ಬೆಂಗಳೂರು: ಸೋಲಿಲ್ಲದ ಸರದಾರನಿಗೆ ಸೋಲಿನ ರುಚಿ ತೋರಿಸಲು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿರುವ ಮಾಜಿ ಸಿಎಂ ಜಗದೀಶ್ ಶಟ್ಟರ್ (Former CM Jagadish Shettar) ಸೋಲಿಸಲು ಕಮಲ ನಾಯಕರು ಮುಂದಾಗಿದ್ದಾರೆ. ಜಗದೀಶ್ ಶೆಟ್ಟರ್ ಭಾರೀ ಅಂತರಗಳಿಂದ ಸೋಲಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah) ಭವಿಷ್ಯ ನುಡಿದ್ದಾರೆ. ಇತ್ತ ಬಿಜೆಪಿ ರಾಜ್ಯದ ಲಿಂಗಾಯತರ ನಾಯಕರಿಗೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಆರೋಪದಿಂದ ಹೊರ ಬರಲು ಜಗದೀಶ್ ಶೆಟ್ಟರ್ ವಿರುದ್ಧ ಯಡಿಯೂರಪ್ಪ ಅವರನ್ನೇ ಪ್ರಚಾರಕ್ಕೆ ಬಿಜೆಪಿ ಇಳಿಸಿದೆ.
ಕಾಂಗ್ರೆಸ್ ಮಾಡಿರುವ ಆರೋಪದಿಂದ ಮುಕ್ತವಾಗಲು ಶಟ್ಟರ್ ಸೋಲಿಸುವುದು ಮಾತ್ರ ಪರಿಹಾರ ಎಂದು ಬಿಜೆಪಿ ಲೆಕ್ಕ ಹಾಕಿದೆ. ಕೇಂದ್ರದಲ್ಲಿ ಲೀಡರ್ ಬೇಸ್ ಪಾರ್ಟಿ ಇಲ್ಲ. ಕೇಡರ್ ಬೇಸ್ ಪಾರ್ಟಿ ಎಂದು ಸಾಬೀತುಪಡಿಸಲು ಬಿಜೆಪಿ ಹರಸಾಹಸ ಮಾಡುತ್ತಿದೆ.
ಲಿಂಗಾಯತ ಮುಖಂಡರ ಜೊತೆ ಸಭೆ
ಜಗದೀಶ್ ಶೆಟ್ಟರ್ ಸೋಲಿಸಲು ಹುಬ್ಬಳ್ಳಿಯತ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಶಿ, ಜೆಪಿ ನಡ್ಡಾ, ಅಮಿತ್ ಶಾ, ಯಡಿಯೂರಪ್ಪನ ಆಗಮಿಸುತ್ತಿದ್ದಾರೆ. ಸ್ಥಳೀಯ ಲಿಂಗಾಯತ ಮುಖಂಡರ ಜೊತೆಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ.
ನಿನ್ನೆ ನಡೆದ ಲಿಂಗಾಯತ ಮುಖಂಡರ ಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಸೋಲಿಸಲು ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ. ಜಗದೀಶ್ ಶೆಟ್ಟರ್ ಪಕ್ಷ ದ್ರೋಹ ಕೆಲಸ ಮಾಡಿದ್ದಾರೆ. ಸೋಲರಿಯದ ಸರದಾರನಿಗೆ ಸೋಲಿನ ರುಚಿ ತೋರಿಸಿ. ಇದನ್ನ ಸವಾಲಾಗಿ ಎಲ್ಲರೂ ಸ್ವೀಕರಿಸಬೇಕು ಎಂದು ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ.
ಇಂದು ಸೆಂಟ್ರಲ್ ಕ್ಷೇತ್ರದಲ್ಲಿ ಯಡಿಯೂರಪ್ಪ ಬೃಹತ್ ರೋಡ್ ಶೋ ಮಾಡುವ ಮೂಲಕ ಜಗದೀಶ್ ಶೆಟ್ಟರ್ಗೆ ಟಾಂಗ್ ಕೊಡಲಿದ್ದಾರೆ.
ಇದನ್ನೂ ಓದಿ: Yogi Adityanath: ಒಕ್ಕಲಿಗರನ್ನು ಸೆಳೆಯಲು ಯೋಗಿ ಆದಿತ್ಯ'ನಾಥ' ಅಸ್ತ್ರ! ಸಕ್ಸಸ್ ಆಗುತ್ತಾ ಕೇಸರಿ ಪಾಳೆಯದ ರಣತಂತ್ರ?
ಮುದ್ರಣ ಕಾಶಿಯಲ್ಲಿಂದು ಕೇಸರಿ ನಾಯಕರ ಪ್ರಚಾರ ಅಬ್ಬರ
ಮುದ್ರಣ ಕಾಶಿ ಗದಗ ಮತ್ತು ನರಗುಂದದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ