ಬೆಂಗಳೂರು (ಜು. 29): ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ವಲಸಿಗ ಬಿಜೆಪಿ ಶಾಸಕರಿಗೆ ಸಿಎಂ ಬಸವರಾಜ ಬೊಮ್ಮಯಿ ಸಂಪುಟದಲ್ಲಿ ಸ್ಥಾನ ಸಿಗಲಿದೆಯಾ ಇಲ್ಲವಾ ಎಂಬ ಅನುಮಾನಕ್ಕೆ ಖುದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಸರ್ಕಾರ ರಚನೆಗೆ ಕಾರಣರಾದ ವಲಸಿಗರಿಗೆ ಸೂಕ್ತ ಸ್ಥಾನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸುತ್ತೇನೆ ಎಂದರು. ಇದೇ ವೇಳೆ ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ. ಇದು ಸಿಎಂಗೆ ಬಿಟ್ಟ ವಿಚಾರ. ಈ ಬಗ್ಗೆ ಮುಖ್ಯಮಂತ್ರಿಗಳು, ವರಿಷ್ಠರು ನಿರ್ಧರಿಸ್ತಾರೆ. ನಾನು ಈ ಸಂಬಂಧ ಮಧ್ಯ ಪ್ರವೇಶಿಸಲ್ಲ. ಯಾರು ಸೂಕ್ತರೋ ಅವರನ್ನು ಸೇರಿಸಿಕೊಳ್ಳಲಿ. ನಾನು ಯಾರನ್ನೂ ಶಿಫಾರಸು ಮಾಡಲ್ಲ ಎಂದಿದ್ದಾರೆ.
ಇನ್ನು ಜಗದೀಶ್ ಶೆಟ್ಟರು ಸಂಪುಟ ತ್ಯಾಗದ ಕುರಿತು ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರೂ ಬೆಳಗ್ಗೆ ಬಂದು ಮಾತಾಡಿದ್ದರು. ತಮ್ಮ ನಿರ್ಧಾರದ ಬಗ್ಗೆ ನನಗೆ ತಿಳಿಸಿದರು. ಸಿಎಂ ಆಗಿ, ಸಚಿವರಾಗಿ ಜಗದೀಶ್ ಶೆಟ್ಟರ್ ಕಾರ್ಯ ನಿರ್ವಹಿಸಿದ್ದಾರೆ. ಪಕ್ಷದಲ್ಲಿನ ಕಿರಿಯರಿಗೆ ಸಿಗಲಿ ಅಂತ ಶೆಟ್ಟರ್ ನಿರ್ಧರಿಸಿದ್ದಾರೆ ಎಂದರು.
ಪಕ್ಷ ಸಂಘಟನೆಗೆ ಸಜ್ಜಾದ ಬಿಎಸ್ವೈ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಪಕ್ಷ ಸಂಘಟನೆ ಪ್ರಮುಖ ಜವಾಬ್ದಾರಿ ಬಿಎಸ್ ಯಡಿಯೂರಪ್ಪ ಹೆಗಲಿಗೆ ಹೇರಿದೆ. ಮುಂದಿನ ಚುನಾವಣೆಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಪಣವನ್ನು ತೊಟ್ಟಿರುವ ಅವರು ಇನ್ಮುಂದೆ ಪ್ರತೀ ವಾರ ಜಿಲ್ಲೆಗೆ ಭೇಟಿ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಈ ಕುರಿತು ತಿಳಿಸಿದ ಅವರು, ಗಣಪತಿ ಹಬ್ಬದ ಬಳಿಕ ಜಿಲ್ಲೆಗಳಿ ಪ್ರತೀ ವಾರ ಭೇಟಿ ನೀಡಿ ಪಕ್ಷ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.
ಇದನ್ನು ಓದಿ: ಹುಲಿ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿದೆ ಹಳೇ ಮೈಸೂರು ಪ್ರಾಂತ್ಯ
ಇಂದು ಆರ್ ಎಸ್ ಎಸ್ ಕಚೇರಿ ಕೇಶವಕೃಪಾಕ್ಕೆ ಭೇಟಿ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ಬಹಳ ದಿನಗಳ ನಂತರ ಸಂಘದ ಹಿರಿಯರ ಭೇಟಿಯಾಗಿ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಕಾರ್ಯಕರ್ತರ ಜತೆ ಸಭೆ, ಯೋಗ್ಯ ಅಭ್ಯರ್ಥಿಗಳಿಲ್ಲದ ಕಡೆ ಅಭ್ಯರ್ಥಿಗಳ ಆಯ್ಕೆಗೆ ಆದ್ಯತೆ ಮಾಡಲಾಗುವುದು. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಸಂಘಟನೆ ಬಲಪಡಿಸೋ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ 135-150 ಸೀಟ್ ಗೆದ್ದು ಅಧಿಕಾರಕ್ಕೆ ಬರುವ ಸಂಕಲ್ಪ ಮಾಡಿದ್ದೇನೆ. ಅಧಿಕಾರ ಇಲ್ಲದಿದ್ದರೂ ಒಳ್ಳೆಯ ಕೆಲಸಗಳನ್ನು ಮಾಡಲು ಸಾಧ್ಯವಿದೆ ಎಂದರು
ನಾಳೆ ಅಭಿಮಾನಿ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ
ಇನ್ನು ತಮ್ಮ ರಾಜೀನಾಮೆ ಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಗುಂಡ್ಲುಪೇಟೆ ರವಿ ಮನೆಗೆ ನಾಳೆ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ. ಅಭಿಮಾನಿಯ ಪ್ರಾಣತ್ಯಾಗ ಮನಸಿಗೆ ನೋವಾಗಿದೆ. ಯಾರೇ ಆಗಲಿ ಆ ರೀತಿ ನಿರ್ಧಾರ ಮಾಡಬಾರದು ಎಂದರು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ