ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿ.ಕೆ. ಹರಿಪ್ರಸಾದ್ ಔಟ್; ಸಿದ್ದರಾಮಯ್ಯಗೆ ಮೇಲುಗೈ?
ಈ ಹಿಂದೆ ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಬಿ.ಕೆ. ಹರಿಪ್ರಸಾದ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರುತ್ತಿದ್ದರು. ಪ್ರತೀ ಚುನಾವಣೆಯಲ್ಲೂ ಅವರ ಭಾಷಣ ಇರುತ್ತಿತ್ತು. ಈಗ ಅವರ ಹೆಸರನ್ನು ಕೈಬಿಡಲಾಗಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
news18 Updated:November 20, 2019, 10:12 PM IST

ಬಿ.ಕೆ. ಹರಿಪ್ರಸಾದ್
- News18
- Last Updated: November 20, 2019, 10:12 PM IST
ಬೆಂಗಳೂರು(ನ. 20): ಸಿದ್ದರಾಮಯ್ಯ ಅವರನ್ನು ಪಕ್ಷದೊಳಗೆ ಬಹಳ ವಿರೋಧ ಮಾಡಿಕೊಂಡು ಬಂದಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಅಂದರೆ, 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಹರಿಪ್ರಸಾದ್ ಅವರ ಭಾಷಣ ಇರುವುದಿಲ್ಲ. ಈ ಉಪಸಮರದಲ್ಲಿ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹರಿಪ್ರಸಾದ್ ಅವರನ್ನ ಕೈಬಿಡುವುದು ಕೆಪಿಸಿಸಿಯ ನಿರ್ಧಾರವಾಗಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಲತಾ ಅವರಿಗೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಇಲ್ಲವಾಗಿದೆ.
ಈ ಹಿಂದೆ ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಬಿ.ಕೆ. ಹರಿಪ್ರಸಾದ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿರುತ್ತಿದ್ದರು. ಪ್ರತೀ ಚುನಾವಣೆಯಲ್ಲೂ ಅವರ ಭಾಷಣ ಇರುತ್ತಿತ್ತು. ಈಗ ಅವರ ಹೆಸರನ್ನು ಕೈಬಿಡಲಾಗಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧವೇ ಪ್ರಚಾರ; 4 ಕಾಂಗ್ರೆಸ್ ಕಾರ್ಪೊರೇಟರ್ಗಳ ಉಚ್ಛಾಟನೆಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ನಿರಂತರವಾಗಿ ವಿರೋದ ಮಾಡಿಕೊಂಡು ಬಂದಿದ್ದಾರೆ. ವಲಸಿಗರಾಗಿರುವ ಸಿದ್ದರಾಮಯ್ಯಗೆ ಹೆಚ್ಚು ಪ್ರಾಶಸ್ತ್ಯ ಸಿಗುತ್ತಿದೆ. ಅವರಿಂದ ಮೂಲ ಕಾಂಗ್ರೆಸ್ಸಿಗರು ಮೂಲೆಗುಂಪಾಗುತ್ತಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಹಲವು ಬಾರಿ ಆಂತರಿಕವಾಗಿ ಧ್ವನಿ ಎತ್ತಿದ್ದರು. ಇತ್ತೀಚೆಗೆ ನಡೆದಿದ್ದ ಹಿರಿಯ ಮುಖಂಡರ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ಕೂಡ ಮಾಡಿದ್ದರು. ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯ ವಿರುದ್ಧ ಲಾಬಿ ಕೂಡ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆಯಾ ಎಂಬುದು ಪ್ರಶ್ನೆಯಾಗಿದೆ.
(ವರದಿ: ಚಿದಾನಂದ ಪಟೇಲ್)
ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್ಬುಕ್ ಮೆಸೆಂಜರ್ನಲ್ಲಿ ಸಬ್ಸ್ಕ್ರೈಬ್ ಮಾಡಿ.