• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಿರಿಗೆ ಬಿಜೆಪಿ ಅವಕಾಶ ನೀಡಲ್ಲ; ಬಿ ವೈ ವಿಜಯೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಿರಿಗೆ ಬಿಜೆಪಿ ಅವಕಾಶ ನೀಡಲ್ಲ; ಬಿ ವೈ ವಿಜಯೇಂದ್ರ

ಬಿ.ವೈ. ವಿಜಯೇಂದ್ರ

ಬಿ.ವೈ. ವಿಜಯೇಂದ್ರ

ಸಿಡಿ ರಾಮ... ಬಾಂಬೆ ರಾಮ ಎಂಬ ರಮೇಶ್ ಕುಮಾರ್ ಹೇಳಿಕೆಗೆ  ತಿರುಗೇಟು ನೀಡಿರುವ ವಿಜಯೇಂದ್ರ, ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ‌. ಇದಕ್ಕೆಲ್ಲಾ ರಾಜ್ಯದ ಜನತೆ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

  • Share this:

ಚಿತ್ರದುರ್ಗ(ಮಾ.15): ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದು ತಪ್ಪಾ? ಘೋಷಣೆ ಕೂಗಿದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ, ಆ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಅದಕ್ಕೆ ಬೆಂಬಲ ನೀಡುವ ಮೂಲಕ ಕಾಗ್ರೇಸ್ ಅಸ್ತಿತ್ವ ಹುಡುಕಲು ಹೊರಟಿದೆ. ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ನಮ್ಮ ಪಕ್ಷ ಸದೃಢವಾಗಿದೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.


ಚಿತ್ರದುರ್ಗ ಮುರುಘಾ ಮಠದಲ್ಲಿ ಆಯೋಜಿಸಿದ್ದ ಶರಣ ಸೇನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿವೈ ವಿಜಯೇಂದ್ರ, ಶರಣ ಸೇನೆಯ ಲೋಗೋ ಬಿಡುಗಡೆ ಮಾಡಿದರು. ಬಳಿಕ ಮಾಧ್ಯಮಗಳಿಗೆ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ವಿಚಾರಕ್ಕೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿ, ನಳೀನ್ ಕುಮಾರ್ ಕಟೀಲ್ ಅವರು ಕೋವಿಡ್​​​ನಂತಹ ಸಂಕಷ್ಟದ ಸಮಯದಲ್ಲಿ ಮೂರು ರಾಜ್ಯ ಸುತ್ತಿ ಪ್ರವಾಸ ಮಾಡಿದ್ದಾರೆ. ಹಾಗಾಗಿ ಸದ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಶ್ನೆಯೇ ಉದ್ಬವವಾಗಲ್ಲ ಎಂದು ಹೇಳಿದ್ದಾರೆ.


ಇನ್ನು, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತು, ರಾಜ್ಯ ಸರ್ಕಾರ ಎಸ್​ಐಟಿ ಮೂಲಕ ತನಿಖೆ ನಡೆಸುತ್ತಿದೆ. ಈ ಪ್ರಕರಣ ಕುರಿತು ನಿನ್ನ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ತನಿಖೆ ಬಳಿಕ ಯಾವುದು ಮುಚ್ಚಿಡುವಂತದ್ದಿಲ್ಲ. ಸತ್ಯ ಏನೆಂಬುದು ಸಮಗ್ರ ತನಿಖೆಯ ಬಳಿಕ ರಾಜ್ಯದ ಜನರಿಗೆ ಗೊತ್ತಾಗುತ್ತದೆ. ಯಾವ ಸಂದರ್ಭದಲ್ಲಿ ವಿಡಿಯೋ ಬಿಟ್ಟಿದ್ದಾರೆ ಎಂಬುದು ತನಿಖೆ ಬಳಿಕಹೊರ  ಬರುತ್ತದೆ ಎಂದಿದ್ದಾರೆ.


Health Tips: ನಿಮ್ಮ ಪಾದಗಳಲ್ಲಿ ಕಾಣಿಸಿಕೊಳ್ಳುವ ಕೆಲ ಲಕ್ಷಣಗಳು, ದೊಡ್ಡ ಸಮಸ್ಯೆಯ ಸೂಚನೆಯಾಗಿರುತ್ತೆ..!


ಇನ್ನೂ ನಿನ್ನೆಯ ಕೈ ಪಡೆ ಶಿವಮೊಗ್ಗ ಚಳುವಳಿ ಕುರಿತು ಪ್ರತಿಕ್ರಿಯೆ ವಿಜಯೇಂದ್ರ, ಕಾಂಗ್ರೆಸ್ ಪಕ್ಷ ದಿನೇ ದಿನೇ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಂತೆ ರಾಜ್ಯದಲ್ಲೂ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಆದ್ದರಿಂದ ಹೀಗೆ ಮಾಡುತ್ತಿದ್ದಾರೆ. ಭದ್ರಾವತಿಯಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ವೇಳೆ ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದ್ದು ತಪ್ಪಾ? ಪ್ರಶ್ನಿಸಿರುವ ಅವರು, ಘೋಷಣೆ ಕೂಗಿದ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ, ಆ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಅದಕ್ಕೆ ಬೆಂಬಲ ನೀಡುವ ಮೂಲಕ ಕಾಂಗ್ರೇಸ್ ಅಸ್ತಿತ್ವ ಹುಡುಕಲು ಹೊರಟಿದೆ ಎಂದು ಕಿಡಿಕಾರಿದರು.


ಆದರೆ ಬಿಜೆಪಿ ಪಕ್ಷದ ಕಾರ್ಯಕರ್ತರು, ನಮ್ಮ ಪಕ್ಷ ಸದೃಢವಾಗಿದೆ. ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಕಾಂಗ್ರೆಸ್ ಪಕ್ಷ ಗೂಂಡಾಗಿರಿ ಮಾಡಲು ಬಿಜೆಪಿ ಅವಕಾಶ ನೀಡಲ್ಲ ಎಂದು ಹೇಳಿದ್ದಾರೆ.


ಇನ್ನೂ ಸಿಡಿ ರಾಮ... ಬಾಂಬೆ ರಾಮ ಎಂಬ ರಮೇಶ್ ಕುಮಾರ್ ಹೇಳಿಕೆಗೆ  ತಿರುಗೇಟು ನೀಡಿರುವ ವಿಜಯೇಂದ್ರ, ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ‌. ಇದಕ್ಕೆಲ್ಲಾ ರಾಜ್ಯದ ಜನತೆ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.

First published: