿದೆಯೇ’ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: Siddaramaiah: ನನ್ನನ್ನು ಕಂಡ್ರೆ ಬಿಜೆಪಿ ಅವ್ರಿಗೆ ಹೊಟ್ಟೆ ಕಿಚ್ಚು, ನನ್ನ ಬರ್ತ್ ಡೇ ಕಾರ್ಯಕ್ರಮಕ್ಕೆ ಅವ್ರನ್ನ ಕರೆಯೋದಿಲ್ಲ

 ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ನಾಂದಿ

‘ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಮತ್ತಷ್ಟು  ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಿದ್ದರಾಮಯ್ಯ ನಾಂದಿ ಹಾಡುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಿದ್ದರಾಮಯ್ಯ ಹೆಸರು ಘೋಷಿಸದೇ ಇದ್ದಲ್ಲಿ, ಆರು ಪಕ್ಷ ಬಿಟ್ಟು ಬಂದಿರುವ ಸಿದ್ದರಾಮಯ್ಯಗೆ ಏಳನೇ ಬಾರಿ ಪಕ್ಷಾಂತರ ಮಾಡುವುದು ಕಷ್ಟವೇ’ ಎಂದು ಬಿಜೆಪಿ ಟೀಕಿಸಿದೆ.

ಸಿದ್ದರಾಮಯ್ಯ ಅವರೇ, ಆ ಧರ್ಮರಾಯನ ಹಿಂದೆಯೇ ಯಾರೂ ಬರಲಿಲ್ಲ, ನಿಮ್ಮಂತಹ ಅಧರ್ಮರಾಯನ ಹಿಂದೆ ಯಾರು ತಾನೇ ನಿಲ್ಲಬಲ್ಲರು. ನಿಮ್ಮ ಉತ್ಸವ ನಾಲ್ಕು ಕುರ್ಚಿಗಳನ್ನು ತುಂಬಬಹುದೇ ಹೊರತು, ನಾಲ್ಕು ಸೀಟುಗಳನ್ನು ಗಳಿಸಿ ಕೊಡದು. ಮೂಲ ಕಾಂಗ್ರೆಸ್ಸಿಗರು ನಿಮ್ಮಿಂದಾಗಿಯೇ ಪಕ್ಷ ತೊರೆಯುತ್ತಿರುವುದು ನಿಜವಲ್ಲವೇ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು

ಹಿಂದೂ ವಿರೋಧಿ ಧೋರಣೆಯಿಂದಲೇ ಸಿದ್ದರಾಮಯ್ಯ ಅವರಿಗೆ ರಾಜಕೀಯ ಹಿನ್ನಡೆಯಾಗುತ್ತಿದೆ. ಚಾಮುಂಡೇಶ್ವರಿಯಲ್ಲಿ ದೇವಿ ಕೈಹಿಡಿಯಲಿಲ್ಲ. ಬದಾಮಿಯಲ್ಲೂ ಬನಶಂಕರಿಯ ಶಾಪ, ಸವದತ್ತಿ ಎಲ್ಲಮ್ಮನೂ ನಿಮ್ಮನ್ನು ಕಾಪಾಡಲಾರಳು, ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ! #ಸಿದ್ದುಹಾಸ್ಯೋತ್ಸವ ಎಂಬ ಹ್ಯಾಷ್ಟ್ಯಾಗ್ ಉಲ್ಲೇಖಿಸಿ ಬಿಜೆಪಿ ಲೇವಡಿ ಮಾಡಿದೆ.

ಇದನ್ನೂ ಓದಿ: Kumaraswamy: ದೇವೇಗೌಡರು ಭೀಷ್ಮಾಚಾರ್ಯರಿದ್ದಂತೆ; ಯಾರೋ ಹೇಳಿದ ಮಾತ್ರಕ್ಕೆ ಸಾವು ಬರೋದಿಲ್ಲ

ನಿಮ್ಮ ಸರ್ಕಾರದ ಸಾಧನೆ ಏನಿತ್ತು?

ಸಿದ್ದರಾಮಯ್ಯ ಅವರೇ ನಿಮ್ಮ ಸರ್ಕಾರ ಮೂರು ವರ್ಷ ಪೂರೈಸಿದಾಗ "ವರ್ಷ ಮೂರು, ಸಾಧನೆ ನೂರಾರು" ಎಂದು ಪುಸ್ತಕ ಬರೆಸಿಕೊಂಡಿದ್ದು ಯಾವ ಸಾಧನೆಗಾಗಿ? ಹಿಂದು ಕಾರ್ಯಕರ್ತರ ಕೊಲೆ ಹಾಗೂ ರೈತರ ಆತ್ಮಹತ್ಯೆ ಬಿಟ್ಟರೆ ನಿಮ್ಮ ಸರ್ಕಾರದ ಸಾಧನೆ ಏನಿತ್ತು? ಸರಣಿ ಸಾವಿಗೆ ಕಾರಣವಾಗಿದ್ದು ನಿಮ್ಮ ಸಾಧನೆಯೇ ಎಂದು ಬಿಜೆಪಿ ಟೀಕೆ ಮಾಡಿದೆ.
Published by:Pavana HS
First published: