ಸಂಸದರ ಆದರ್ಶ ಗ್ರಾಮ ಯೋಜನೆ: ನೆಲವಾಗಿಲು ಗ್ರಾಮ ಪಂಚಾಯಿತಿ ದತ್ತು ಪಡೆದ ಬಿ.ಎನ್ ಬಚ್ಚೇಗೌಡ

ಶಿಥಿಲಗೊಂಡ ಶಾಲೆಗಳನ್ನು ಗುರುತಿಸಿ ನವೀಕರಿಸಬೇಕು. ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಮಾರ್ಪಡಿಸಬೇಕು. ನಿಗದಿಪಡಿಸಿದ ಅವಧಿಯಲ್ಲಿ ಅಧಿಕಾರಿಗಳು ಆದರ್ಶ ಗ್ರಾಮ ಯೋಜನೆಗೆ ವಿವಿಧ ಇಲಾಖೆಗಳಿಂದ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಯ ಪಟ್ಟಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

news18-kannada
Updated:June 30, 2020, 9:18 AM IST
ಸಂಸದರ ಆದರ್ಶ ಗ್ರಾಮ ಯೋಜನೆ: ನೆಲವಾಗಿಲು ಗ್ರಾಮ ಪಂಚಾಯಿತಿ ದತ್ತು ಪಡೆದ ಬಿ.ಎನ್ ಬಚ್ಚೇಗೌಡ
ಸಂಸದ ಬಿ.ಎನ್​​​​ ಬಚ್ಚೇಗೌಡ
  • Share this:
ದೇವನಹಳ್ಳಿ(ಜೂ.30): ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ನೆಲವಾಗಿಲು ಗ್ರಾಮ ಪಂಚಾಯತಿಯನ್ನು 2019-2024ರ ಸಾಲಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಅಭಿವೃದ್ಧಿ ಪಡಿಸಲು ಆಯ್ಕೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಎಲ್ಲಾ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕು ಎಂದು ಸಂಸದ ಬಿ.ಎನ್.ಬಚ್ಚೇಗೌಡ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶೀಘ್ರವಾಗಿ ಕ್ರಿಯಾ ಯೋಜನೆ ರೂಪಿಸಲು ಅಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್ ನಾಗರಾಜ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಹಂತ-4ರ ಬಗ್ಗೆ ಸಭೆ ನಡೆದಿತ್ತು. ಇಲ್ಲಿ ಆಯ್ಕೆಯಾದ ಗ್ರಾಮ ಪಂಚಾಯಿತಿಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಕ್ರಿಯಾ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಸಿಇಓ ನಾಗರಾಜ್ ಮಾತನಾಡಿದರು.

ಆದರ್ಶ ಗ್ರಾಮ ಯೋಜನೆಯ ಮೂಲಕ ಗ್ರಾಮದ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸ್ಥಳೀಯವಾಗಿ ದೊರೆಯುವ ಸಂಪನ್ಮೂಲಗಳ ಸಮರ್ಪಕ ಬಳಕೆ ಮಾಡುವ ಮೂಲಕ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು. ನೆಲವಾಗಿಲು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಸ್ಮಶಾನ, ಆಟದ ಮೈದಾನ, ಸಮುದಾಯ ಭವನ ಹಾಗೂ ಇ-ಗ್ರಂಥಾಲಯ ತೆರೆಯಬೇಕು ಎಂದರು ನಾಗರಾಜ್​​.


ಇದನ್ನೂ ಓದಿ: PM Modi Speech: ಇಂದು ಸಂಜೆ 4 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ

ಶಿಥಿಲಗೊಂಡ ಶಾಲೆಗಳನ್ನು ಗುರುತಿಸಿ ನವೀಕರಿಸಬೇಕು. ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಮಾರ್ಪಡಿಸಬೇಕು. ನಿಗದಿಪಡಿಸಿದ ಅವಧಿಯಲ್ಲಿ ಅಧಿಕಾರಿಗಳು ಆದರ್ಶ ಗ್ರಾಮ ಯೋಜನೆಗೆ ವಿವಿಧ ಇಲಾಖೆಗಳಿಂದ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಯ ಪಟ್ಟಿ ಸಲ್ಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದು ಮುಂದಿನ ಕಾರ್ಯಗಳ ಬಗ್ಗೆ ಶೀಘ್ರವಾಗಿ ನೀಲ ನಕ್ಷೆ ರೂಪಿಸುವಂತೆ ಸೂಚಿಸಿದರು.
First published:June 30, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading