ಯಡಿಯೂರಪ್ಪ ಸ್ವತಂತ್ರವಾಗಿ ಖಾತೆ ಹಂಚಿಕೆ ಮಾಡಲಾರದಷ್ಟು ಅಸಮರ್ಥ ಸಿಎಂ: ಸಿದ್ಧರಾಮಯ್ಯ ಲೇವಡಿ

ಕೇಂದ್ರ ಸರ್ಕಾರ ಬಜೆಟ್​ನಲ್ಲಿ ರಾಜ್ಯದ ತೆರಿಗೆ ಪಾಲನ್ನು ನೀಡಿಲ್ಲ. ಇದು ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಪರಿಣಾಮ ಬೀರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ಧಾರೆ.

ಸಿದ್ದರಾಮಯ್ಯ

ಸಿದ್ದರಾಮಯ್ಯ

  • News18
  • Last Updated :
  • Share this:
ಕಲಬುರ್ಗಿ(ಫೆ. 08): ಯಡಿಯೂರಪ್ಪ ಖಾತೆ ಹಂಚಲಾರದಷ್ಟು ಅಸಮರ್ಥ ಸಿಎಂ ಆಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ. ಇಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಪ್ರತಿಯೊಂದಕ್ಕೂ ಹೈಕಮಾಂಡ್ ಅಂತಾ ಹೇಳ್ತಾರೆ. ಇದೀಗ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಮಾಡ್ತಾರೆ ಅಂತ ಸುದ್ದಿ ಹರಿದಾಡುತ್ತಿದೆ. ಆದ್ರೆ ಈಗಾಗಲೇ ಸಂಪುಟ ಸೇರ್ಪಡೆಗೊಂಡವರಿಗೆ ಖಾತೆ ಹಂಚಿಕೆ ಮಾಡಲೂ ಅವರ ಕೈಯಲ್ಲಿ ಆಗುತ್ತಿಲ್ಲ. ಖಾತೆ ಹಂಚಿಕೆಗೂ ಹೈಕಮಾಂಡ್ ಅನುಮತಿಗಾಗಿ ಕಾಯುತ್ತಿದ್ದಾರೆ. ಪಾಪ ಅಷ್ಟರ ಮಟ್ಟಿಗೆ ಅವರು ಅಸಮರ್ಥರಾಗಿದ್ದಾರೆ. ಹೈಕಮಾಂಡ್ ಅವರಿಗೆ ಯಾವುದೇ ಸ್ವಾತಂತ್ರ್ಯ ನೀಡುತ್ತಿಲ್ಲ ಎಂದರು.

ಮುಖ್ಯಮಂತ್ರಿಗೆ ಯಾವುದೇ ಸ್ವಾತಂತ್ರ್ಯವಿಲ್ಲ. ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ 13 ಜಿಲ್ಲೆಗಳಿಗೆ ಪ್ರಾತಿನಿಧ್ಯತೆ ಸಿಕ್ಕಿಲ್ಲ. ಸಾಮಾಜಿಕ ಸಮಾನತೆ ಕಾಪಾಡಲಾಗಿಲ್ಲ. ಇದರಿಂದ ಅಸಮಾಧಾನ ಹೆಚ್ಚಾಗುತ್ತದೆ. ಸರ್ಕಾರದ ಮೇಲೂ ಅದು ಪರಿಣಾಮ ಬೀರುತ್ತೆ ಎಂದವರು ಎಚ್ಚರಿಸಿದರು.

ಇದನ್ನೂ ಓದಿ: ಬಿಎಸ್​ವೈಗೆ ತಲೆನೋವು ಮುಂದುವರಿಸಿದ ಜಾರಕಿಹೊಳಿ; ಖಾತೆ ಕಿತ್ತಾಟದ ಮಧ್ಯೆ ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ ಅನುಮಾನ

ಕೇಂದ್ರ ಸರ್ಕಾರ ಬಜೆಟ್​ನಲ್ಲಿ ರಾಜ್ಯದ ತೆರಿಗೆ ಪಾಲನ್ನು ನೀಡಿಲ್ಲ. ಇದು ಮುಂದಿನ ತಿಂಗಳು ಮಂಡನೆಯಾಗಲಿರುವ ರಾಜ್ಯ ಬಜೆಟ್ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.

ತಮ್ಮ ಶಿಷ್ಯರು ಸಂಪುಟದಲ್ಲಿ ಸಚಿವಾಗಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಯಾರ್ರೀ ನನ್ನ ಶಿಷ್ಯರು. ಅವರು ಬಿಜೆಪಿಗೆ ಹೋದ ಮೆಲೆ ನನ್ನ ಶಿಷ್ಯರು ಹೇಗಾಗುತ್ತಾರೆ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಒಂದಷ್ಟು ವಿಳಂಬವಾಗಿದೆ. ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೇಮಕದಲ್ಲಿ ವಿಳಂಬವಾಗಿದೆ. ಶೀಘ್ರವೇ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುತ್ತೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದೇವೆ. ಶೀಘ್ರವೇ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ಸಿದ್ಧರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಬೆಳಗಾವಿಯ ಇಟಗಿ ಬಳಿ ಭೀಕರ ರಸ್ತೆ ಅಪಘಾತ; 7 ರೈತರು ಸಾವು

‘ಬಡ್ತಿ ಮೀಸಲು ಕೊಡಬೇಡವೆಂದು ಸುಪ್ರೀಂ ಹೇಳಿಲ್ಲ’

ಬಡ್ತಿ ಮೀಸಲಾತಿಯನ್ನು ಕೊಡಬೇಡವೆಂದು ಸುಪ್ರೀಂಕೋರ್ಟ್ ಎಲ್ಲಿಯೂ ಹೇಳಿಲ್ಲವೆಂದು ಸಿದ್ಧರಾಮಯ್ಯ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ಬಡ್ತಿ ಮೀಸಲಾತಿ ಆಯಾ ರಾಜ್ಯಗಳಿಗೆ ವಿವೇಚನೆಗೆ ಬಿಟ್ಟ ವಿಚಾರ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಡ್ತಿ ಮೀಸಲಾತಿ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟ ವಿಚಾರ ಎಂದೂ ಹೇಳಿದೆ. ಬಡ್ತಿ ಮೀಸಲಾತಿ ಕೊಡಬೇಡಿ ಎಂದು ಎಲ್ಲೂ ಹೇಳಿಲ್ಲ. ಲಾ ಏನೂ ಸ್ಟ್ರಕ್ ಡೌನ್ ಮಾಡಿಲ್ಲ. ನಾವು ಮಾಡಿದ ಕಾನೂನು ಹಾಗೆಯೇ ಇದೆ. ಮೀಸಲಾತಿಯನ್ನು ತೆಗೆದುಹಾಕಲಾಗಿಲ್ಲ. ಆದೇಶ ಪೂರ್ತಿಯಾಗಿ ಓದಿದ ನಂತರ ಉತ್ತರಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದರು.

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.

First published: