Lok Sabha Elections 2019: ರಾಜ್ಯದ ವಿವಿಧೆಡೆ ಮತದಾನ ಬಹಿಷ್ಕಾರ; 'ಅಭಿವೃದ್ಧಿ' ಇಲ್ಲದೆ ಮತಹಾಕಲಾರೆ ಎಂದ ಮತದಾರ

ಜನ ಪ್ರತಿನಿಧಿಗಳು ಗ್ರಾಮದ ಅಭಿವೃದ್ಧಿಗೆ ಒತ್ತು ನೀಡದ ಕಾರಣವನ್ನು ಮುಂದಿಟ್ಟು ಹಾಸನ, ಚಿತ್ರದುರ್ಗ, ಮಂಡ್ಯ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಮತದಾರರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ. ಇದು ಸಾಮಾನ್ಯವಾಗಿ ಜನಪ್ರತಿನಿಧಿಗಳ ಹಾಗೂ ಚುನಾವಣಾ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

MAshok Kumar | news18
Updated:April 18, 2019, 12:18 PM IST
Lok Sabha Elections 2019: ರಾಜ್ಯದ ವಿವಿಧೆಡೆ ಮತದಾನ ಬಹಿಷ್ಕಾರ; 'ಅಭಿವೃದ್ಧಿ' ಇಲ್ಲದೆ ಮತಹಾಕಲಾರೆ ಎಂದ ಮತದಾರ
ಮತದಾನ ಬಹಿಷ್ಕರಿಸಿರುವ ಮತದಾರರು.
MAshok Kumar | news18
Updated: April 18, 2019, 12:18 PM IST
ಬೆಂಗಳೂರು (ಏ.18) : ರಾಜ್ಯದೆಲ್ಲೆಡೆ ಲೋಕಸಬಾ ಚುನಾವಣೆ ಗರಿಗೆದರಿದೆ. ಪ್ರಮುಖ ನಾಯಕರು, ಸಿನಿಮಾ ನಟ ನಟಿಯರು ಸೇರಿದಂತೆ ಸಾಮಾನ್ಯ ಜನ ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತು ಮತ ಚಲಾಯಿಸುತ್ತಿದ್ದಾರೆ. ಆದರೆ, ರಾಜ್ಯದ ಕೆಲವೆಡೆ 'ತಮ್ಮ ಗ್ರಾಮ ಅಭಿವೃದ್ಧಿಯಾಗದೆ ನಾವು ಮತಚಲಾಯಿಸುವುದಿಲ್ಲ' ಎಂದು ಜನ  ಸಾಮಾನ್ಯರು ಮತದಾನಕ್ಕೆ ಬಹಿಷ್ಕಾರ ಮಾಡುವ ಮೂಲಕ ಜಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಜನ ಪ್ರತಿನಿಧಿಗಳು ಗ್ರಾಮದ ಅಭಿವೃದ್ಧಿಗೆ ಒತ್ತು ನೀಡದ ಕಾರಣವನ್ನು ಮುಂದಿಟ್ಟು ಹಾಸನ, ಚಿತ್ರದುರ್ಗ, ಮಂಡ್ಯ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವಾರು ಕಡೆಗಳಲ್ಲಿ ಮತದಾರರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ. ಇದು ಸಾಮಾನ್ಯವಾಗಿ ಜನಪ್ರತಿನಿಧಿಗಳ ಹಾಗೂ ಚುನಾವಣಾ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.

ಎಲ್ಲೆಲ್ಲಿ ಬಹಿಷ್ಕಾರ? :  ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕಬೇಡಗೆರೆ ಗ್ರಾಮಸ್ಥರು ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಗ್ರಾಮದ ಮತಗಟ್ಟೆ ಸಂಖ್ಯೆ 118 ರಲ್ಲಿ ಸುಮಾರು 1,500 ಕ್ಕೂ ಹೆಚ್ಚು ಮತದಾರರು ಮತದಾನ ಮಾಡಬೇಕಿತ್ತು. ಆದರೆ, ತಮ್ಮ ಗ್ರಾಮ ಅಭಿವೃದ್ಧಿಯಾಗುವವರೆಗೆ ನಾವು ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದು ಕುಳಿತಿದ್ದಾರೆ.

ಇದನ್ನೂ ಓದಿ : lok sabha elections 2019: ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ; ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ

ಗ್ರಾಮಸ್ಥರ ಮನವೊಲಿಸಲು ಆಗಮಿಸಿದ ನಾಯಕರನ್ನೂ ಸಹ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ 'ಗ್ರಾಮವನ್ನು ಅಭಿವೃದ್ಧಿಪಡಿಸಿ ಆನಂತರ ಮತಯಾಚಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ನಗರಘಟ್ಟೆ ಜಿಲ್ಲೆಯಲ್ಲೇ ಅತ್ಯಂತ ಹಿಂದುಳಿದ ಗ್ರಾಮ. 650 ಮತದಾರರನ್ನು ಹೊಂದಿರುವ ಗ್ರಾಮದಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಬಿದ್ದು ಹೋಗಿರುವ ಅಂಗನವಾಡಿ ರಿಪೇರಿ ಹಾಗೂ ನೀರು ಶುದ್ದೀಕರಣ ಘಟಕ ಸ್ಥಾಪನೆಗೆ ಗ್ರಾಮಸ್ಥರು ಹಲವಾರು ವರ್ಷಗಳಿಂದ  ಆಗ್ರಹಿಸುತ್ತಲೇ ಬಂದಿದ್ದಾರೆ. ಹಲವು ಬಾರಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಯಾವ ಅಧಿಕಾರಿಯೂ ಸ್ಪಂದಿಸಿರಲಿಲ್ಲ. ಪರಿಣಾಮ ಗ್ರಾಮಸ್ಥರು ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.
Loading...

ಇದಲ್ಲದೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಮತ್ತೆರಡು ಗ್ರಾಮಗಳಾದ ಪಂಜಯ್ಯನಹಟ್ಟಿ ಮತ್ತು ಐಯ್ಯನಹಳ್ಳಿಯಲ್ಲೂ ಸಹ ಗ್ರಾ,ಮಸ್ಥರು ಮೂಲಭೂತ ಸೌಕರ್ಯ ನೀಡಿಲ್ಲ ಎಂದು ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಆಗ್ರಹಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ತಹಶೀಲ್ದಾರ್ ನಾಗರಾಜ್ ಹಾಗೂ ಸಿಇಓ ಸತ್ಯಭಾಮ ಸ್ಥಳಕ್ಕೆ ಆಗಮಿಸಿ ಮನವೋಲಿಸಿದರು ಸಹ ಗ್ರಾಮಸ್ಥರು ಅಧಿಕಾರಿಗಳ ಮಾತು ಕೇಳುವ ಯಾವ ಲಕ್ಷಣಗಳು ಕಂಡುಬರುತ್ತಿಲ್ಲ.

ಇದನ್ನೂ ಓದಿ : ಸುಮಲತಾ ಪರ ಇವಿಎಂನಲ್ಲಿ ಮತ ಹಾಕಲು ಗ್ರಾಮಸ್ಥರ ಪರದಾಟ; ಮತಯಂತ್ರ ಏರುಪೇರಾಗಿದ್ದಕ್ಕೆ ಅಧಿಕಾರಿಗೆ ಸಚಿವ ಪುಟ್ಟರಾಜು ತರಾಟೆ

ರಾಜ್ಯದ ಜಿದ್ದಾಜಿದ್ದಿ ಕಣಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಅಗ್ರ ಸ್ಥಾನವಿದೆ. ಕಳೆದ ಒಂದು ತಿಂಗಳಿನಿಂದ ಈ ಕ್ಷೇತ್ರದ ಚುನಾವಣಾ ಪ್ರಚಾರ ಇಡೀ ರಾಜ್ಯದ ಗಮನ ಸೆಳೆದಿತ್ತು. ಆದರೆ, ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮಸ್ಥರು ಮತದಾನಕ್ಕೆ ಬಹಿಷ್ಕಾರ ಹಾಕಿರುವುದು ಚುನಾವಣೆಗೆ ಕಪ್ಪುಚುಕ್ಕಿಯಾಗಿ ಪರಿಣಮಿಸಿದೆ.

ಬೈಪಾಸ್ ರಸ್ತೆ ನಿರ್ಮಾಣಕ್ಕೆ ಜಮೀನು ಭೂಸ್ವಾಧೀನ ಮಾಡಿದ್ದಾರೆ. ಆದರೆ, ಪರಿಹಾರ ನೀಡುವಾಗ ಬಡವರು ಹಾಗೂ ಶ್ರೀಮಂತರ ನಡುವೆ ತಾರತಮ್ಯವಾಗಿದೆ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಿರುವ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿ ಎದುರು ಕುಳಿತು ಧರಣಿ ನಡೆಸುತ್ತಿದ್ದಾರೆ. ಅಧಿಕಾರಿಗಳು ಎಷ್ಟೇ ಮನವೋಲಿಸದರು ಗ್ರಾಮಸ್ಥರು ಪಟ್ಟು ಸಡಿಲಿಸುತ್ತಿಲ್ಲ.

ಚಿಕ್ಕಮಗಳೂರಿನ ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಜಿಗೆ ಗ್ರಾಮದಲ್ಲಿದ್ದಂತಹ ಮತಗಟ್ಟೆಯನ್ನು ಪಕ್ಕದ ಬಾಳೆಹಳ್ಳಿ ಗ್ರಾಮಕ್ಕೆ ಸ್ಥಳಾಂತರಿಸಲಾಗಿತ್ತು. ಚುನಾವಣಾ ಅಧಿಕಾರಿಗಳು ಬೂತ್ ಬದಲಿಸಿದ್ದಕ್ಕೆ ಆಕ್ರೋಶಗೊಂಡಿರುವ ಕೆಂಜಿಗೆ ಗ್ರಾಮಸ್ಥರು ಮತದಾನಕ್ಕೆ ಸಾಮೂಹಿಕ ಬಹಿಷ್ಕಾರ ಹಾಕಿದ್ದಾರೆ. ಈ ಗ್ರಾಮದಲ್ಲಿ ಒಟ್ಟು 600ಕ್ಕೂ ಹೆಚ್ಚು ಮತದಾರರಿದ್ದಾರೆ.

ಇದನ್ನೂ ಓದಿ : 11 ಗಂಟೆವರೆಗಿನ ಮತದಾನದಲ್ಲಿ ಉಡುಪಿ-ಚಿಕ್ಕಮಗಳೂರು ಮುಂದು; ಈವರೆಗೆ ಯಾವ ಜಿಲ್ಲೆಯಲ್ಲಿ ಎಷ್ಟು ಮತದಾನವಾಗಿದೆ?

ಚಾಮರಾಜ ನಗರ ಆಲೂರು ಸುತ್ತಮುತ್ತಲಿನ ರೈತರಿಗೆ ಇಲ್ಲಿನ ಸುವರ್ಣಾವತಿ ಜಲಾಶಯದ ನೀರೆ ಆಧಾರ. ಆದರೆ, ಸೂಕ್ತ ಸಮಯದಲ್ಲಿ ಕಾವೇರಿ ನೀರಾವರಿ ನಿಗಮ ನೀರು ಹರಿಸದ ಕಾರಣ ಬೆಳೆಗಳು ಒಣಗಿಹೋಗಿವೆ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ನಿರಾವರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿರುವ ಆಲೂರು ಗ್ರಾಮಸ್ಥರು ಈಬಾರಿಯ ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚಿಂತಾಮಣಿ ತಾಲೂಕು ಎಗವ ಮಿಂಡಿಗಲ್ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಬಾರಿಯ ಮತದಾನವನ್ನು ಬಹಿಷ್ಕರಿಸಿದ್ದಾರೆ.

ಗ್ರಾಮದಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಸಮರ್ಪಕ ನೀರು ಪೂರೈಕೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರು ಜಿಲ್ಲಾಡಳಿತ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಬೇಸತ್ತಿರುವ ಗ್ರಾಮಸ್ಥರು ಇಂತಹ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಚಿಂತಾಮಣಿ ತಾಲೂಕು ಎಗವ ಮಿಂಡಿಗಲ್ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಈ ಬಾರಿಯ ಮತದಾನವನ್ನು ಬಹಿಷ್ಕರಿಸಿದ್ದಾರೆ.

ಗ್ರಾಮದಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಸಮರ್ಪಕ ನೀರು ಪೂರೈಕೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರು ಜಿಲ್ಲಾಡಳಿತ ಕ್ರಮ ಕೈಗೊಂಡಿರಲಿಲ್ಲ. ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಬೇಸತ್ತಿರುವ ಗ್ರಾಮಸ್ಥರು ಇಂತಹ ನಿರ್ಧಾರಕ್ಕೆ ಮುಂದಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿಂಡಕೋರತಿಮ್ಮನಹಳ್ಳಿ ಗ್ರಾಮಸ್ಥರು ತಮ್ಮ ಗ್ರಾಮಕ್ಕೆ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಮತದಾನ ಬಹಿಷ್ಕಾರ ಮಾಡಿದ್ದಾರೆ. ಕಳೆದ 40 ವರ್ಷಗಳಿಂದ ರಸ್ತೆ ನಿರ್ಮಾಣಕ್ಕಾಗಿ ಹೋರಾಟ ನಡೆಸಲಾಗುತ್ತಿದೆ. ಆದರೆ, ಎಷ್ಟೇ ಹೋರಾಟ ಮಾಡಿದರೂ ಗ್ರಾಮಕ್ಕೆ ರಸ್ತೆ ಸಂಪರ್ಕವಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಜನರ ಮನವೋಲಿಸಲು ಅಧಿಕಾರಿಗಳು ಮುಂದಾಗಿದ್ದರೂ ಜನ ಮತಗಟ್ಟೆಯ ಕಡೆಗೆ ಬರುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ.

 

First published:April 18, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626