ಮಾಜಿ ಸಚಿವ ಜನಾರ್ದನ ರೆಡ್ಡಿ (Former CM BS Yediyurappa) ಅವರನ್ನು ಬಿಜೆಪಿಯಲ್ಲಿಯೇ (BJP) ಉಳಿಸಿಕೊಳ್ಳುವ ಮಹತ್ವದ ಸುಳಿವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ನೀಡಿದ್ದಾರೆ. ಜನಾರ್ದನ ರೆಡ್ಡಿ ನನಗೆ ಸಿಕ್ಕಿದ್ದರು. ಅವರನ್ನು ನೆಗಲೆಕ್ಟ್ ಮಾಡುವ ಪ್ರಶ್ನೆ ಇಲ್ಲ. ಅವರ ಮೇಲೆ ಕೆಲ ಪ್ರಕರಣಗಳಿದ್ದು, ಅವುಗಳು ಮುಗಿದ ನಂತರ ಜನಾರ್ದನ ರೆಡ್ಡಿ ಬಿಜೆಪಿಯಲ್ಲಿ ಇರುತ್ತಾರೆ. ಪ್ರಕರಣಗಳು ಇತ್ಯರ್ಥವಾದ ಬಳಿಕ ಜನಾರ್ದನ ರೆಡ್ಡಿಯವರನ್ನು ಪಕ್ಷಕ್ಕೆ ಕರೆದುಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದರು. ಈಗ ಗಂಗಾವತಿಯಲ್ಲಿ (Gangavati) ಮನೆ ಮಾಡಿದ್ದರಿಂದ ಈ ಗೊಂದಲವಿದೆ. ಆದರೆ ಅವರು ನಮ್ಮೊಂದಿಗೆ ಇರುತ್ತಾರೆ ಎಂದು ಹೇಳುವ ಮೂಲಕ ಹೊಸ ಪಕ್ಷ ಸ್ಥಾಪನೆ ಮಾಡಲ್ಲ ಎಂದ ಸುಳಿವು ನೀಡಿದರು.
ಪ್ರಿಯಾಂಕ ಖರ್ಗೆ ಬಿಜೆಪಿ ಮೂರು ಬಾಗಿಲು ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಅದು ಅವರ ದೌರ್ಬಲ್ಯ ತೋರಿಸುತ್ತದೆ. ನಾನು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ. ಈಗ ನನಗಿರುವುದು ಒಂದು ಆಸೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋದು. ವಿಜಯೇಂದ್ರ ಎಲ್ಲಿ ಸ್ಪರ್ಧಿಸಬೇಕೆನ್ನುವುದನ್ನು ಪಕ್ಷ ನಿರ್ಧರಿಸುತ್ತದೆ. ಕಾಂಗ್ರೆಸ್ ಪ್ರತ್ಯೇಕ ಯಾತ್ರೆ ಬಗ್ಗೆ ನಾನೇನು ಹೇಳುವುದಿಲ್ಲ ಅದು ಅವರ ಪಕ್ಷದ ವಿಚಾರ ಎಂದರು.
ನನ್ನನ್ನು ಯಾರೂ ದೂರವಿಟ್ಟಿಲ್ಲ
ನಿನ್ನೆ ಕಾರ್ಯಕ್ರಮಕ್ಕೆ ಆಹ್ವಾನ ಹಿನ್ನೆಲೆ ಬಂದಿದ್ದೇನೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ. ಯಾರೋ ನಾನೇ ಸಿಎಂ ಎಂದು ಹೇಳಿಕೊಳ್ಳುತ್ತಿದ್ದಾರೆ. ಭಾರತೀಯ ಜನತಾ ಪಕ್ಷ ಕಟ್ಟಿದ್ದರಲ್ಲಿ ನಾನು ಒಬ್ಬ. ನನ್ನನ್ನು ಯಾರೂ ದೂರವಿಟ್ಟಿಲ್ಲ. ಯಾರೋ ಯಾರನ್ನ ನಿರ್ಲಕ್ಷ್ಯ ಮಾಡಿದ್ದಾರೆ ಅನ್ನೋದು ಸುಳ್ಳು ಎಂದರು.
ಇದನ್ನು ಓದಿ: Janardhan Reddy: ಜನಾರ್ದನ ರೆಡ್ಡಿ ಮುಂದೆ ಹೊಸ ಆಯ್ಕೆ; ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದ್ರಾ?
ಸ್ಪಷ್ಟ ಬಹುಮತದೊಂದಿಗೆ ಅಧಿಕಾರ
ಇವತ್ತು ನಾನು ಕಾರ್ಯಕ್ರಮಕ್ಕೆ ಹೋಗುವ ಸ್ಥಿತಿಯಲ್ಲಿ ಇರಲಿಲ್ಲ. ಬರಲೇಬೇಕು ಎಂದು ಒತ್ತಾಯ ಬಂದ ಹಿನ್ನೆಲೆ ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ.
ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷ ಕಟ್ಟಿ ಬೆಳೆಸಿದ್ದೇನೆ
ನನ್ನನ್ನ ಪಕ್ಷ ನೆಗಲೆಟ್ ಮಾಡ್ತಿಲ್ಲ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದೇ ವೇಳೆ ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.
ರಾಜಕೀಯದ 2ನೇ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಇದಕ್ಕಾಗಿ ಅಖಾಡ ಸಜ್ಜುಗೊಳಿಸಿದ್ದಾರೆ. ಗಂಗಾವತಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ರೆಡ್ಡಿ ಇದಕ್ಕಾಗಿ ಜನರೊಂದಿಗೆ ಬೆರೆಯಲು ಇಲ್ಲೇ ನೂತನ ಮನೆ ನಿರ್ಮಿಸಿದ್ದಾರೆ. ಬಿಜೆಪಿಯಿಂದ ದೂರ ಸರಿದಿರುವ ಅವರು ಹೊಸ ಪಕ್ಷ ಕಟ್ಟಲು ರಣತಂತ್ರ ತಯಾರಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ