HOME » NEWS » State » BS YEDIYURAPPA MAY SELECT CANDIDATES FOR RAJYASABHA ELECTION AFTER CABINET MEETING ON WEEKEND HK

ಜೂ.19ಕ್ಕೆ ರಾಜ್ಯಸಭಾ ಚುನಾವಣೆ: ವಾರಾಂತ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ

ಈ ವಾರಾಂತ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಸಿಎಂ ಬಿ ಎಸ್ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ

news18-kannada
Updated:June 2, 2020, 12:23 PM IST
ಜೂ.19ಕ್ಕೆ ರಾಜ್ಯಸಭಾ ಚುನಾವಣೆ: ವಾರಾಂತ್ಯದಲ್ಲಿ ಬಿಜೆಪಿಯಿಂದ ಅಭ್ಯರ್ಥಿ ಆಯ್ಕೆ
ಬಿಜೆಪಿ
  • Share this:
ಬೆಂಗಳೂರು(ಜೂ. 02): ಜೂನ್ 19 ಕ್ಕೆ ರಾಜ್ಯದಲ್ಲಿ ಖಾಲಿಯಾಗಿರುವ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮೂರು ರಾಜಕೀಯ ಪಕ್ಷಗಳು ಸಿದ್ದತೆಗೆ ಮುಂದಾಗಿವೆ. ಮುಖ್ಯವಾಗಿ ರಾಜ್ಯದಲ್ಲಿ ಆಡಳಿತವಿರುವ ಬಿಜೆಪಿ ಕೂಡ ಎರಡು ಸ್ಥಾನಗಳಿಗೆ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನ ಮಾಡಿದೆ. 

ಚುನಾವಣೆಗೆ ಮುನ್ನ ಶಾಸಕರ ಅಭಿಪ್ರಾಯ ಸಂಗ್ರಹಿಸುವುದು ಶಾಸಕಾಂಗ ಪಕ್ಷ ನಾಯಕರ ಜವಾಬ್ದಾರಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂಡ ತನ್ನ ಪಕ್ಷದ ಶಾಸಕರ ಜೊತೆ ಸಭೆಗೆ ಮುಂದಾಗಿದ್ದಾರೆ. ಈ ವಾರಾಂತ್ಯದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಬಿ ಎಸ್ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಈಗಾಗಲೇ ಬಿಜೆಪಿಯಲ್ಲಿ ರಾಜ್ಯಸಭೆಗೆ ತುಂಬಾ ಜನ ಅಭ್ಯರ್ಥಿ ಆಕಾಂಕ್ಷಿಗಳಿದ್ದಾರೆ.

ಮುಖ್ಯವಾಗಿ ಪ್ರಭಾಕರ್ ಕೋರೆ, ರಮೇಶ್ ಕತ್ತಿ, ತೇಜಸ್ವಿನಿ ಅನಂತಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ ಮುರುಳೀಧರ ರಾವ್ ಸೇರಿದಂತೆ ಹಲವರು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಅಂದಿನ ಸಭೆಯಲ್ಲಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಶಾಸಕರಿಂದ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತದೆ.

ಈಗಾಗಲೇ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ ಕಾರಣವೇ ರಾಜ್ಯಸಭೆ ಚುನಾವಣೆಯ ಟಿಕೆಟ್. ತನ್ನ ಸಹೋದರನಿಗೆ ಟಿಕೆಟ್ ಕೊಡಿಸಲು ಉಮೇಶ್ ಕತ್ತಿ ಬಿಜೆಪಿ ಶಾಸಕರರನ್ನು ಸೇರಿಸಿಕೊಂಡು ಸಭೆ ಮಾಡಿದ್ದಾರೆ. ಅಲ್ಲದೇ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ಕೊಡಿಸುವಲ್ಲಿ ಪಣ ತೊಟ್ಟಿದ್ದಾರೆ. ಹೀಗಾಗಿ ಮುಂದೆ ಏನಾದರೂ ರಮೇಶ್ ಕತ್ತಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿಲ್ಲ ಅಂದರೆ ಸದ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಮತ್ತಷ್ಟು ಸ್ಫೋಟಗೊಳ್ಳುವ ಸಾಧ್ಯತೆ ಇದೆ.

ಹೀಗಾಗಿ ಸಿಎಂ ಯಡಿಯೂರಪ್ಪ ಭಿನ್ನಮತ ಸ್ಪೋಟಕ್ಕೂ ಮುನ್ನ ಆ ಶಾಸಕರ ಜೊತೆ ಮಾತನಾಡಿ, ಅವರ ಅಭಿಪ್ರಾಯ ಸಂಗ್ರಹ ಮಾಡಿ ಅದರ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲು ಮುಂದಾಗಿದ್ದಾರೆ. ಇನ್ನು ಈ ಸಭೆಯ‌ ನೆಪದಲ್ಲಿ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಶಮನ ಮಾಡಲು ಸಿಎಂ ಪ್ಲಾನ್ ರೂಪಿಸಿದ್ದಾರೆ.

ಇದನ್ನೂ ಓದಿ : ಡಿಕೆಶಿ ವಿರುದ್ಧ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಬಹಿರಂಗ ಅಸಮಾಧಾನ

ಯಾರೆಲ್ಲ ಅವತ್ತು ಪ್ರತ್ಯೇಕವಾಗಿ ಸಭೆ ನಡೆಸಿದ್ದರೋ ಅಂತಹ ಶಾಸಕರ ಜೊತೆ ಮಾತನಾಡಿ, ಅವರ ಬೇಡಿಕೆ ಈಡೇರಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ ಅವರಲ್ಲಿ ಕೆಲವರಿಗೆ ಮಂತ್ರಿ ಮಾಡುವುದು ಹಾಗೂ ಅವರ ಕ್ಷೇತ್ರಕ್ಕೆ ಅನುದಾನ ನೀಡುವುದರ ಮೂಲಕ ಅವರನ್ನು ಸಮಾಧಾನಪಡಿಸಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ.
Youtube Video
First published: June 2, 2020, 12:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories