ಕಾಲೇಜು ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ (Burqa) ಡ್ಯಾನ್ಸ್ ಮಾಡಿದ್ದ ವಿದ್ಯಾರ್ಥಿಗಳನ್ನು ಅಮಾನತು (Student Suspend) ಮಾಡಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ಡ್ಯಾನ್ಸ್ ವಿಡಿಯೋ (Dance Video) ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದಿಂದ (Muslim Community) ಆಕ್ರೋಶ ವ್ಯಕ್ತವಾಗಿತ್ತು. ಘಟನೆ ವಿವಾದದ ಸ್ವರೂಪ ಪಡೆದುಕೊಳ್ಳುವ ಹಂತದಲ್ಲಿರುವಾಗಲೇ ಎಚ್ಚೆತ್ತಿರುವ ಕಾಲೇಜು ಆಡಳಿತ ಮಂಡಳಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿದ್ದು, ಅದರಲ್ಲಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿರುವ ವಿಷಯವನ್ನು ತಿಳಿಸಿದೆ.
ಮಂಗಳೂರಿನ ಸೇಂಟ್ ಜೋಸೆಫ್ ಇಂಜಿನೀಯರಿಂಗ್ ಕಾಲೇಜಿನಲ್ಲಿ (St.Joseph College, Mangaluru) ಈ ಘಟನೆ ನಡೆದಿದೆ. ಗುರುವಾರ ನಡೆದ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿಗಳು ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ್ದರು. ಈ ಸಂಬಂಧ ವಿಚಾರಣೆ ಪೂರ್ಣವಾಗುವರೆಗೂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
ಕಾಲೇಜು ಆಡಳಿತ ಮಂಡಳಿ ಹೇಳಿಕೆ
ಕಾಲೇಜು ಕಾರ್ಯಕ್ರಮದ ಪಟ್ಟಿಯಲ್ಲಿ ಈ ಡ್ಯಾನ್ಸ್ ಲಿಸ್ಟ್ ಆಗಿರಲಿಲ್ಲ. ಬುರ್ಖಾ ಧರಿಸಿ ಬಂದ ಕೆಲ ವಿದ್ಯಾರ್ಥಿಗಳು ಸಂಗೀತಕ್ಕೆ ಹೆಜ್ಜೆ ಹಾಕಿದರು. ಇದು ಅನುಮೋದಿತ ಕಾರ್ಯಕ್ರಮದ ಭಾಗವಾಗಿರಲಿಲ್ಲ. ವಿಚಾರಣೆ ಹಿನ್ನೆಲೆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿದೆ.
ಸಮುದಾಯಗಳ ನಡುವಿನ ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ಚಟುವಟಿಕೆಗಳನ್ನು ಕಾಲೇಜು ಬೆಂಬಲಿಸುವುದಿಲ್ಲ ಮತ್ತು ಕ್ಷಮಿಸುವುದಿಲ್ಲ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದ ಪ್ರಾಧ್ಯಾಪಕ ಅಮಾನತು
ತರಗತಿಯಲ್ಲಿ ವಿದ್ಯಾರ್ಥಿಯನ್ನು ಟೆರರಿಸ್ಟ್ (Terrorist) ಎಂದು ಕರೆದಿದ್ದ ಪ್ರಾಧ್ಯಾಪಕರನ್ನು (Professor) ಅಮಾನತು ಮಾಡಲಾಗಿದೆ. ಮಾಹೆ ವಿಶ್ವವಿದ್ಯಾಲಯದ (MAHE Manipal University) ಎಂಐಟಿ ಕಾಲೇಜಿನ (MIT College) ಎಂಜಿನಿಯರಿಂಗ್ ವಿಭಾಗದಲ್ಲಿ ನವೆಂಬರ್ 26ರಂದು ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ (Viral Video) ಆಗಿದೆ.
ಮುಸ್ಲಿಂ ಸಮುದಾಯದ ವಿದ್ಯಾರ್ಥಿಯನ್ನು (Muslim Student) ಟೆರರಿಸ್ಟ್ ಎಂದು ಪ್ರೊಫೆಸರ್ ನಿಂದನೆ ಮಾಡಿದ್ದಾರೆ. ಈ ಮಾತಿನಿಂದ ಕೋಪಗೊಂಡ ವಿದ್ಯಾರ್ಥಿ, ಒಬ್ಬ ಪ್ರೊಫೆಸರ್ ಆಗಿ ಈ ರೀತಿ ಹೇಳೋದು ತಪ್ಪು ಎಂದು ಬೇಸರ ಹೊರ ಹಾಕಿದ್ದಾನೆ.
ವಿದ್ಯಾರ್ಥಿ ಮತ್ತು ಪ್ರೊಫೆಸರ್ (Student And Professor) ನಡುವಿನ ವಾಗ್ವಾದವನ್ನು ತರಗತಿಯಲ್ಲಿದ್ದ ಕೆಲವರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಮಂಡಳಿ, ವಿದ್ಯಾರ್ಥಿಯನ್ನು ನಿಂದಿಸಿದ ಪ್ರೊಫೆಸರ್ ಅವರನ್ನು ಅಮಾನತುಗೊಳಿಸಿ, ಆಂತರಿಕ ತನಿಖೆಗೆ (Internal Investigation) ಆದೇಶ ನೀಡಿದೆ.
ಇದನ್ನೂ ಓದಿ: ವಿದ್ಯಾರ್ಥಿ ಹಾಗೂ ಪ್ರೊಫೆಸರ್ ನಡುವಿನ ಟಾಕ್ ವಾರ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಅಜಾನ್ಗೆ ಮಕ್ಕಳಿಂದ ನೃತ್ಯ
ಉಡಪಿ ಜಿಲ್ಲೆಯ ಕುಂದಾಪುರ (Kundapur, Udupi) ತಾಲೂಕಿನ ಖಾಸಗಿ ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಅಜಾನ್ಗೆ (Azan) ನೃತ್ಯ (Dance) ಮಾಡಿರೋದು ಹಿಂದೂ ಸಂಘಟನೆಗಳ (Hindu Organization) ಕೆಂಗಣ್ಣಿಗೆ ಗುರಿಯಾಗಿದೆ. ಹಿಂದೂ ಸಂಘಟನೆಗಳಿಂದ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಕ್ಷಮೆ ಕೋರಿದೆ.
ಏನಿದು ಪ್ರಕರಣ?
ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆಯಲ್ಲಿ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಉದ್ಘಾಟನಾ ಕಾರ್ಯಕ್ರಮದ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಹ ಆಯೋಜಿಸಲಾಗಿತ್ತು.
ಇದನ್ನೂ ಓದಿ: Hijab Row: ಹಿಜಾಬ್ ಗಲಾಟೆಯಾದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ
ಮಕ್ಕಳು ಮಾಡಿದ ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಅಜಾನ್ ಬಳಸಲಾಗಿದೆ. ಈ ಸ್ವಾಗತ ನೃತ್ಯದಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಹಾಡುಗಳನ್ನು ಬಳಸಲಾಗಿತ್ತು. ಈ ನೃತ್ಯದಲ್ಲಿ 30 ಸೆಕೆಂಡ್ ಅಜಾನ್ಗೆ ವಿದ್ಯಾರ್ಥಿಗಳು ನೃತ್ಯ ಮಾಡುತ್ತಿದ್ದಂತೆ ವೇದಿಕೆಯಲ್ಲಿ ಆಸೀನರಾಗಿದ್ದ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ