BMTC Guidelines: ಬಿಎಂಟಿಸಿ ಬಸ್ಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ; ಜೊತೆಗೆ ಈ ಎಲ್ಲಾ ರೂಲ್ಸ್ ಪಾಲಿಸಲೇಬೇಕು
Weekend Curfew in Bangalore 2022: ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬಿಎಂಟಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇನ್ಮುಂದೆ ಬಿಎಂಟಿಸಿ ಬಸ್ ಏರುವ ಮುನ್ನ ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಲೇಬೇಕು.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Corona) ಹಾಗೂ ಓಮಿಕ್ರಾನ್(Omicron) ಪ್ರಕರಣಗಳ ಹೆಚ್ಚಾದ ಹಿನ್ನೆಲೆಯಲ್ಲಿ ನಿನ್ನೆ ತಜ್ಞರ ಜೊತೆ ಸಭೆ ನಡೆಸಿದ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ(Weekend Curfew), ನೈಟ್ ಕರ್ಫ್ಯೂ (Night Curfew) ಸೇರಿದಂತೆ ಬೆಂಗಳೂರಿನಲ್ಲಿ ಶಾಲೆಗಳನ್ನು 2 ವಾರಗಳ ಕಾಲ ಬಂದ್ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೇ ಹೆಚ್ಚಿನ ಪಾಸಿಟಿವ್ ಪ್ರಕರಣಗಳು ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲೆಯನ್ನು ಒಂದು ರಾಜ್ಯಕ್ಕೆ ಸಮನಾಗಿ ಪರಿಗಣಿಸಿ ನಿಯಮಗಳನ್ನು ರೂಪಿಸಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ನಿನ್ನೆಯೇ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಾರ್ವಜನಿಕ ಸಂಚಾರ ವಿಚಾರದಲ್ಲೂ ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬಿಎಂಟಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇನ್ಮುಂದೆ ಬಿಎಂಟಿಸಿ ಬಸ್ ಏರುವ ಮುನ್ನ ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಲೇಬೇಕು.
ಬಿಎಂಟಿಸಿಯಿಂದ ಮಾರ್ಗಸೂಚಿ ಬಿಡುಗಡೆ
-ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ, ಭಾನುವಾರ ಸಾರ್ವಜನಿಕ ಸೇವೆ ಸ್ಥಗಿತ
- ವಾರಂತ್ಯದಲ್ಲಿ ಶೇ.10 ರಷ್ಟು ಬಸ್ಗಳು ಮಾತ್ರ ಕಾರ್ಯನಿರ್ವಹಿಸಲಿವೆ
- ಬೆಂಗಳೂರಿನಲ್ಲಿ ಕಂಟೈನ್ಮೆಂಟ್ ಝೋನ್ನಲ್ಲಿ ಬಸ್ ಸೇವೆ ಲಭ್ಯ ಇರುವುದಿಲ್ಲ
- ಅಗತ್ಯ ಸೇವೆಗಳಿಗಾಗಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಗೆವರೆಗೆ ಕಾರ್ಯಾಚರಣೆ
- ಅಗತ್ಯ ಸೇವೆ ಇಲಾಖೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮಾತ್ರ ಬಸ್ಸುಗಳಲ್ಲಿ ಪ್ರಯಾಣಕ್ಕೆ ಅವಕಾಶ
- ರೈಲು, ವಿಮಾನಗಳ ಮೂಲಕ ಬರುವ ಪ್ರಯಾಣಿಕರು ಟಿಕೆಟ್ ಹಾಗೂ ಐಡಿ ಕಾರ್ಡ್ ತೋರಿಸಿ ಬಸ್ಗಳಲ್ಲಿ ಪ್ರಯಾಣ ಮಾಡಬಹುದು.
- ಬಸ್ಸುಗಳಲ್ಲಿ ಸೀಟ್ ಖಾಲಿ ಇದ್ದರೆ ಮಾತ್ರ ಪ್ರಯಾಣ
- ಬಸ್ಗಳಲ್ಲಿ ನಿಂತು ಪ್ರಯಾಣ ಮಾಡುವಂತಿಲ್ಲ
- ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪ್ರಯಾಣ ಮಾಡಬಹುದು
- ಜ್ವರ ಹಾಗೂ ಇತರೆ ಖಾಯಿಲೆ ಇರುವ ಪ್ರಯಾಣಿಕರು ಬಸ್ ಪ್ರಯಾಣ ಮಾಡದೇ ಇರಲು ಸಲಹೆ
- ಆಸ್ಪತ್ರೆಗೆ ಹೋಗುವ ರೋಗಿಗಳು ಹಾಗೂ ಅವರ ಸಹಾಯಕರಿಗೆ ಬಸ್ಸಿನಲ್ಲಿ ಪ್ರಯಾಣಿಸಲು ಅವಕಾಶ
- ವೀಕೆಂಡ್ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ವೇಳೆ ಅಗತ್ಯ ಸೇವೆಗೆ ಬಸ್ಸುಗಳ ಕಾರ್ಯಚರಣೆ
- ಇದನ್ನು ಹೊರತುಪಡಿಸಿ ಯಾವುದೇ ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ
- ಸರ್ಕಾರಿ ನೌಕರರಿಗೆ, ನಿಗಮ ಮಂಡಳಿ, ನ್ಯಾಯಲಯದಲ್ಲಿ ಕಾರ್ಯ ನಿರ್ವಹಿಸುವವರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಕೊರೊನಾ ವಾರಿಯರ್ಸ್ ಗೆ ಮಾತ್ರ ಪ್ರಯಾಣಕ್ಕೆ ಅವಕಾಶ
- ಪ್ರಯಾಣಿಕರು, ನಿರ್ವಾಹಕರು ಮತ್ತು ಚಾಲಕರಿಗೆ ಮಾಸ್ಕ್ ಕಡ್ಡಾಯ
-ಮಾಸ್ಕ್ ಇಲ್ಲದ ಪ್ರಯಾಣಿಕರಿಗೆ ಪ್ರಯಾಣ ಮಾಡಲು ಅವಕಾಶವಿಲ್ಲ