ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರನ್ನು (Siddaramaiah) ಸೋಲಿಸಲು ಕೇಸರಿ ಪಡೆ ರಣತಂತ್ರ ರೂಪಿಸುತ್ತಿದೆ. ವರುಣಾದಲ್ಲಿ (Varuna) ಟಫ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ಸಜ್ಜಾಗಿದೆ ಎನ್ನಲಾಗಿತ್ತು. ಈ ಕುರಿತು ಮಾತನಾಡಿರುವ ಸಿಎಂ ಬೊಮ್ಮಾಯಿ (Basavaraj Bommai), ವರುಣಾದಲ್ಲಿ ನಾವು ಖಂಡಿತವಾಗಿ ಪ್ರಬಲವಾದ ಪೈಪೋಟಿ ನೀಡುತ್ತೇವೆ. ವಿಜಯೇಂದ್ರ (BY Vijayendra) ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಿದೆ. ಅಂತಿಮವಾಗಿ ಯಡಿಯೂರಪ್ಪ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಅಂತ ಹೇಳಿದ್ದರು. ಇನ್ನು ಜಗದೀಶ್ ಶೆಟ್ಟರ್, ಸಂಸದ ಪ್ರತಾಪ್ ಸಿಂಹ (Pratap Simha) ಸಹ ಸಿದ್ದರಾಮಯ್ಯ ವಿರುದ್ಧ ಫೈಟ್ ಮಾಡುತ್ತೇವೆ ಅಂತ ಹೇಳಿದ್ದಾರೆ. ಈ ನಡುವೆ ಹೊಸ ಟ್ವಿಸ್ಟ್ ಕೊಟ್ಟಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಅವರು ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಹೇಳಿದ್ದೇನೆ
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು, ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡುತ್ತಾರೆ. ವರುಣಾದಲ್ಲಿ ವಿಜಯೇಂದ್ರ ನಿಲ್ಲಬೇಕು ಅಂತ ಬಹಳ ಒತ್ತಡ ಇದೆ. ಆದರೆ ನಾನು ಬಹಳ ಹಿಂದೆಯೇ ವರುಣಾದಲ್ಲಿ ಒತ್ತಡ ಇದ್ದರೂ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಹೇಳಿದ್ದೇನೆ. ವರುಣಾದಲ್ಲಿ ವಿಜಯೇಂದ್ರ ಯಾವುದೇ ಕಾರಣಕ್ಕೆ ಸ್ಪರ್ಧೆ ಮಾಡಲ್ಲ. ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುವಂತೆ ನಾನು ವಿಜಯೇಂದ್ರಗೆ ಹೇಳಿದ್ದೇನೆ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು ಹೇಳಿದ್ದಾರೆ.
ಅಲ್ಲದೆ, ವಿಜಯೇಂದ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡುತ್ತಾರೆ. ಹೈಕಮಾಂಡ್ ನಾಯಕರಿಗೂ ಶಿಕಾರಿಪುರದಲ್ಲೇ ನಿಲ್ಲಬೇಕು ಅಂತ ತಿಳಿಸುತ್ತೇನೆ. ವಿಜಯೇಂದ್ರ ಅವರಿಗೂ ಶಿಕಾರಿಪುರದಲ್ಲೇ ನಿಲ್ಲಬೇಕು ಅಂತ ತಿಳಿಸುತ್ತೇನೆ. ಇನ್ನೂ ನಾಲ್ಕೈದು ದಿನದಲ್ಲಿ ಬಿಜೆಪಿ ಪಟ್ಟಿ ಪ್ರಕಟ ಆಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪುತ್ರನ ರಾಜಕೀಯ ಭವಿಷ್ಯದಲ್ಲಿ ಬಿಎಸ್‌ವೈ ಎಚ್ಚರಿಕೆ ನಡೆ
ಬಿವೈ ವಿಜಯೇಂದ್ರ ಅವರಿಗೆ ಇದು ಮೊದಲ ಚುನಾವಣೆಯಾಗಿದ್ದು, ಮೊದಲ ಚುನಾವಣೆಯಲ್ಲಿಯೇ ವಿಜಯೇಂದ್ರ ಸ್ಪರ್ಧೆ ಮಾಡಿ ಸೋತರೆ ಅವರ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಬಿಎಸ್‌ವೈ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಯಾವುದು ಬೇರೆ ಕ್ಷೇತ್ರ ಬೇಡ ಎಂದು ತಮ್ಮ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ಘೋಷಣೆ ಮಾಡಿ ಪುತ್ರನ ರಕ್ಷಣೆಗೆ ಬಿಎಸ್‌ವೈ ಮುಂದಾಗಿದ್ದಾರಂತೆ.
ಸದ್ಯದ ಸ್ಥಿತಿಯಲ್ಲಿ ವರುಣಾದಲ್ಲಿ ವಿಜಯೇಂದ್ರಗೆ ಗೆಲುವು ಅಷ್ಟು ಸುಲಭವಲ್ಲ. ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಶಕ್ತಿ ಜಾಸ್ತಿ ಇದೆ. ಇದು ಅವರಿಗೆ ಕೊನೆ ಚುನಾವಣೆಯಾಗಲಿದೆ. ಆದ್ದರಿಂದ ಅನುಕಂಪದ ಮೇಲೆ ಸಿದ್ದರಾಮಯ್ಯ ವರುಣಾದಲ್ಲಿ ಗೆಲುವು ಪಡೆಲಿದ್ದಾರೆ ಎಂಬ ಯೋಚನೆಯೊಂದಿಗೆ ಹೈಕಮಾಂಡ್ಗೆ ಬಿಎಸ್‌ವೈ ಸಂದೇಶ ರವಾನೆ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ