Murder: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್​ ಬರ್ಬರ ಹತ್ಯೆ; ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ

ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ

ಕೊಲೆಯಾದ ಪ್ರವೀಣ್

ಕೊಲೆಯಾದ ಪ್ರವೀಣ್

  • Share this:
ದಕ್ಷಿಣ ಕನ್ನಡ (ಜು.26): ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ (Sulya) ತಾಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್​ ಹತ್ಯೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು (32) ಕೊಲೆಯಾದ ದುರ್ದೈವಿ. ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ನಡೆಸುತ್ತಿದ್ದನು. ಬೆಳ್ಳಾರೆ ಪೇಟೆಯಲ್ಲಿ ತನ್ನ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ಸಾವು

ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು  ಹತ್ಯೆಗೈದು ಪರಾರಿಯಾಗಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೊಲೆ ಆರೋಪಿಗಳಿಗಾಗಿ ತಲಾಶ್‌

ಆರೋಪಿಗಳಿಗಾಗಿ ಬಲೆ ಬೀಸಿರುವ ಪೊಲೀಸರು ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿದ್ದಾರೆ. ನಾಕಾಬಂದಿ ಹಾಕಿ ಕೊಲೆ ಆರೋಪಿಗಳಿಗಾಗಿ ತಲಾಶ್‌ ನಡೆಸುತ್ತಿದ್ದಾರೆ.

ಇದನ್ನೂ ಓದಿ: Pramoda Devi Wadiyar: ಬೇಬಿ ಬೆಟ್ಟ ವಿವಾದ, ಸರ್ಕಾರದ ವಿರುದ್ಧ 'ರಾಜಮಾತೆ' ಗರಂ; ಯಾಕಿಷ್ಟು ಹಿಂಸೆ ಕೊಡುತ್ತಿದ್ದೀರಾ?

ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ
ಪುತ್ತೂರಿನಲ್ಲಿ ಪ್ರವೀಣ್ ಹತ್ಯೆ ಹಿನ್ನಲೆ ಪರಿಸ್ಥಿತಿ ಬಿಗಡಾಯಿಸಿದ್ದು, ಪುತ್ತೂರಿನಾದ್ಯಂತ 144 ಸೆಕ್ಷನ್ ಜಾರಿ ಮಾಡುವಂತೆ ಸೂಚನೆ ನೀಡಿದ್ದಾಗ  ಡಿಜಿ ಐಜಿಪಿ ಪ್ರವೀಣ್ ಸೂದ್ ರಿಂದ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಗೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಲಾ ಅಂಡ್ ಆರ್ಡರ್ ಸಮಸ್ಯೆ ಆಗದಂತೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಬೇಕಾದರೆ ಪಕ್ಕದ ಜಿಲ್ಲೆ ಅಥವಾ ಮಂಗಳೂರು ಸಿಟಿಯಿಂದ ನಿಯೋಜನೆ ಮಾಡುವಂತೆ   ಡಿಜಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.


ಮಸೂದ್ ಎಂಬ ಯುವಕನ ಕೊಲೆ


ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆಯಾಗಿತ್ತು‌ ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್(18) ಮೇಲೆ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬವರು ಹಲ್ಲೆ ನಡೆಸಿದ್ದರು. ‌ಜು.19ರಂದು ಸುಧೀರ್ ಎಂಬಾತ ಮಸೂದ್ ಕೈ ತಾಗಿದ ಕಾರಣಕ್ಕೆ ಹಲ್ಲೆ ನಡೆಸಿದ್ದ. ಆ ಬಳಿಕ ಸ್ಥಳೀಯ ಹನೀಫ್ ಎಂಬವನ ಮೂಲಕ ಮಸೂದ್‌ ನನ್ನ ರಾಜಿ ಮಾತುಕತೆ ಕರೆದಿದ್ದಾರೆ.‌ ಹೀಗಾಗಿ ಮಸೂದ್ ಸೂಚಿಸಿದ ಸ್ಥಳಕ್ಕೆ ಬಂದಿದ್ದ ವೇಳೆ ಬಾಟಲಿಯಿಂದ ತಲೆಗೆ ಹಲ್ಲೆ ನಡೆಸಿದ್ದು,‌ ಚಿಕಿತ್ಸೆ ಫಲಿಸದೇ ಮಸೂದ್ ಸಾವನ್ನಪ್ಪಿದ್ದ. ಹೀಗಾಗಿ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಬಿಜೆಪಿ ಮುಖಂಡನ ಕೊಲೆ ಶಂಕೆ ವ್ಯಕ್ತವಾಗಿದೆ. ‌

ಇದನ್ನೂ ಓದಿ: Congress Leaders: ಇದು ಬಿಜೆಪಿ ಭ್ರಷ್ಟೋತ್ಸವ, ಈ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ

ಬಿಜೆಪಿ ಕಾರ್ಯಕರ್ತನನ್ನು ಕೊಚ್ಚಿ ಹತ್ಯೆ

ಚಿಕ್ಕೋಡಿ:  ಹಳೆಯ ವೈಷಮ್ಯ ಹಿನ್ನೆಲೆ ಮಾರಕಾಸ್ತ್ರದಿಂದ ಬಿಜೆಪಿ ಕಾರ್ಯಕರ್ತನನ್ನು ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದಲ್ಲಿ ನಡೆದಿದೆ. ಹಿಡಕಲ್ ಡ್ಯಾಂ ಸಮೀಪದ ಹೊಸಪೇಟ ನಿವಾಸಿ ಪರಶುರಾಮ ಹಲಕರ್ಣಿ(32) ಕೊಲೆಯಾದ ವ್ಯಕ್ತಿ. ಪರುಶುರಾಮನನ್ನು ಮೂವರು ದುಷ್ಕರ್ಮಿಗಳು ಸೇರಿ ಗ್ರಾಮದ ಆಂಜನೇಯನ ಮಂದಿರದ ಹತ್ತಿರ ವಾಹನವನ್ನು ನಿಲ್ಲಿಸಿ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಮೂವರು ಆರೋಪಿಗಳಲ್ಲಿ ಮಂಜುನಾಥ್ ಪುಟ್ಜನೆ(24) ಹಾಗೂ ಕೆಂಪಣ್ಣ ನೆಸರಗಿ(30) ಪೊಲೀಸರಿಗೆ ಶರಣಾಗಿದ್ದು, ಇನ್ನೊಬ್ಬ ಆರೋಪಿ ಬಸವರಾಜ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಲು ಜಾಲ ಬೀಸಿದ್ದಾರೆ. ಹತ್ಯೆಗೊಳಗಾದ ಯುವಕ ಕಿರಾಣಿ ಅಂಗಡಿ ವ್ಯಾಪಾರಿಯಾಗಿದ್ದನು.
Published by:Pavana HS
First published: