HOME » NEWS » State » BS YEDIYURAPPA GOVERNMENT FAILED IN KARNATAKA FLOOD MANAGEMENT CONGRESS LEADERS ACCUSED SCT

ಪ್ರವಾಹ ಪರಿಸ್ಥಿತಿಗೆ ನೀಡಲಾದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ಕಾಂಗ್ರೆಸ್ ಒತ್ತಾಯ

ಕಳೆದ ವರ್ಷ ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಎಷ್ಟು ಮನೆ ಕಟ್ಟಿ ಕೊಟ್ಟಿದೆ? ಯಾವ ರೀತಿ ಅವರಿಗೆ ಸಹಾಯ ಆಗಿದೆ ಅನ್ನೋದರ ಬಗ್ಗೆ ಶ್ವೇತಪತ್ರ ಹೊರಡಿಸಲಿ. ಪ್ರವಾಹದಿಂದ 10 ಸಾವಿರ ಕೋಟಿ ನಷ್ಟವಾಗಿದೆ. ಆದರೆ 450 ಕೋಟಿ ರೂ. ಮಾತ್ರ ಪರಿಹಾರಕ್ಕೆ ಸಿಎಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

news18-kannada
Updated:August 26, 2020, 2:08 PM IST
ಪ್ರವಾಹ ಪರಿಸ್ಥಿತಿಗೆ ನೀಡಲಾದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ; ಕಾಂಗ್ರೆಸ್ ಒತ್ತಾಯ
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ.
  • Share this:
ಬೆಂಗಳೂರು (ಆ. 26): ಕರ್ನಾಟಕದ ಪ್ರವಾಹ ಸ್ಥಿತಿಗೆ ನೀಡಲಾದ ಅನುದಾನದ ಬಗ್ಗೆ ರಾಜ್ಯ ಸರ್ಕಾರ ಶ್ವೇತ ಪತ್ರ ಹೊರಡಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. 

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತಾದ ವಿಷಯದ ಬಗ್ಗೆ ಕಾಂಗ್ರೆಸ್ ನಾಯಕರಾದ ಈಶ್ವರ್ ಖಂಡ್ರೆ , ಪ್ರಿಯಾಂಕ್ ಖರ್ಗೆ  ಸುದ್ದಿಗೋಷ್ಠಿ ನಡೆಸಿದರು. ‌ರಾಜ್ಯದ 56 ತಾಲ್ಲೂಕು, 1000ಕ್ಕೂ ಹೆಚ್ಚು ಹಳ್ಳಿಗಳಿಗೆ ನೆರೆ ಬಿಸಿ ತಟ್ಟಿದೆ.  3,000 ಮನೆಗಳು ಕುಸಿತವಾಗಿದ್ದು, 80 ಸಾವಿರ ಹೆಕ್ಟೇರ್ ಬೆಳೆ ನಾಶವಾಗಿದೆ. 3,500 ಕಿ.ಮೀ. ರಸ್ತೆ ಹಾಳಾಗಿದೆ. 365 ಕಟ್ಟಡ, 250 ಸೇತುವೆ ಪ್ರವಾಹದಿಂದ ಕುಸಿದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಹೋದ ವರ್ಷ ಬಂದ ನೆರೆಗೂ ಜನ ತತ್ತರಿಸಿ ಹೋಗಿದ್ದರು. ಆ ಸಂದರ್ಭದಲ್ಲಿ ಸಹ ಜನ ರಕ್ಷಣೆ ಗೆ ಬರುವಲ್ಲಿ ರಾಜ್ಯ ಬಿಜೆಪಿ  ಸರ್ಕಾರ ವಿಫಲವಾಯಿತು. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಸಹ ಜನರ ರಕ್ಷಣೆಗೆ ಬರಲಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಬಿ.ವೈ. ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕರಿಂದಲೇ 5 ಸಾವಿರ ಕೋಟಿ ರೂ. ಭ್ರಷ್ಟಾಚಾರದ ಆರೋಪ!

ಚುನಾವಣೆ ಸಮಯದಲ್ಲಿ ನಮ್ಮದು ಡಬಲ್ ಎಂಜಿನ್ ಸರ್ಕಾರ ಅಂತ ಹೇಳಿದ್ದರು. ಆದರೆ, ಕೇಂದ್ರ ಸರ್ಕಾರ ಜನರ ಸಂಕಷ್ಟಗಳಿಗೆ ಮಾತ್ರ  ಸ್ಪಂದಿಸುತ್ತಿಲ್ಲ.ಕಳೆದ ಬಾರಿ ಸೌಜನ್ಯಕ್ಕೂ ರಾಜ್ಯದ ನೆರೆ ಅಧ್ಯಯನಕ್ಕೆ ಪಿಎಂ ಮೋದಿ ಬರಲಿಲ್ಲ. ಕಳೆದ ವರ್ಷ ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಎಷ್ಟು ಮನೆ ಕಟ್ಟಿ ಕೊಟ್ಟಿದೆ? ಯಾವ ರೀತಿ ಅವರಿಗೆ ಸಹಾಯ ಆಗಿದೆ ಅನ್ನೋದರ ಬಗ್ಗೆ  ಶ್ವೇತಪತ್ರ ಹೊರಡಿಸಲಿ. ಪ್ರವಾಹದಿಂದ 10 ಸಾವಿರ ಕೋಟಿ ನಷ್ಟವಾಗಿದೆ. ಆದರೆ 450 ಕೋಟಿ ರೂ. ಮಾತ್ರ ಪರಿಹಾರಕ್ಕೆ ಸಿಎಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪ್ರಧಾನಿಯವರಿಗೆ ಇವರು ಹೆದರುತ್ತಿದ್ದಾರೆ. 25 ಸಂಸದರು ರಾಜ್ಯದಿಂದ ಗೆದ್ದಿದ್ದಾರೆ. ಅವರು ಯಾರೂ ಇಲ್ಲಿಯವರೆಗೆ ಪ್ರಧಾನಿಯವರ ಮೇಲೆ ಒತ್ತಡ ತರುತ್ತಿಲ್ಲ. ಅಂಜುಬುರುಕ ಸಂಸದರನ್ನು ರಾಜ್ಯದ ಜನ ಆರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದಾರೆ.
Youtube Video

ಸಿಎಂ ಪ್ರವಾಹ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರು ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ನೆರವು ಘೋಷಣೆ ಮಾಡಿಲ್ಲ. 14 ಸಾವಿರ ಮಂದಿಗೆ ಪರಿಹಾರವೇ ಸಿಕ್ಕಿಲ್ಲ. ರಾಜ್ಯ ಸರ್ಕಾರದ ಬೊಕ್ಕಸ ಸಂಪೂರ್ಣ ಖಾಲಿಯಾಗಿದೆ. ಕೂಡಲೇ ಸರ್ಕಾರ ಕೇಂದ್ರಕ್ಕೆ ನಿಯೋಗ ಕರೆದೊಯ್ಯಬೇಕು  ಅನ್ನುವುದು ನನ್ನ ಆಗ್ರಹ. ತಕ್ಷಣಕ್ಕೆ ಕೇಂದ್ರ ಸರ್ಕಾರ 5,000 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಿ. ಕೇಂದ್ರದ ವಿತ್ತ ಸಚಿವರು ನಮ್ಮ ರಾಜ್ಯದ ಪ್ರತಿನಿಧಿ. ಇವರು ರಾಜ್ಯಕ್ಕೆ ಯಾವುದೇ ನೆರವು ಘೋಷಿಸುತ್ತಿಲ್ಲ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೆರೆ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಆದರೆ, ಪರಿಹಾರ ಘೋಷಣೆ ಮಾಡಿಲ್ಲ ಎಂದು ಈಶ್ವರ ಖಂಡ್ರೆ ಆರೋಪಿಸಿದ್ದಾರೆ.
Published by: Sushma Chakre
First published: August 26, 2020, 2:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories