• Home
  • »
  • News
  • »
  • state
  • »
  • BS Yediyurappa: ಕಡೆಗಣನೆ, ನಿರ್ಲಕ್ಷ್ಯ, ಟೀಕೆ ಮಾಡೋರಿಗೂ ಬಿಎಸ್​ವೈ ಖಡಕ್ ಉತ್ತರ

BS Yediyurappa: ಕಡೆಗಣನೆ, ನಿರ್ಲಕ್ಷ್ಯ, ಟೀಕೆ ಮಾಡೋರಿಗೂ ಬಿಎಸ್​ವೈ ಖಡಕ್ ಉತ್ತರ

ಬಿ. ಎಸ್​ ಯಡಿಯೂರಪ್ಪ

ಬಿ. ಎಸ್​ ಯಡಿಯೂರಪ್ಪ

ಈ ಮೊದಲು ಕೊಪ್ಪಳ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ನಡ್ಡಾಗಷ್ಟೇ ಆಹ್ವಾನವಿತ್ತು. ಇದೀಗ ಕೊಪ್ಪಳದ ಕಾರ್ಯಕ್ರಮಕ್ಕೂ ಬರುವಂತೆ ಬಿಎಸ್‌ವೈಗೆ ಆಹ್ವಾನ ನೀಡಲಾಗಿದೆ.

  • News18 Kannada
  • 5-MIN READ
  • Last Updated :
  • Bangalore, India
  • Share this:

ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (BJP President JP Nadda) ಕೊಪ್ಪಳ ಸೇರಿ 10 ಬಿಜೆಪಿ ಭವನಗಳ ಉದ್ಘಾಟನೆಯನ್ನ ನೆರವೇರಿಸಲಿದ್ದಾರೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಲ್ಲಿ (BJP Activist) ಮತ್ತಷ್ಟು ಹುರುಪು ತುಂಬಲಿದ್ದಾರೆ. ಆದರೆ ಕೊಪ್ಪಳದ (Koppal) ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (Former CM BS Yediyurappa) ಅವರಿಗೆ ಕೊನೆ ಕ್ಷಣದಲ್ಲಿ ಆಹ್ವಾನ ನೀಡಲಾಗಿದೆ. ಇದು ಸಹಜವಾಗಿಯೇ ಯಡಯೂರಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ.  ಕೊನೆ ಗಳಿಗೆಯಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ (N Ravikumar)‌ ಆಹ್ವಾನ ನೀಡಿದ್ದಾರೆ. ಕಾವೇರಿ ನಿವಾಸದಲ್ಲಿ ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ರವಿಕುಮಾರ್, ಕೊಪ್ಪಳ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬಿಎಸ್‌ವೈಗೆ  ಗದಗ ಬಿಜೆಪಿ ಕಚೇರಿ ಕಾರ್ಯಕ್ರಮದ ಉಸ್ತುವಾರಿ ನೀಡಿದ್ದಾರೆ. ಹೀಗಾಗಿ ಈ ಮೊದಲು ಕೊಪ್ಪಳ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ನಡ್ಡಾಗಷ್ಟೇ ಆಹ್ವಾನವಿತ್ತು. ಇದೀಗ ಕೊಪ್ಪಳದ ಕಾರ್ಯಕ್ರಮಕ್ಕೂ ಬರುವಂತೆ ಬಿಎಸ್‌ವೈಗೆ ಆಹ್ವಾನ ನೀಡಲಾಗಿದೆ.


ಇಂದು ಬೆಳಗ್ಗೆ ಕೊಪ್ಪಳಕ್ಕೆ ತೆರಳುವ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಇಲ್ಲ ಅನ್ನುತ್ತಲೇ ಅಸಮಾಧಾನ ಹೊರ ಹಾಕಿದರು. ಇದೇ ವೇಳೆ ರಾಜ್ಯದಲ್ಲಿ ತಮ್ಮದೇ ಆದ ಶಕ್ತಿ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದರು.


ಹೋಗಲೇಬೇಕು ಅನ್ನೋ ಪರಿಸ್ಥಿತಿ ಬಂದಿದೆ


ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಕೊಪ್ಪಳದ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ನಾನು ಭಾಗವಹಿಸಲು ಹೋಗುತ್ತಿದ್ದೇನೆ. ಬೇರೆ ಕಾರಣಗಳಿಂದ ನಾನು ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿರಲಿಲ್ಲ. ಹೋಗಲೇಬೇಕು ಅನ್ನೋ ಪರಿಸ್ಥಿತಿ ಬಂದ ಹಿನ್ನೆಲೆ ಕೊಪ್ಪಳಕ್ಕೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ . ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ವಾಪಸ್ ಬರುತ್ತೇನೆ ಎಂದರು.


ಎಲ್ಲಾ ಕಾರ್ಯಕ್ರಮಕ್ಕೂ ಹೋಗುತ್ತಿದ್ದೇನೆ


ಯಾವುದೇ ರೀತಿ ಭಿನ್ನಾಭಿಪ್ರಾಯ, ಗೊಂದಲಗಳು ಇಲ್ಲ. ಮಾಧ್ಯಮದವರು ಇದನ್ನ ಸೃಷ್ಟಿ ಮಾಡಲು ಹೋಗಬೇಡಿ,. ನಾವು ಒಟ್ಟಾಗಿದ್ದೇವೆ, ಒಂದಾಗಿದ್ದೇವೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಬಹುಮತಕ್ಕೆ ತಂದು. ಸರ್ಕಾರ ರಚನೆ ಮಾಡುತ್ತೇವೆ ಅದಕ್ಕೆ ಯಾವ ಶ್ರಮ ಬೇಕಾದರೂ ಹಾಕುತ್ತೇವೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇವೆ ಬಿಜೆಪಿಯ ಪರವಾಗಿ ಅಲೆ ರಾಜ್ಯದಲ್ಲಿದೆ. ಎಲ್ಲಾ ಕಾರ್ಯಕ್ರಮಕ್ಕೂ ಹೋಗುತ್ತಿದ್ದೇನೆ ಎಂದು ತಿಳಿಸಿದರು.


ಸರ್ಕಾರದ ಕಾರ್ಯಕ್ರಮಕ್ಕೆ ಹೋಗುವುದು ಸರಿಯಲ್ಲ ಎಂದು ಹೋಗುತ್ತಿಲ್ಲ. ಸಾರ್ವಜನಿಕ ಕಾರ್ಯಕ್ರಮಕ್ಕೆ ನನ್ನನ್ನು ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಹೋಗುತ್ತೇನೆ ಪಕ್ಷವನ್ನ ಬಲಪಡಿಸಲು ನಾನು ಸಿದ್ಧನಿದ್ದೇನೆ ಎಂದರು.


ಸ್ಪಷ್ಟ ಬಹುಮತದೊಂದಿಗೆ ಅಧಿಕಾರ


ಇವತ್ತು ನಾನು ಕಾರ್ಯಕ್ರಮಕ್ಕೆ ಹೋಗುವ ಸ್ಥಿತಿಯಲ್ಲಿ ಇರಲಿಲ್ಲ. ಬರಲೇಬೇಕು ಎಂದು ಒತ್ತಾಯ ಬಂದ ಹಿನ್ನೆಲೆ ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ.


ಮೋದಿ, ಅಮಿತ್ ಶಾ, ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಪಕ್ಷ ಕಟ್ಟಿ ಬೆಳೆಸಿದ್ದೇನೆ


ನನ್ನನ್ನ‌ ಪಕ್ಷ ನೆಗಲೆಟ್ ಮಾಡ್ತಿಲ್ಲ.  ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದೇ ವೇಳೆ ಬಿಜೆಪಿಯಲ್ಲಿ ಯಡಿಯೂರಪ್ಪರನ್ನ ಮುಗಿಸಲು ಷಡ್ಯಂತರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಎಸ್​ವೈ, ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ಯಾರು ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ.  ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.


ಇದನ್ನೂ ಓದಿ:  Kalaburgi: ರೈತರಿಗೆ ಸಿಹಿ ಸುದ್ದಿ; ಇನ್ಮುಂದೆ ಮಧ್ಯವರ್ತಿ ಕಾಟವಿಲ್ಲ, ಸರ್ಕಾರದ 'ಬೆಂಬಲ'!


ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೆ ಮುಂದುವರೆಸುತ್ತೇನೆ. ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ ಎಂದು ಹೇಳುವ ಮೂಲಕ ಹೈಕಮಾಂಡ್​ಗೆ ತಮ್ಮ ಶಕ್ತಿ ಮತ್ತು ಸಾಮಾರ್ಥ್ಯದ ಸಂದೇಶ ನೀಡಿದರು. ನನ್ನ ಶಕ್ತಿ ಇಲ್ಲದೇ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಪರೋಕ್ಷವಾಗಿ ಸಂದೇಶ ರವಾನಿಸಿದರು.

Published by:Mahmadrafik K
First published: