ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಡಿಕ್ಕಿಯಾಗಿ ಕಂಡಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಯಲಹಂಕ (Yelahanka) ನಾಲ್ಕನೇ ಹಂತದ ಬಸ್ ನಿಲ್ದಾಣದ ಡಿಪೋ ನಂಬರ್ 30 ರಲ್ಲಿ ನಡೆದಿದೆ. 59 ವರ್ಷದ ಸೋಮಶೇಖರ್ ಮೃತ ಕಂಡಕ್ಟರ್ (Conductor) ಆಗಿದ್ದಾರೆ. ಕರ್ತವ್ಯದಲ್ಲಿದ್ದ ಕಂಡಕ್ಟರ್ ಬಸ್ ನಿಲ್ದಾಣದಲ್ಲಿ (Bus Stop) ಟಿಕೆಟ್ ಕಲೆಕ್ಟರ್ಗೆ ಹಣ ಲೆಕ್ಕ ನೀಡಿ ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಕಂಡಕ್ಟರ್ಗೆ ಡಿಕ್ಕಿಯಾಗಿದ್ದು, ಬಳಿಕ ಬಸ್ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ಯಲಹಂಕ ಸಂಚಾರಿ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ 4:30ಕ್ಕೆ ನಡೆದ ಘಟನೆ ನಡೆದಿದ್ದು, ಮೃತರು 402b/10 ನಂಬರ್ ಬಸ್ ನ ಕಂಡಕ್ಟರ್ ಆಗಿದ್ದರು.
ಮೃತ ಸೋಮಶೇಖರ್ ಇಡೀ ದಿನ ಅದೇ ಬಸ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕರ್ತವ್ಯ ನಿರ್ವಹಿಸ್ತಿದ್ದ ಬಸ್ಗೆ ಕಂಡಕ್ಟರ್ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: 2023 ಕರ್ನಾಟಕ ಚುನಾವಣೆ: ತಾಯಿ ನಿಧನರಾದರೂ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಕಾನ್ಸ್ಸ್ಟೇಬಲ್!
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಬಸ್ ಕಂಡಕ್ಟರ್ಗೆ ಡಿಕ್ಕಿಯಾಗುತ್ತಿದ್ದಂತೆ ಸ್ಥಳದಿಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕ ಮೌನೇಶ್ ತಳವಾರ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿ ಚಾಲಕನಿಗೆ ಹುಡುಕಾಟ ನಡೆಸಿದ್ದಾರೆ.
ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು
ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. ಮುದಿಗೆರೆ ಗ್ರಾಮದ ಗಣೇಶ್ (16) ಹೇಮಂತ್ (15) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಬ್ಬರ ಮೃತದೇಹ ಚನ್ನಗಿರಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಕ್ಕಳ ಸಾವಿನಿಂದ ಪಾಲಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ