ವಿಧಾನಮಂಡಲ ಅಧಿವೇಶನಕ್ಕೆ ದಿನಗಣನೆ; ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆದಿರುವ ಸಿಎಂ ಯಡಿಯೂರಪ್ಪ

ಸರ್ಕಾರದ ಬೊಕ್ಕಸ ಖಾಲಿಯಾಗಿರುವ ವಿಚಾರವನ್ನೂ ಮುಂದಿಟ್ಟು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳ ನಿರ್ಧರಿಸಿವೆ. ಹೀಗಾಗಿ ಬಿಜೆಪಿ ಅಧಿಕಾರ ಅವಧಿಯಲ್ಲಿ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ಎಂದು ಅಂಕಿಅಂಶಗಳ ಸಮೇತ ವಿಧಾನ ಮಂಡಲ ಅಧಿವೇಶನದಲ್ಲಿ ಉತ್ತರಿಸಲು ಯಡಿಯೂರಪ್ಪ ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.

MAshok Kumar | news18-kannada
Updated:October 8, 2019, 1:43 PM IST
ವಿಧಾನಮಂಡಲ ಅಧಿವೇಶನಕ್ಕೆ ದಿನಗಣನೆ; ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆದಿರುವ ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
  • Share this:
ಬೆಂಗಳೂರು (ಅಕ್ಟೋಬರ್ 08); ಇದೇ ತಿಂಗಳ 10 ರಿಂದ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಪ್ರವಾಹ ಪರಿಹಾರ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟು ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧಗಳು ರಣತಂತ್ರ ಹೆಣೆಯುತ್ತಿವೆ. ಆದರೆ, ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಅಂಕಿಅಂಶಗಳ ಸಹಿತ ಉತ್ತರ ನೀಡಲು ಸಿಎಂ ಯಡಿಯೂರಪ್ಪ ದಾಖಲೆಗಳೊಂದಿಗೆ ಸಜ್ಜಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಬುಧವಾರ ಸಂಜೆ 4 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರ ಸಭೆ ಕರೆದಿರುವ ಯಡಿಯೂರಪ್ಪ ಪ್ರವಾಹ ಪರಿಹಾರ ಕಾರ್ಯಗಳು, ಇಲಾಖಾವಾರು ಪ್ರಗತಿ, ತೆರಿಗೆ ಸಂಗ್ರಹ ಕುರಿತು ಅಂಕಿ ಅಂಶಗಳನ್ನು ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನೂ ಸರ್ಕಾರದ ಬೊಕ್ಕಸ ಖಾಲಿಯಾಗಿರುವ ವಿಚಾರವನ್ನೂ ಮುಂದಿಟ್ಟು ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳ ನಿರ್ಧರಿಸಿವೆ. ಹೀಗಾಗಿ ಬಿಜೆಪಿ ಅಧಿಕಾರ ಅವಧಿಯಲ್ಲಿ ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ ಎಂದು ಅಂಕಿಅಂಶಗಳ ಸಮೇತ ವಿಧಾನ ಮಂಡಲ ಅಧಿವೇಶನದಲ್ಲಿ ಉತ್ತರಿಸಲು ಯಡಿಯೂರಪ್ಪ ಸಜ್ಜಾಗಿದ್ದಾರೆ.

ಇದೇ ವಿಚಾರಕ್ಕೆ ನಾಳೆ ಸಭೆ ಕರೆದು ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಿ ವಿರೋಧ ಪಕ್ಷಕ್ಕೆ ತಿರುಗೇಟು ನೀಡಲು ನಿರ್ಧರಿಸಿರುವ ಯಡಿಯೂರಪ್ಪ, ಇದೇ ಸಂದರ್ಭದಲ್ಲಿ ಸರ್ಕಾರದ ಭವಿಷ್ಯದ ಯೋಜನೆಗಳ ಬಗ್ಗೆಯೂ ಅಧಿವೇಶನದಲ್ಲಿ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ : ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸಲಿದೆ; ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ

First published: October 8, 2019, 1:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading