• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Black Friday: ರಾಜ್ಯದ ಪಾಲಿಗೆ ಇಂದು ಬ್ಯಾಡ್ ಫ್ರೈಡೇ! ಪ್ರತ್ಯೇಕ ಅಪಘಾತಗಳಲ್ಲಿ ಮಕ್ಕಳು, ಮಹಿಳೆಯರು ಸೇರಿ 15 ಮಂದಿ ಸಾವು

Black Friday: ರಾಜ್ಯದ ಪಾಲಿಗೆ ಇಂದು ಬ್ಯಾಡ್ ಫ್ರೈಡೇ! ಪ್ರತ್ಯೇಕ ಅಪಘಾತಗಳಲ್ಲಿ ಮಕ್ಕಳು, ಮಹಿಳೆಯರು ಸೇರಿ 15 ಮಂದಿ ಸಾವು

ಅಪಘಾತ ನಡೆದ ಸ್ಥಳದ ದೃಶ್ಯ

ಅಪಘಾತ ನಡೆದ ಸ್ಥಳದ ದೃಶ್ಯ

ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ನಡೆದಿದೆ.

  • Share this:

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ನಡೆದ ಅಪಘಾತ (Accident) ದುರಂತಗಳಲ್ಲಿ ಬರೋಬ್ಬರಿ 15 ಮಂದಿ ಸಾವನ್ನಪ್ಪಿದ್ದಾರೆ. ಇನೋವಾ ಕಾರು (Innova Car) ಹಾಗೂ ಖಾಸಗಿ ಬಸ್ (Private Bus) ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ಹಿರೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ, ಬೆಂಗಳೂರು (Bengaluru) ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಭೇಟಿ ಪರಿಶೀಲನೆ.


ಮೃತರನ್ನು ಗೋವಿಂದನಾಯಕ್ (58), ತಿಪ್ಪಮ್ಮ(52), ರಾಜೇಶ್ (35) ದಿನೇಶ್(12), ಪಿಂಕಿ(15) ಎಂದು ಗುರುತಿಸಲಾಗಿದೆ. ಇನ್ನು ಬಸ್​​ನಲ್ಲಿದ್ದ ಶ್ರೀಕಂಠಪ್ಪ (78), ಮಂಜುನಾಥ (45) ಬುಡ್ಡಮ್ಮ (45) ಭಾಗ್ಯಮ್ಮ (38) ಎಂಬ ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲರಿಗೂ ತಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತಿದೆ.


ಸರ್ಕಾರಿ ಬಸ್​-ಕಾರಿನ ನಡುವೆ ಭೀಕರ ಅಪಘಾತ


ಸರ್ಕಾರಿ ಬಸ್​​ಗೆ ಕಾರು ಡಿಕ್ಕಿ, 6 ಮಂದಿ ಸಾವು


ಇನ್ನು, ಸರ್ಕಾರಿ ಬಸ್ (Government Bus)​​ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸಂಪಾಜೆ ಗೇಟ್ ಬಳಿ ನಡೆದಿದೆ. ಮೃತರೆಲ್ಲರೂ ಕಾರಿನಲ್ಲಿದ್ದ ಪ್ರಯಾಣಿಕರು ಎಂಬ ಮಾಹಿತಿ ಲಭ್ಯವಾಗಿದ್ದು, ಮೂರು ಮಕ್ಕಳು, ಇಬ್ಬರು ಮಹಿಳೆ ಮತ್ತು ಓರ್ವ ಪುರುಷ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.


ಇದನ್ನೂ ಓದಿ: JDS Hassan Ticket: ಹಾಸನ ಟಿಕೆಟ್​ ಗಿಟ್ಟಿಸಿಕೊಂಡ ಸ್ವರೂಪ್​ ಯಾರು? ಭವಾನಿ ಭಿನ್ನಮತದ ನಡುವೆ ಗೆದ್ದು ಬೀಗುತ್ತಾರಾ?


ಮಂಡ್ಯದ ಮದ್ದೂರು ಮೂಲದ ಕಾರಿನಲ್ಲಿ ಮಡಿಕೇರಿಯಿಂದ ಸುಳ್ಯ ಕಡೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಸರ್ಕಾರಿ ಬಸ್​​ಗೆ ಸಂಪಾಜೆ ಗೇಟ್ ಬಳಿ ಅಪಘಾತ ಸಂಭವಿಸಿದೆ. ಕಾರಿನ ಬಾನೆಟ್ ಕಾರಿನ ಬೋನೆಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯರು ಯುವಕರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವನ್ನು ನಡೆಸಲಾಗಿತ್ತು, ಆದರೆ ಆಸ್ಪತ್ರೆ ಸೇರುವ ಮುನ್ನವೇ ಮಕ್ಕಳು ಸಾವನ್ನಪ್ಪಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.




ನೀರಿನಲ್ಲಿ ಮುಳುಗಿ ನಾಲ್ವರು ಯುವಕರು ಸಾವು


ಘಟಪ್ರಭಾ ನದಿಯಲ್ಲಿ (Ghataprabha River) ಈಜಲು ಹೋಗಿದ್ದ ನಾಲ್ವರು ಯುವಕರು ನೀರುಪಾಲಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ತಾಲೂಕಿನ ದುಪದಾಳ ಬಳಿಯ ಘಟಪ್ರಭಾ ನದಿ ಬಳಿ ನಡೆದಿದೆ. ಮೃತ ನಾಲ್ವರೂ ಉತ್ತರ ಕನ್ನಡದ ಮುಂಡಗೋಡ ತಾಲೂಕಿನ ಹಿರಿಗೆರೆ ಗ್ರಾಮದ ನಿವಾಸಿಗಳಾಗಿದ್ದು, ಮೃತ ಯುವಕರು ಘಟಪ್ರಭಾ ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರೆಂಬ ಮಾಹಿತಿ ಲಭ್ಯವಾಗಿದೆ.

top videos


    ಬಾರ್ ರಜೆ ಇದ್ದಿದ್ದರಿಂದ ಈಜಲು ಹೋಗಿದ್ದ ಸಂತೋಷ ಬಾಬು ಇಟಗಿ (18), ಅಜಯ್ ಬಾಬು ಜೋರೆ (18), ಕೃಷ್ಣಾ ಬಾಬು ಜೋರೆ (22), ಆನಂದ ಕೋಕರೆ (19) ಮೃತ ದುರ್ದೈವಿಗಳಾಗಿದ್ದಾರೆ. ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು