BS Yediyurappa: ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಯಡಿಯೂರಪ್ಪ; ರಾಜಾಹುಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ

1983ರಿಂದ ಇಲ್ಲಿಯವರಗೆ ಶಿಕಾರಿಪುರ ಕ್ಷೇತ್ರ ಯಡಿಯೂರಪ್ಪ ಅವರ ಭದ್ರಕೋಟೆಯಾಗಿದೆ. 2023ರ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದೆ.

ಬಿ.ಎಸ್.ಯಡಿಯೂರಪ್ಪ

ಬಿ.ಎಸ್.ಯಡಿಯೂರಪ್ಪ

  • Share this:
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Former CM BS Yediyurappa) ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದು, ತಮ್ಮ ಕ್ಷೇತ್ರವನ್ನು ಕಿರಿಯ ಪುತ್ರ, ಬಿ ವೈ ವಿಜಯೇಂದ್ರ (BY Vijayendra) ಅವರಿಗೆ ಬಿಟ್ಟುಕೊಡೋದಾಗಿ ಯಡಿಯೂರಪ್ಪನವರು ಹೇಳಿದ್ದಾರೆ. 1983ರಿಂದ ಶಿಕಾರಿಪುರ (Shikaripura) ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಯಡಿಯೂರಪ್ಪನವರು ಒಟ್ಟು  8 ಬಾರಿ ಗೆದ್ದಿದ್ದಾರೆ. 1999ರಲ್ಲಿ ಒಮ್ಮೆ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾದಾಗ, ಹಿರಿಯ ಪುತ್ರ ಬಿ.ವೈ.ರಾಘವೇಂದ್ರ  (BY Raghavendra) ಉಪ ಚುನಾವಣೆಯಲ್ಲಿ (By Election) ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. 1983ರಿಂದ ಇಲ್ಲಿಯವರಗೆ ಶಿಕಾರಿಪುರ ಕ್ಷೇತ್ರ ಯಡಿಯೂರಪ್ಪ ಅವರ ಭದ್ರಕೋಟೆಯಾಗಿದೆ. 2023ರ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾಗಿದೆ.

2018ರ ಚುನಾವಣೆ ವೇಳೆ ವಿಜಯೇಂದ್ರ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು. 2018ರಲ್ಲಿ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ವಿರುದ್ಧ ಸ್ಪರ್ಧೆ ಮಾಡ್ತಾರೆ ಎಂದು ಬಿಂಬಿತವಾಗಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಎಲ್ಲವೂ ಅದಲು-ಬದಲು ಆಗಿತ್ತು.

ಯಡಿಯೂರಪ್ಪ ನಿವೃತ್ತಿ; ವಿಜಯೇಂದ್ರ ಮೊದಲ ಪ್ರತಿಕ್ರಿಯೆ

ತಂದೆ ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಟ್ಟ ವಿಚಾರಕ್ಕೆ ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರ ಮಾರ್ಗದರ್ಶನ ಹಾಗೂ ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ. ಅದನ್ನು ಆಧರಿಸಿಯೇ ನಾನು ಮುಂದಿನ ನಿರ್ಧಾರ ಮಾಡ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:   Karnataka Politics: ಬಿಜೆಪಿಗೆ ಹೊಸ ಅಸ್ತ್ರ ನೀಡಿದ ರಮೇಶ್ ಕುಮಾರ್; ಕಾಂಗ್ರೆಸ್ ವಿರುದ್ಧ ಕಮಲ ನಾಯಕರ ವಾಗ್ದಾಳಿ

ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡೋದು ನನ್ನ ಆದ್ಯ ಕರ್ತವ್ಯ. ಹಿಂದಿನಿಂದಲೂ ಅದನ್ನೇ ಮಾಡಿದ್ದೇನೆ.. ಮುಂದಿನ ದಿನಗಳಲ್ಲಿಯೂ ನಡೆದುಕೊಳ್ಳುತ್ತೇನೆ.

ಪಕ್ಷ ಏನು ಮಾಡುತ್ತೆ, ಅದನ್ನ ಆಧರಿಸಿ ತೀರ್ಮಾನ

ಶಿಕಾರಿಪುರದ ಮುಖಂಡರು, ಕಾರ್ಯಕರ್ತರು ತಂದೆಯ ಮೇಲೆ ಒತ್ತಡ ಹೇರಿದ್ದರು. ತಿಂಗಳ ಹಿಂದೆ ಬೆಂಗಳೂರಿಗೂ ಬಂದು, ಒತ್ತಡ ಕೂಡ ಹಾಕಿದ್ದರು. ಅದರಂತೆ ತಂದೆಯವರು ಇಂದು ತೀರ್ಮಾನ ಪ್ರಕಟಿಸಿದ್ದಾರೆ.  ಇದರ ಜೊತೆ ಪಕ್ಷ ಏನು ತೀರ್ಮಾನ ಮಾಡುತ್ತೆ. ಅದನ್ನು ಅಧರಿಸಿ, ನಾನು ನಿರ್ಧಾರ ಮಾಡುವೆ ಎಂದು ತಿಳಿಸಿದರು.

ಈ ವಿಚಾರದಲ್ಲಿ ನಾನು ತಂದೆ ಮೇಲೆ ಒತ್ತಡ ಹಾಕುವ ಪ್ರಶ್ನೆಯೇ ಉದ್ಭವಿಸಲ್ಲ. ಯಡಿಯೂರಪ್ಪನವರಿಗೆ ನಿವೃತ್ತಿ ಅನ್ನೋದು ಸಂಬಂಧ ಇಲ್ಲ. ಅವರ ಡಿಕ್ಷನರಿಯಲ್ಲಿ ನಿವೃತ್ತಿ ಎನ್ನುವ ಪದ ಇಲ್ಲ. ಈ ಹಿಂದೆ ಕೂಡ ಬಿಜೆಪಿ ಸಂಘಟನೆ ಕೆಲಸ ಮಾಡಿದ್ರು, ಮುಂದೆನೂ ಮಾಡ್ತಾರೆ ಎಂದು ಹೇಳಿದರು.

ರಾಜ್ಯಾದ್ಯಂತ ಪ್ರವಾಸ ಮಾಡ್ತಾರೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆಯೇ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ವಿಪಕ್ಷಗಳಿಗೆ ಸವಾಲು ಕೂಡ ಹಾಕಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡ್ತಾರೆ.. ಅಧಿಕಾರಕ್ಕೆ ತರಲು ಶ್ರಮ ಹಾಕ್ತಾರೆ ಎಂದು ಚುನಾವಣೆ ಪ್ರಚಾರ ಮತ್ತು ಪಕ್ಷ ಸಂಘಟನೆಯ ಮಾಹಿತಿ ನೀಡಿದರು.

ಕಾಂಗ್ರೆಸ್ ಸೋಲು ನಿಶ್ಚಿತ, ಬಿಜೆಪಿ ಅಧಿಕಾರಕ್ಕೆ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ. ಇಲ್ಲ ಸಲ್ಲದ ಕಾರಣ ಹೇಳಿ ಕಾಂಗ್ರೆಸ್ ಗಲಾಟೆ ಎಬ್ಬಿಸುತ್ತಿದೆ. ಇಡಿ ತನ್ನ ಕರ್ತವ್ಯ ಮಾಡುತ್ತಿದೆ. ಅವರ ಕರ್ತವ್ಯಕ್ಕೂ ಅಡ್ಡಿ ಆತಂಕ ತರುವುದು ಶೋಭೆ ತರದು. ಅವರು ತಪ್ಪೇ ಮಾಡದಿದ್ದರೆ ಚಿಂತೆ ಮಾಡೋದೇಕೆ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:  Hubballi: ಮೊದಲು ಶವ ಅಂದ್ಕೊಂಡ್ರು, ವ್ಯಕ್ತಿಯ ಅಲುಗಾಟ ನೋಡಿ ಹೌಹಾರಿದ ಜನರು

ಕಾಂಗ್ರೆಸ್ ಏನೇ ಸರ್ಕಸ್ ಮಾಡಿದರೂ ಬಿಜೆಪಿಗೆ ಸ್ಪಷ್ಟ ಬಹುಮತ ಬರುತ್ತದೆ, ರಾಜ್ಯದಲ್ಲಿ ಬಿಜೆಪಿಯವರೇ ಮುಖ್ಯಮಂತ್ರಿ ಆಗ್ತಾರೆ.  ಭ್ರಮೆಯಲ್ಲಿ ನಾನೇ ಸಿಎಂ‌ ಅಂತ ಇಬ್ಬರು ಕಚ್ಚಾಟ ಮಾಡುತ್ತಿರುವುದನ್ನು ಜನ ನೋಡ್ತಾ ಇದ್ದಾರೆ. ಅವರು ಹಾಗೇ ಕಚ್ಚಾಡುತ್ತಿರಲಿ, ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಯಡಿಯೂರಪ್ಪ ಅವರು ಭವಿಷ್ಯ ನುಡಿದರು.
Published by:Mahmadrafik K
First published: