ರಾಜ್ಯ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಯ (Vidhana Parishat And Rajyasbha Election) ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ (Karnataka Congress) ನಲ್ಲಿ ಅಸಮಾಧಾನ ಸ್ಫೋಟವಾಗಿದೆ. ಎರಡು ದಿನಗಳ ಹಿಂದೆಯಷ್ಟೇ ರಾಜ್ಯಸಭಾ ಟಿಕೆಟ್ ವಂಚಿತ ಮುಖ್ಯಮಂತ್ರಿ ಚಂದ್ರು (Mukhyamantri Chandru) ಅವರ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬ್ರಿಜೇಶ್ ಕಾಳಪ್ಪ (Congress Spoke person Brijesh Kalappa) ಕಾಂಗ್ರೆಸ್ ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಮ್ಮ ರಾಜೀನಾಮೆ ಪತ್ರವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (KPCC President DK Shivakumar) ಅವರಿಗೆ ಸಲ್ಲಿಸಿದ್ದಾರೆ. ಆದ್ರೆ ಇದುವರೆಗೂ ಡಿ.ಕೆ.ಶಿವಕುಮಾರ್ ರಾಜೀನಾಮೆ ಪತ್ರವನ್ನು ಅಂಗೀಕರಿಸಲ್ಲ. ಪಕ್ಷ ಬಿಡದಂತೆ ಬ್ರಿಜೇಶ್ ಕಾಳಪ್ಪ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
2018ರ ವಿಧಾನಸಭಾ ಚುನಾವಣೆ ವೇಳೆಯೂ ಬ್ರಿಜೇಶ್ ಕಾಳಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅಂದು ಸಹ ಟಿಕೆಟ್ ಸಿಗದ ಹಿನ್ನೆಲೆ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುವ ಕುರಿತು ಬ್ರಿಜೇಶ್ ಕಾಳಪ್ಪ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿನ ಮಾಹಿತಿಯನ್ನು ಬ್ರಿಜೇಶ್ ಕಾಳಪ್ಪ ಹಂಚಿಕೊಂಡಿದ್ದಾರೆ.
6,497 ಟಿವಿ ಚರ್ಚೆಗಳಲ್ಲಿ ಭಾಗವಹಿಸಿದ್ದೇನೆ
ನೀವು ನೀಡಿದ ಹಲವಾರು ಅವಕಾಶಗಳಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಈ ದೇಶದಲ್ಲಿ ನಾನು ಪರಿಚಿತನಾಗಿ ಗುರುತಿಸಲ್ಪಟ್ಟಿದ್ರೆ ಅದಕ್ಕೆ ನಿಮ್ಮ ಪ್ರೋತ್ಸಾಹ ಕಾರಣ. ನಿಮ್ಮ ಆಶೀರ್ವಾದಿಂದಲೇ ಸಚಿವ ಸ್ಥಾನಕ್ಕೆ ಸಮಾನಾದ ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿತ್ತು. 2013ರಿಂದ ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸಿದ್ದೇನೆ. ಇದುವರೆಗೂ 6,497 ಚರ್ಚೆಗಳಲ್ಲಿ ಭಾಗಿಯಾಗಿದ್ದೇನೆ.
ಪಕ್ಷವು ನನಗೆ ರಾಜಕೀಯ ಕೆಲಸಗಳನ್ನು ನಿಯಮಿತವಾಗಿ ನಿಯೋಜಿಸುತ್ತಿತ್ತು. ಎಲ್ಲ ಕೆಲಸಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದ ತೃಪ್ತಿ ನನಗಿದೆ. ಯಾವುದೇ ಟಿವಿ ಚರ್ಚೆಗಳಿಗೆ ಎಂದೂ ತಯಾರಿ ಇಲ್ಲದೇ ಭಾಗವಹಿಸಲ್ಲ.
ಸೋಲು ಕಂಡಾಗಲೂ ನನ್ನಲ್ಲಿಯ ಉತ್ಸಾಹ, ಶಕ್ತಿ ಕಡಿಮೆ ಆಗಿರಲಿಲ್ಲ
2014 ಮತ್ತು 2019ರ ಸೋಲು ಅನುಭವಿಸಿದ ಕೆಟ್ಟ ಸಂದರ್ಭದಲ್ಲಿಯೂ ನಾನೂ ಎಂದಿಗೂ ಕುಗ್ಗಿಲ್ಲ. ಸೋಲು ಕಂಡಾಗಲೂ ನನ್ನಲ್ಲಿಯ ಉತ್ಸಾಹ, ಶಕ್ತಿ ಕಡಿಮೆ ಆಗಿರಲಿಲ್ಲ. ಅದ್ರೆ ಇತ್ತೀಚಿನ ದಿನಗಳಲ್ಲಿ ಇದೆಲ್ಲದರ ಕೊರತೆ ಕಾಣಿಸುತ್ತಿದೆ. ಆದ್ದರಿಂದ 1997ರಲ್ಲಿ ಕಾಂಗ್ರೆಸ್ ನೊಂದಿಗೆ ಆರಂಭಿಸಿದ ನನ್ನ ಪಯಣವನ್ನು ಇಲ್ಲಿಗೆ ಮುಕ್ತಾಯಗೊಳಿಸಲು ತೀರ್ಮಾನಿಸಿದ್ದೇನೆ. ಸದ್ಯ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಚಂದ್ರು ರಾಜೀನಾಮೆ
ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಚಂದ್ರು ಅವರು ರಾಜ್ಯಸಭಾ ಟಿಕೆಟ್ ನಿರೀಕ್ಷೆಯಲ್ಲಿದ್ದರು.
ಇದನ್ನೂ ಓದಿ: Karnataka Politics: ಟಿಪ್ಪು, ಬಾಬರ್, ಘಜ್ನಿ ಬಗ್ಗೆ ಟೀಕೆ ಮಾಡಿದ್ರೆ ಸಿದ್ದರಾಮಯ್ಯ ಏಕೆ ಎದೆ ಬಡಿದುಕೊಳ್ತಾರೆ; ಸಿ ಟಿ ರವಿ
ಆದ್ರೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಚಂದ್ರು ಅವರಿಗೆ ಟಿಕೆಟ್ ತಪ್ಪಿತ್ತು. ಟೆಕೆಟ್ ತಪ್ಪಿದ ಬೆನ್ನಲ್ಲೇ ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದರೂ ಗುರುತಿಸಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದರು. ರಾಜೀನಾಮೆ ಬಳಿಕ ಕಾಂಗ್ರೆಸ್ ನಾಯಕರ ಬಗ್ಗೆಯೂ ಬೇಸರ ಹೊರ ಹಾಕಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ