Bharat Bandh| ಭಾರತ್​ ಬಂದ್​ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ; ಸಿಎಂ ಮನೆಗೆ ಬಿಗಿ ಭದ್ರತೆ!

ಇಂದು ಮೆಜೆಸ್ಟಿಕ್, ಕೆ.ಆರ್​. ಮಾರ್ಕೆಟ್​ ಸೇರಿದಂತೆ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಮುಕ್ತವಾಗಿತ್ತು. ಆಟೋ ಸೇರಿದಂತೆ ಎಲ್ಲಾ ಸಾರಿಗೆ ಸಂಚಾರವೂ ಯಾವುದೇ ಅಡ್ಡಿ-ಆತಂಕ ಇಲ್ಲದೆ ನಡೆಯುತ್ತಿದೆ. ಜನ ಜೀವನವೂ ಎಂದಿನಂತೆ ಮಾಮೂಲಿ ಯಾಗಿದ್ದು, ಭಾರತ್ ಬಂದ್​ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ ಎನ್ನಲಾಗಿದೆ.

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

 • Share this:
  ಬೆಂಗಳೂರು (ಸೆಪ್ಟೆಂಬರ್​ 27); ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ (Agriculture Bill) ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ (Central Government) ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ. ಪರಿಣಾಮ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (Samyukt Kisan Morcha) ಸೆಪ್ಟೆಂಬರ್​. 27 ರಂದು ಭಾರತ್ ಬಂದ್​ಗೆ ಕರೆ ನೀಡಿದೆ. ಈ ಬಂದ್​ಗೆ ಕರ್ನಾಟಕದಲ್ಲೂ ಸಹ ಅನೇಕ ರೈತ ಸಂಘಟನೆಗಳು ಬೆಂಬಲ ಸೂಚಿಸಿತ್ತು. ಅಲ್ಲದೆ, ಇಂದು ಕೃಷಿ ಕಾಯ್ದೆ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಬೆಂಗಳೂರು (Banglore) ಸೇರಿದಂತೆ ರಾಜ್ಯದ ಹಲವೆಡೆ ಬಂದ್​ ನಡೆಸಲಾಗುತ್ತಿದೆ. ಹೀಗಾಗಿ ಪೊಲೀಸರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಿವಾಸ, ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ ಸೇರಿದಂತೆ ಅನೇಕ ಕಡೆಗಳಲ್ಲಿ ಬಿಗಿ ಭದ್ರತೆ ನೀಡಿದ್ದಾರೆ.

  ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಅಪಾರ ಸಂಖ್ಯೆಯ ಜನ ಬೆಂಗಳೂರಿನಲ್ಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಕೃಷಿ ಕಾಯ್ದೆಯನ್ನು ವಿರೋಧಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತ ಹೋರಾಟಗಾರರು ಇಂದು ಸಿಎಂ ಮನೆಗೂ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಪೊಲೀಸರು ಮುಖ್ಯಮಂತ್ರಿಗಳ ನಿವಾಸಕ್ಕೆ ಬಿಗಿ ಭದ್ರತೆ ನೀಡಿದ್ದಾರೆ. ಹೆಚ್ಚು ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

  ಸಿಎಂ ಮನೆ ಭದ್ರತೆ ಪರಿಶೀಲಿಸಿದ ಡಿಸಿಪಿ ಅನುಚೇತ್, ಕುಮಾರಕೃಪಾ ರಸ್ತೆಯಲ್ಲಿ ರುವ ಸಿಎಂ ಸರ್ಕಾರಿ ನಿವಾಸವಿದ್ದು, ಅವರ ಮನೆ ಸೇರಿದಂತೆ ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ, ಖಾಸಗಿ ‌ನಿವಾಸಕ್ಕೆ ಬಿಗಿ ಭದ್ರತೆ ನೀಡಲು ಸೂಚನೆ ನೀಡಿದ್ದಾರೆ. ಹೆಚ್ಚು ಬ್ಯಾರಿಕೇಡ್ ಗಳನ್ನು ಹಾಕಿ ಭದ್ರತೆ ನೀಡಲಾಗಿದೆ. ಅಲ್ಲದೆ, ಆರ್​ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೂ ಭದ್ರತೆ ನೀಡಲಾಗಿದೆ.

  ಬಂದ್​ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ;

  ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆ ಮತ್ತು ಸತತ ಬೆಲೆ ಏರಿಕೆ ವಿರುದ್ಧ ರೈತ ಸಂಘಟನೆಗಳು ಇಂದು ದೇಶದಾದ್ಯಂತ ಭಾರತ್ ಬಂದ್ ಘೋಷಿಸಿದೆ. ಕರ್ನಾಟಕದಲ್ಲೂ ಅನೇಕ ರೈತ ಸಂಘಟನೆಗಳು ಈ ಬಂದ್​ಗೆ ಬೆಂಬಲ ಸೂಚಿಸಿದ್ದವು. ಹೀಗಾಗಿ ಇಂದು ಬೆಂಗಳೂರಿನಲ್ಲಿ ಬಂದ್ ಯಶಸ್ವಿಯಾಗಲಿದೆ. ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ತಬ್ಧವಾಗಲಿದೆ ಎನ್ನಲಾಗಿತ್ತು.

  ಇದನ್ನೂ ಓದಿ: Crime News| ಮಹಾರಾಷ್ಟ್ರದಲ್ಲಿ ನಿಧಿಗಾಗಿ ಹೆಂಡತಿಯನ್ನೇ ನರಬಲಿ ನೀಡಲು ಮುಂದಾಗಿದ್ದ ಆಸಾಮಿ ಇದೀಗ ಪೊಲೀಸರ ಅತಿಥಿ!

  ಆದರೆ, ಇಂದು ಮೆಜೆಸ್ಟಿಕ್, ಕೆ.ಆರ್​. ಮಾರ್ಕೆಟ್​ ಸೇರಿದಂತೆ ಅನೇಕ ಕಡೆಗಳಲ್ಲಿ ಬಸ್ ಸಂಚಾರ ಮುಕ್ತವಾಗಿತ್ತು. ಆಟೋ ಸೇರಿದಂತೆ ಎಲ್ಲಾ ಸಾರಿಗೆ ಸಂಚಾರವೂ ಯಾವುದೇ ಅಡ್ಡಿ-ಆತಂಕ ಇಲ್ಲದೆ ನಡೆಯುತ್ತಿದೆ. ಜನ ಜೀವನವೂ ಎಂದಿನಂತೆ ಮಾಮೂಲಿ ಯಾಗಿದ್ದು, ಭಾರತ್ ಬಂದ್​ಗೆ ನೀರಸ ಪ್ರತಿಕ್ರಿಯೆ ಕಂಡುಬಂದಿದೆ ಎನ್ನಲಾಗಿದೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: