Siddaramaiah: ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ, ಕಾಂಗ್ರೆಸ್-ಬಿಜೆಪಿ ಪ್ರತಿಭಟನೆ

ಮಡಿಕೇರಿಗೆ ಆಗಮಿಸಿದ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಘಟನೆಯೂ ನಡೆದಿದೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • Share this:
ನೆರೆಪೀಡಿತ ಪ್ರದೇಶಗಳ ಪರಿಶೀಲನೆಗೆ ಕೊಡಗು (Kodagu) ಜಿಲ್ಲೆಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaiah) ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ತಿತಿಮತಿಯಲ್ಲಿ ನೆರೆ ವೀಕ್ಷಣೆ ಮುಗಿಸಿ ಬಳಿಕ ಮಡಿಕೇರಿ ಕಡೆಗೆ ಸಿದ್ದರಾಮಯ್ಯ ಆಗಮಿಸುತ್ತಿದ್ದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಆಗಮಿಸಿದಾಗ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ (Car) ಮೊಟ್ಟೆ (Egg) ಎಸೆದಿದ್ದಾರೆ. ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಿದ್ದರಾಮಯ್ಯನವರಿಗೆ ಘೇರಾವ್ ಹಾಕಿ ಧಿಕ್ಕಾರ ಕೂಗಿದರು. ಕಪ್ಪು ಪಟ್ಟಿ (Black Belt) ಪ್ರದರ್ಶಿಸಿ (Show) ಆಕ್ರೋಶ ಹೊರಹಾಕಿದರು. ಕೊಡವ ವಿರೋಧಿ ಸಿದ್ದರಾಮಯ್ಯಗೆ ಧಿಕ್ಕಾರ ಘೋಷಣೆ ಕೂಗಿದರು.

ಕೊಡಗಿನಲ್ಲಿ ಮಳೆಯಿಂದ ಅವಾಂತರಗಳು ಸಂಭವಿಸಿದೆ. ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗಿನಲ್ಲಿ ನೆರೆ ವೀಕ್ಷಣೆಗೆ ಆಗಮಿಸಿದ್ದಾರೆ. ಆದರೆ ಮಡಿಕೇರಿಗೆ ಆಗಮಿಸಿದ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೆಚ್ಚಾಗಿದೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ!

ಕೊಡಗಿನ ತಿತಿಮತಿಯಲ್ಲಿ ಪ್ರವಾಹದಿಂದ ಹಾನಿಯಾದ ಪ್ರದೇಶಗಳ ವೀಕ್ಷಣೆ ಮಾಡಿದರು. ಬಳಿಕ ಅಲ್ಲಿಂದ ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದರು. ಸಿದ್ದರಾಮಯ್ಯ ಮಳೆಹಾನಿ ಪ್ರದೇಶಗಳ ವೀಕ್ಷಿಸಿ ಮಡಿಕೇರಿಗೆ ಬರುತ್ತಿದ್ದಾಗ ಘಟನೆ ನಡೆದಿದೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಬಿಜೆಪಿ ಯುವ ಮೋರ್ಚಾದಿಂದ ಘೇರಾವ್; ಭದ್ರತಾ ವೈಫಲ್ಯಕ್ಕೆ ಕಾರಣರಾದ್ರಾ ಪೊಲೀಸರು?

ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಸುದರ್ಶನ್ ಗೆಸ್ಟ್ ಹೌಸ್​​ವರೆಗೆ ಮೆರವಣಿಗೆ ನಡೆಸಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದರು. ಪೊನ್ನಣ್ಣ ಮತ್ತು ಮಂಥರ್ ಗೌಡ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.

ಇದನ್ನೂ ಓದಿ: ರಾಯಚೂರು ತೆಲಂಗಾಣಕ್ಕೆ ಸೇರ್ಬೇಕು; ಕಿಡಿ ಹೊತ್ತಿಸಿದ ಕೆ ಚಂದ್ರಶೇಖರ್ ರಾವ್​

‘ಕೈ’ ಕಾರ್ಯಕರ್ತರ ಮನವೊಲಿಸಿದ ಎಸ್ಪಿ

ಒಂದೆಡೆ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಪ್ರತಿಭಟನೆ ನಡೆಸ್ತಿದ್ದಾರೆ. ಬಿಜೆಪಿಯವರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕ್ತಿದ್ದಾರೆ. ಬರಲಿ ನೋಡೋಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾರೆ. ಕಾಂಗ್ರೆಸ್ ಮುಖಂಡ ಎ.ಎಸ್.ಪೊನ್ನಣ್ಣ ಜೊತೆ ಮಾತುಕತೆ ನಡೆಸಿದ ಎಸ್ಪಿ ಅಯ್ಯಪ್ಪ, ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಸಿದರು.

‘ಕೊಡಗಿಗೆ ಸಿದ್ದರಾಮಯ್ಯ ಬರುವುದು ಬೇಡ’

ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೆಚ್ಚಾಗಿದೆ. ಶಾಂತಿಪ್ರಿಯ ಕೊಡಗಿಗೆ ಸಿದ್ದರಾಮಯ್ಯ ಬರುವುದು ಬೇಡ. ಸಿದ್ದರಾಮಯ್ಯ ಕೊಡಗಿನಲ್ಲಿ ಕೋಮುಗಲಭೆ ಬೆಳೆಸಿದರು. ಕೊಡವರು ದನದ ಮಾಂಸ ತಿನ್ನುತ್ತಾರೆ ಅಂತಾ ಹೇಳಿದ್ರು. 7 ವರ್ಷದ ಹಿಂದೆ ಟಿಪ್ಪು ಜಯಂತಿಯನ್ನು ಬಲವಂತವಾಗಿ ಹೇರಿದರು. ಅಂತಹವರು ಕೊಡಗಿಗೆ ಬರುವುದು ಬೇಡ ಅಂತಾ ಬಿಜೆಪಿ ನಗರ ಘಟಕದ ಉಪಾಧ್ಯಕ್ಷ ಜಗದೀಶ್ ಹೇಳಿದ್ದಾರೆ.

ಮಡಿಕೇರಿಯಲ್ಲೂ ಸಿದ್ದರಾಮಯ್ಯ ವಿರುದ್ಧ ಘೋಷಣೆ

ಸಿದ್ದರಾಮಯ್ಯ ವಿರುದ್ದ ಮಡಿಕೇರಿಯಲ್ಲೂ ಆಕ್ರೋಶ ವ್ಯಕ್ತವಾಯ್ತು. ಮಡಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೊಡಗಿನ ವಿರೋಧಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿದರು. ಇದೇ ವೇಳೆ ಸಿದ್ದರಾಮಯ್ಯನವರಿಗೆ ಸ್ವಾಗತ ಕೋರಿ ಹಾಕಿದ್ದ ಬ್ಯಾನರ್ ಹರಿದು ಆಕ್ರೋಶ ಹೊರಹಾಕಿದ್ರು.

ಪ್ರತಿಭಟನೆ ನಡೆಸಿದವರು ಹೇಡಿಗಳು- ಸಿದ್ದರಾಮಯ್ಯ

ಬಿಜೆಪಿ ಪ್ರತಿಭಟನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇದು ಹೇಡಿಗಳು ಮಾಡುತ್ತಿರುವ ಪ್ರತಿಭಟನೆ. ಕೊಡಗಿನ ಎಲ್ಲಾ ಕಡೆ ಬಿಜೆಪಿಯವರು ಕಳಪೆ ಕಾಮಗಾರಿ ಮಾಡಿದ್ದರಿಂದ ಈ ಸಮಸ್ಯೆ ಆಗಿದೆ. ಇದನ್ನು ನನಗೆ ನೋಡಲು ಬಿಡಬಾರದು ಎಂದು ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ದುಡ್ಡು ಕೊಟ್ಟು ಜನರನ್ನು ಕರೆತಂದು ಪ್ರತಿಭಟನೆ ಮಾಡಿಸಿದೆ ಅಂತಾ ಆರೋಪಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಕೊಡಗಿನ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಇದರಿಂದ ಹತಾಶರಾಗಿ ಬಿಜೆಪಿ ಪ್ರತಿಭಟನೆ ಮಾಡಿದೆ. ನಮ್ಮ ಕಾರ್ಯಕರ್ತರು ಮನಸು ಮಾಡಿದರೆ ಕೊಡಗಿನಲ್ಲಿ ಬಿಜೆಪಿಯ ಯಾವ ಮಿನಿಸ್ಟರ್ ಕೂಡ ಓಡಾಡುವುದಕ್ಕೆ ಬಿಡಲ್ಲ. ಆದರೆ ಅದು ನಮ್ಮ ಸಂಸ್ಕೃತಿ ಅಲ್ಲ. ಬಿಜೆಪಿಯವರನ್ನು ಜನರೇ ಸೋಲಿಸಲಿದ್ದಾರೆ ಅಂತಾ ಎಚ್ಚರಿಸಿದರು.
Published by:Thara Kemmara
First published: