BSY Fan Suicide: ಬಿಎಸ್​ವೈ ಕಣ್ಣೀರು ಕಂಡು ನೊಂದ ಅಭಿಮಾನಿ ಆತ್ಮಹತ್ಯೆ; ಹಂಗಾಮಿ ಸಿಎಂ ಸಂತಾಪ

ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರವಿ ಬೇಸರದಲ್ಲಿದ್ದರು. ಇಂದು ಮುಂಜಾನೆ ಬೇಜಾರಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 ಬಿ.ಎಸ್​.ಯಡಿಯೂರಪ್ಪ

ಬಿ.ಎಸ್​.ಯಡಿಯೂರಪ್ಪ

 • Share this:
  ಬೆಂಗಳೂರು(ಜು.27): ಬಿಎಸ್​ ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದ ಅವರ ಅಭಿಮಾನಿ ಇಂದು ನೇಣಿಗೆ ಶರಣಾಗಿರುವ ಘಟನೆ ಚಾಮರಾಜಗರದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ(35) ನೇಣಿಗೆ ಶರಣಾದ ಬಿಎಸ್​ವೈ ಅಭಿಮಾನಿ. ಇವರು ಟೀ ಕ್ಯಾಂಟೀನ್ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ ಟೀ ಕ್ಯಾಂಟೀನ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ಸಾವಿಗೀಡಾದ ರವಿ ವಿಪರೀತ ಸಾಲ ಮಾಡಿಕೊಂಡಿದ್ದರು. ಸಾಲದ ಜೊತೆಗೆ ನಿನ್ನೆ ಬಿಎಸ್​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರವಿ ಬೇಸರದಲ್ಲಿದ್ದರು. ಇಂದು ಮುಂಜಾನೆ ಬೇಜಾರಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

  ತಮ್ಮ ಅಭಿಮಾನಿ ಸಾವಿಗೆ ಹಂಗಾಮಿ ಸಿಎಂ ಬಿಎಸ್​ ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.

  BS Yediyurappa Resigns: ಯಡಿಯೂರಪ್ಪನವರ ಕಣ್ಣೀರಿನ ಶಾಪ ಮುಂದೆ ರಾಜ್ಯ ಬಿಜೆಪಿಗೆ ಸಂಕಷ್ಟ ತರಲಿದೆಯಾ?


  ರಾಜಕಾರಣದಲ್ಲಿ ಏರಿಳಿತಗಳು ಸಹಜ , ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.  ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು  ಹಂಗಾಮಿ ಸಿಎಂ ಬಿಎಸ್ವೈ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

  ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ನಿನ್ನೆ ಬಿಎಸ್​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷಗಳು ತುಂಬಿದ ಸಂಭ್ರಮ ಒಂದೆಡೆಯಾದರೆ, ಬಿಎಸ್​ವೈ ರಾಜೀನಾಮೆ ನೀಡಿದ್ದು ಮತ್ತೊಂದೆಡೆಯಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ ಸಾಧಕ ಸಮಾವೇಶದಲ್ಲಿ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಘೋಷಿಸಿದರು. ಬಳಿಕ ಅಲ್ಲಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಬಿಎಸ್​ವೈ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.

  ಇದನ್ನೂ ಓದಿ:Karnataka Weather Updates: ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

  ಮುಂದಿನ ಸಂಪುಟ ರಚನೆವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ರಾಜ್ಯಪಾಲರು ಬಿಎಸ್​ವೈಗೆ ಸೂಚನೆ ನೀಡಿದ್ದಾರೆ. ಯಡಿಯೂರಪ್ಪ ಕೇರ್ ಟೇಕರ್ ಮುಖ್ಯಮಂತ್ರಿಯಾಗಿ ಮುಂದುವರಿಯುಂತೆ ಆದೇಶ ನೀಡಲಾಗಿದೆ. ಮುಂದಿನ ಸಿಎಂ ಆಯ್ಕೆವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯಲು ಆದೇಶ ನೀಡಿದ್ದಾರೆ. ರಾಜೀನಾಮೆ ಅಂಗೀಕಾರದ ಬಳಿಕ ಬಿಎಸ್​ ಯಡಿಯೂರಪ್ಪ ಸಂಪುಟ ವಿಸರ್ಜನೆ ಆಗಿದೆ. ಮುಂದಿನ ಸಿಎಂ ಆಯ್ಕೆಯಾದ ಬಳಿಕ ಹೊಸ ಸಚಿವ ಸಂಪುಟ ರಚನೆ ಆಗಲಿದೆ. ಅಲ್ಲಿಯರೆಗೂ ಬಿಎಸ್​ವೈ ಕೇರ್ ಟೇಕರ್​ ಆಗಿ ಮುಂದುವರೆಯುತ್ತಾರೆ.

  ಬಿಎಸ್ ಯಡಿಯೂರಪ್ಪ ಅವರ ರಾಜೀನಾಮೆ ಅಂಗೀಕರಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿರುವಂತೆ ಬಿಎಸ್ ಯಡಿಯೂರಪ್ಪಗೆ ಸೂಚನೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದ ಪತನದ ನಂತರ 2019 ಜುಲೈ 26 ರಂದು ಬಿಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
  Published by:Latha CG
  First published: