ಕಮಲಕ್ಕೆ ಜೆಡಿಎಸ್​ನ ಮೂವರು ಬೆಂಬಲ; ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ 

ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಪರವಾಗಿ ಜೆಡಿಎಸ್‍ನ ಮೂವರು ಮತಚಲಾಯಿಸಿದ್ದರಿಂದ ಬಿಜೆಪಿಯ ಜಯವರ್ಧನ್ ಅಧ್ಯಕ್ಷರಾಗಿಯೂ, ಜೆಡಿಎಸ್‍ನ ಸುರೇಯಾಬಾನು ಉಪಾಧ್ಯಕ್ಷರಾಗಿಯೂ ಆಯ್ಕೆಯಾದರು.

ಬಿಜೆಪಿಯ ಜಯವರ್ಧನ್ ಅಧ್ಯಕ್ಷರಾಗಿ, ಜೆಡಿಎಸ್‍ನ ಸುರೇಯಾಬಾನು ಉಪಾಧ್ಯಕ್ಷರಾಗಿ ಆಯ್ಕೆ

ಬಿಜೆಪಿಯ ಜಯವರ್ಧನ್ ಅಧ್ಯಕ್ಷರಾಗಿ, ಜೆಡಿಎಸ್‍ನ ಸುರೇಯಾಬಾನು ಉಪಾಧ್ಯಕ್ಷರಾಗಿ ಆಯ್ಕೆ

  • Share this:
ಕೊಡಗು(ನ.03): ಚುನಾವಣೆ ನಡೆದು ಎರಡು ವರ್ಷಗಳ ಬಳಿಕ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿ ಬಿಜೆಪಿ ತೆಕ್ಕೆಗೆ ಹೋಗಿದೆ. ಹೌದು ತೀವ್ರ 16 ಸ್ಥಾನ ಬಲವುಳ್ಳ ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಆರು ಸ್ಥಾನಗಳನ್ನು ಹೊಂದಿದ್ದರೆ, ಜೆಡಿಎಸ್ ನಾಲ್ಕು ಸ್ಥಾನಗಳಲ್ಲಿ ಗೆದ್ದು ಕಿಂಗ್ ಮೇಕರ್ ಆಗಿತ್ತು. ಆದರೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಪರವಾಗಿ ಜೆಡಿಎಸ್‍ನ ಮೂವರು ಮತಚಲಾಯಿಸಿದ್ದರಿಂದ ಬಿಜೆಪಿಯ ಜಯವರ್ಧನ್ ಅಧ್ಯಕ್ಷರಾಗಿಯೂ, ಜೆಡಿಎಸ್‍ನ ಸುರೇಯಾಬಾನು ಉಪಾಧ್ಯಕ್ಷರಾಗಿಯೂ ಆಯ್ಕೆಯಾದರು. ಈ ವಿಷಯ ತಿಳಿಯುತ್ತಿದ್ದಂತೆ ಹೊರಗೆ ನಿಂತಿದ್ದ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರು ಬಿಜೆಪಿ ಪರವಾಗಿ ಮತ ಚಲಾಯಿಸಿದ ಸದಸ್ಯರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಪ್ರತಿಭಟಿಸುತ್ತಿದ್ದ ಜೆಡಿಎಸ್ ಕಾಯಕರ್ತರನ್ನು ಪೊಲೀಸ್ರು ಸಮಾಧಾನ ಮಾಡಲು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಶಾಸಕ ಅಪ್ಪಚ್ಚು ರಂಜನ್ ಜೆಡಿಎಸ್ ನ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರ ಸಹಕಾರದಿಂದ ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ ಎಂದರು.

ನವದೆಹಲಿ: ಆಸ್ಪತ್ರೆಯ ಪಾರ್ಕಿಂಗ್ ಏರಿಯಾದಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಇನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಪ್ರಜ್ವಲ್ ರೇವಣ್ಣ ಅವರು ಯಾವುದೇ ಕಾರಣಕ್ಕೂ ಈ ರೀತಿ ಮಾಡಿರಲು ಸಾಧ್ಯವಿಲ್ಲ. ಬಿಜೆಪಿಯೊಂದಿಗೆ ಕೈ ಜೋಡಿಸುವುದಾದರೆ ಕೊನೆ ಪಕ್ಷ ನನ್ನ ಜೊತೆಯಲ್ಲಾದರೂ ಮಾತನಾಡುತ್ತಿದ್ದರು. ಆದರೆ ಜೆಡಿಎಸ್ ನ ಮೂವರು ಸದಸ್ಯರು 15 ರಿಂದ 20 ಲಕ್ಷಕ್ಕೆ ಸೇಲ್ ಆಗಿ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಸಸ್ಪೆಂಡ್ ಮಾಡಿದ್ದೇವೆ ಎಂದರು.

ಒಟ್ಟಿನಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿಗೆ ಮೊದಲೇ ಮಾತುಕತೆ ನಡೆದಿದ್ದರೂ ಜೆಡಿಎಸ್ ನ ಮೂವರು ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಬಿಜೆಪಿ ಸುಲಭವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿದಿದೆ.
Published by:Latha CG
First published: