ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ಕಚ್ಚಾವಸ್ತು ಖರೀದಿ ಟೆಂಡರ್ ಪ್ರಕ್ರಿಯೆ ಲಂಚ ಪ್ರಕರಣದ ಎ-1 ಆರೋಪಿಯಾಗಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ( Madal Virupakshappa) ಮನೆ ಮೇಲೆ ಲೋಕಾಯುಕ್ತ (Lokayukta) ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮಾಡಾಳ್ ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ಕಚೇರಿಗೆ ವಕೀಲರ ಜೊತೆ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು (Anticipatory Bail) ಪ್ರತಿ ತೆಗೆದುಕೊಂಡು ಬಂದಿದ್ದರು. ಲೋಕಾ ದಾಳಿ ವೇಳೆ 8 ಕೋಟಿ ರೂಪಾಯಿ ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ A1 ಆರೋಪಿಯಾಗಿದ್ದಾರೆ. ಈ ಹಿನ್ನೆಲೆ ಮಾಡಾಳ್ ವಿರೂಪಾಕ್ಷಪ್ಪ ಅಧಿಕಾರಿಗಳು ವಿಚಾರಣೆ ಮಾಡ್ತಿದ್ದಾರೆ.
ಮಾಡಾಳ್ ಪರ ವಕೀಲ ಸಂದೀಪ್ ಪಾಟೀಲ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಮ್ಮ ಶಾಸಕರ ಮೇಲೆ ಇರೋ ಆರೋಪಗಳೆಲ್ಲ ಸತ್ಯಕ್ಕೆ ದೂರ. ಸದ್ಯ ಕೇಳಿ ಬಂದಿರುವುದು ಆರೋಪ ಮಾತ್ರ. ಹಣ ಏನ್ ಸಿಕ್ಕಿದೆ ಅದಕ್ಕೆ ಅವರ ಮಗ ಉತ್ತರ ಕೊಡಬೇಕು. ಚನ್ನಗಿರಿಯಲ್ಲಿ ಸಿಕ್ಕಿರುವ ಹಣ ಮಾತ್ರ ವಿರೂಪಾಕ್ಷಪ್ಪ ಲೋಕಾಯುಕ್ತ ಅಧಿಕಾರಿಗಳಿಗೆ ಉತ್ತರ ನೀಡಬೇಕು ಹೇಳಿದರು.
‘ಲೋಕಾಯುಕ್ತ ಸರ್ವ ಸ್ವತಂತ್ರ’
ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಸಿಎಂ ಬೊಮ್ಮಾಯಿ ರಿಯಾಕ್ಟ್ ಮಾಡಿದ್ದಾರೆ. ಲೋಕಾಯುಕ್ತರಿಗೆ ನಾವು ಸರ್ವ ಸ್ವತಂತ್ರ ಕೊಟ್ಟಿದ್ದೇವೆ. ನ್ಯಾಯಾಲಯದ ತೀರ್ಮಾನಕ್ಕೆ ನಾವೆಲ್ಲಾ ತಲೆ ಬಾಗಬೇಕಾಗುತ್ತೇವೆ. ಇದರಲ್ಲಿ ಯಾವುದನ್ನೂ ಮುಚ್ಚಿಡೋ ಪ್ರಶ್ನೆ ಇಲ್ಲ ಅಂತ ಹೇಳಿದರು.
ಜಾಮೀನು ನೀಡಿದ್ದ ಕೋರ್ಟ್
ಮಾಡಾಳ್ ವಿರೂಪಾಕ್ಷಪ್ಪ ಅವರು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿತ್ತು. ಈ ವೇಳೆ 5 ಲಕ್ಷ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಲಾಗಿತ್ತು. ಅಲ್ಲದೇ, ಆದೇಶ ತಲುಪಿದ 48 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎದುರು ಹಾಜರಾಗಿದ್ದ ಮಾಡಾಳ್ ಅವರು ದಾಖಲೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಏನಿದು ಪ್ರಕರಣ?
ಶಾಸಕ ಕೆ ಮಾಡಾಳು ವಿರೂಪಾಕ್ಷಪ್ಪ ಪುತ್ರ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು. ಇನ್ನು ವಿರೂಪಾಕ್ಷಪ್ಪ ಕೆಎಸ್ಡಿಎಲ್ನ ಅಧ್ಯಕ್ಷರೆಂಬುವುದು ಉಲ್ಲೇಖನೀಯ.
ಇದನ್ನೂ ಓದಿ: Bengaluru: ಒಂದು ದಿನದ ಹಿಂದೆ ಕೈಹಿಡಿದ ಗಂಡ ಬೆಂಗಳೂರು ಟ್ರಾಫಿಕ್ನಲ್ಲಿ 'ಮಾಯ', ಹಿಡಿಯಲು ಹೋದ ಹೆಂಡತಿಗೆ 'ನಾಮ'!
ಎಂಟು ಕೋಟಿಗೂ ಅಧಿಕ ನಗದು ಪತ್ತೆ
ಇದಾದ ಬಳಿಕ ನಡೆದಿದ್ದ ದಾಳಿಯಲ್ಲಿ ಕೆಎಸ್‌ಡಿಎಲ್ ಕಚೇರಿಯಲ್ಲಿ ಸುಮಾರು 2 ಕೋಟಿ ರೂ. ಹಾಗೂ ಪ್ರಶಾಂತ್ ಮನೆಯಿಂದ 6 ಕೋಟಿ ರೂ. ಹೀಗೆ ಒಟ್ಟು 8.23 ಕೋಟಿ ರೂಪಾಯಿ ನಗದು, ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಕರ್ನಾಟಕದ ವಿವಿಧ ಭಾಗಗಳಲ್ಲಿ ಜಮೀನುಗಳಲ್ಲಿ ಹಣ ಹೂಡಿಕೆ ಮಾಡಿದ್ದ ದಾಖಲೆಗಳು ಪತ್ತೆಯಾಗಿವೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿದ್ದವು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ