ಡಿಕೆಶಿ ಪರ ಭಾರೀ ಪ್ರತಿಭಟನೆ ನಂತರ ಒಕ್ಕಲಿಗರ ಓಲೈಕೆಗೆ ಮುಂದಾದ ಬಿಜೆಪಿ; ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ 100 ಕೋಟಿ ಬಿಡುಗಡೆ

ಡಿಕೆಶಿಯನ್ನು ಬಂಧಿಸಿ ಒಕ್ಕಲಿಗ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಕೈಗೊಂಡಿರುವ ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ನಿರ್ಧರಿಸಿರುವುದು ಗಮನಾರ್ಹ.

Latha CG | news18-kannada
Updated:September 13, 2019, 1:21 PM IST
ಡಿಕೆಶಿ ಪರ ಭಾರೀ ಪ್ರತಿಭಟನೆ ನಂತರ ಒಕ್ಕಲಿಗರ ಓಲೈಕೆಗೆ ಮುಂದಾದ ಬಿಜೆಪಿ; ಕೆಂಪೇಗೌಡ ಪ್ರತಿಮೆ ಸ್ಥಾಪನೆಗೆ 100 ಕೋಟಿ ಬಿಡುಗಡೆ
ಬಿ.ಎಸ್​. ಯಡಿಯೂರಪ್ಪ.
  • Share this:
ಬೆಂಗಳೂರು(ಸೆ. 13): ರಾಜ್ಯ ಸರ್ಕಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಬೃಹತ್​ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ನಿರ್ಧರಿಸಿದೆ. ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ನಿನ್ನೆ ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ ಜನರು ಬೃಹತ್ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಬಂದಿದೆ.

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರವನ್ನು ಪುನರ್ ರಚಿಸಿ ಇದರ ಚಟುವಟಿಕೆಗಳಿಗೆ 100 ಕೋಟಿ ಅನುದಾನ ಬಿಡುಗಡೆ ಮಾಡಲು ಸಿಎಂ ಬಿ.ಎಸ್​. ಯಡಿಯೂರಪ್ಪ ನಿರ್ಧಾರ ಮಾಡಿದ್ದಾರೆ. ಜೊತೆಗೆ ಬೆಂಗಳೂರು ವಿಮಾನ ನಿಲ್ದಾಣದ ಎದುರು ಬೃಹತ್​ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಬಿಜೆಪಿ ನಿರ್ಧರಿಸಿದೆ.

"ಬೆಂಗಳೂರು ನಿರ್ಮಾರ್ತೃ ಕೆಂಪೇಗೌಡರ ನೆನಪು ಚಿರಸ್ಥಾಯಿಯಾಗಿಸಲು ನಮ್ಮ ಸರ್ಕಾರದಿಂದ 100 ಕೋಟಿ ರೂ. ಬಿಡುಗಡೆಗೆ ನಿರ್ಧಾರ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬೃಹತ್ ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಬಿಜೆಪಿ ಸರ್ಕಾರ ಸಂಕಲ್ಪವನ್ನು ಕೈಗೊಂಡಿದೆ" ಎಂದು ಸಿಎಂ ಟ್ವೀಟ್​ ಮಾಡಿದ್ದಾರೆ.


ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ನಿರ್ಮಿಸಲಾಗುವ ಕೆಂಪೇಗೌಡರ ಬೃಹತ್ ಪ್ರತಿಮೆ ಕೇವಲ ಸಾಂಕೇತಿಕ ಪ್ರತಿಮೆಯಾಗಿರುವುದಿಲ್ಲ. ನಾಡಪ್ರಭು ಕೆಂಪೇಗೌಡರ ಇತಿಹಾಸ, ಪರಂಪರೆಯನ್ನು ಸಾರುವ ಬೃಹತ್ ಸಂಕೀರ್ಣ ಹೊಂದಿರುತ್ತದೆ ಎನ್ನಲಾಗಿದೆ. ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರಿಗೆ ನಾಡು ಕಟ್ಟಿದ ಕೆಂಪೇಗೌಡರ ಇತಿಹಾಸ, ಪರಂಪರೆಯ ಬಗ್ಗೆ ತಿಳಿಸಲು ಅಲ್ಲಿ ಮೂಲಭೂತ ಸೌಕರ್ಯಗಳನ್ನು ರೂಪಿಸಲಾಗುತ್ತದೆ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

ಪ್ರತಿಪಕ್ಷ ನಾಯಕನ ಸ್ಥಾನ ಪಡೆಯಲು ಸಿದ್ದರಾಮಯ್ಯ ರಣತಂತ್ರ; ಒತ್ತಡಕ್ಕೆ ಮಣಿಯುವರಾ ಸೋನಿಯಾ ಗಾಂಧಿ?

ಮಾಜಿ ಸಚಿವ ಡಿಕೆ ಶಿವಕುಮಾರ್​ ಬಂಧನ ಖಂಡಿಸಿ ಇಡೀ ಒಕ್ಕಲಿಗ ಸಮುದಾಯವೇ ಪ್ರತಿಭಟನೆಗೆ ಇಳಿದಿತ್ತು. ಸೆ.3ರಂದು ಇಡಿ ಅಧಿಕಾರಿಗಳು ಡಿಕೆಶಿ ಅವರನ್ನು ವಶಕ್ಕೆ ಪಡೆದ ಕೂಡಲೇ ಒಕ್ಕಲಿಗ ಸಮುದಾಯ, ಡಿಕೆಶಿ ಅಭಿಮಾನಿಗಳು, ಬೆಂಬಲಿಗರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಡಿಕೆಶಿ ಬಂಧನದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್​ ಶಾ ವಿರುದ್ಧ ಕೆಂಡಕಾರಿದ್ದರು. ಡಿಕೆಶಿ ಬಂಧನ ವಿರೋಧಿಸಿ  ಮೊನ್ನೆ  ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯವು ಬೃಹತ್​ ಪ್ರತಿಭಟನೆ ನಡೆಸಿತ್ತು. ಡಿಕೆಶಿಯನ್ನು ಬಂಧಿಸಿ ಒಕ್ಕಲಿಗ ಸಮುದಾಯವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಕೈಗೊಂಡಿರುವ ಕೆಂಪೇಗೌಡರ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ನಿರ್ಧರಿಸಿರುವುದು ಗಮನಾರ್ಹ.

First published:September 13, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading