• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Sindagi, Hangal Byelection Results Today; ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಮತ ಎಣಿಕೆಗೆ ಸಿದ್ಧತೆ

Sindagi, Hangal Byelection Results Today; ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಮತ ಎಣಿಕೆಗೆ ಸಿದ್ಧತೆ

ಮತ ಎಣಿಕೆಗೆ ಸಿದ್ಧತೆ

ಮತ ಎಣಿಕೆಗೆ ಸಿದ್ಧತೆ

ಇಂದು ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ (Sindagi And Hangal Byelection)  ಉಪಚುನಾವಣೆಯ ಮತ ಎಣಿಕೆಗೆ ಸಿದ್ಧತೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಪ್ರಾರಂಭಗೊಳ್ಳಲಿದೆ.

ಮುಂದೆ ಓದಿ ...
  • Share this:

ಹಾವೇರಿ/ವಿಜಯಪುರ: ಇಂದು ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರದ (Sindagi And Hangal Byelection)  ಉಪಚುನಾವಣೆಯ ಮತ ಎಣಿಕೆಗೆ ಸಿದ್ಧತೆ ನಡೆದಿದೆ. ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿರುವ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಗ್ಗೆ ಎಂಟು ಗಂಟೆಯಿಂದ ಮತ ಎಣಿಕೆ ಪ್ರಾರಂಭಗೊಳ್ಳಲಿದೆ. ಮತ ಎಣಿಕೆಗೆ ಎರಡು ಕೊಠಡಿಗಳಲ್ಲಿ ಹದಿನಾಲ್ಕು ಟೇಬಲ್ ಗಳ ವ್ಯವಸ್ಥೆ ಮಾಡಲಾಗಿದೆ.  ಪ್ರತಿ ಟೇಬಲ್ ಗೆ ಮೂವರು ಸಿಬ್ಬಂದಿ ನೇಮಕ ಮಾಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಪೊಲೀಸ್ ಅಧಿಕಾರಿಗಳು ಸೇರಿದಂತೆ ಒಟ್ಟು 250 ಪೊಲೀಸರನ್ನು ನಿಯೋಜಿಸಲಾಗಿದೆ. ಒಟ್ಟು 19 ಸುತ್ತಗಳಲ್ಲಿ ಮತಎಣಿಕೆ ನಡೆಯಲಿದೆ.


ಸಿಂದಗಿ ವಿಧಾನಸಭಾ ಉಪಚುನಾವಣೆ ಮತ ಎಣಿಕೆಗೆ ಸಿದ್ಧತೆ


ವಿಜಯಪುರ ನಗರದ ಸೈನಿಕ ಶಾಲೆಯ ಆವರಣದ ಒಡೆಯರ್ ಹೌಸ್ ನಲ್ಲಿ ಮತ ಎಣಿಕೆ ನಡೆಯಲಿದೆ. ಎರಡು ಕೊಠಡಿಗಳಲ್ಲಿ ಮತ ಎಣಿಕೆ ನಡೆಯಲಿದೆ.  ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್  ಒಟ್ಟು 14 ಟೇಬಲ್ ಗಳು ಮಾಡಲಾಗಿದೆ. ಪ್ರತಿ ಟೇಬಲ್ ಗೆ ಒಬ್ಬ ಮೈಕ್ರೋ ಅಬ್ಸರ್ವರ್ ಒಬ್ಬ ಮತಎಣಿಕೆ ಮೇಲ್ವಿಚಾರಕ, ಒಬ್ಬ ಮತ ಎಣಿಕೆ ಸಹಾಯಕರು ಸೇರಿದಂತೆ ಒಟ್ಟು 60 ಸಿಬ್ಬಂದಿಯನ್ನು ನೇಮಿಸಲಾಗಿದೆ. ಒಟ್ಟು 22 ಸುತ್ತುಗಳಲ್ಲಿ ಮತ ಎಣಿಕೆ ಆಗಲಿದೆ.


ಸಿಂದಗಿಯಲ್ಲಿ ಶೇ.69.47ರಷ್ಟು ಮತದಾನ


ಮತ ಎಣಿಕೆ ಕೇಂದ್ರ ಒಳಗೆ ಮತ್ತು ಹೊರಗೆ ಅವಶ್ಯವಿರುವ ಭದ್ರತಾ ಮತ್ತು ಕಾನೂನು ಸುವ್ಯವಸ್ಥೆಗೆ 4 ಡಿವೈಎಸ್ಪಿ, 5 ಸಿಪಿಐ, 23 ಪಿಎಸ್ಐ, 25  ಎಎಸ್ಐ 282 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಒಟ್ಟು 69.47% ರಷ್ಟು ಮತದಾನವಾಗಿದೆ.


ಇದನ್ನೂ ಓದಿ:  Karnataka By Election Result 2021: ಇಂದು ಸಿಂದಗಿ & ಹಾನಗಲ್ ಉಪ ಚುನಾವಣೆ ಫಲಿತಾಂಶ; ಗೆಲುವಿನ ಲೆಕ್ಕಾಚಾರ ಹೀಗಿದೆ


ಕ್ಷೇತ್ರದಲ್ಲಿ ಒಟ್ಟು 234437 ಮತದಾರರಿದ್ದು, ಚುನಾವಣೆಯಲ್ಲಿ 162852 ಮತದಾರರು ಮತ ಚಲಾಯಿಸಿದ್ದು, ಈ ಪೈಕಿ 85859 ಪುರುಷ ಮತದಾರರು ಹಾಗೂ 76990 ಮಹಿಳಾ ಮತದಾರರು ಇತರೆ 3 ಮತದಾರರು ಮತ ಚಲಾಯಿಸಿದ್ದಾರೆ.


ಇವರೇ ಪ್ರಮುಖ ಅಭ್ಯರ್ಥಿಗಳು


ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭುಸನೂರು ಮತ್ತು ಜೆಡಿಎಸ್ ನಿಂದ ನಾಜೀಯಾ ಅಂಗಡಿ ಕಣದಲ್ಲಿದ್ದಾರೆ. ಇತ್ತ ಹಾನಗಲ್ ನಲ್ಲಿ ಕಾಂಗ್ರೆಸ್ ನಿಂದ  ಶ್ರೀನಿವಾಸ್ ವಿ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನ್  ಮತ್ತು ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧೆಯಲ್ಲಿದ್ದಾರೆ.


ರಾಜ್ಯ ಚುನಾವಣಾ ಆಯೋಗದ ಪ್ರಕಾರ ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಸರಿಸುಮಾರು ಶೇ.69 ರಷ್ಟು ಮತದಾನವಾಗಿದ್ದರೆ, ಹಾನಗಲ್​​​ನಲ್ಲಿ ಶೇ.84 ರಷ್ಟು ಮತದಾನವಾಗಿದೆ. ಎರಡು ಕ್ಷೇತ್ರಗಳಿಂದ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಂದಗಿಯಿಂದ ಆರು ಹಾಗೂ ಹಾನಗಲ್‌ನಿಂದ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಿಂದಗಿ ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಮತ್ತು ಹಾನಗಲ್​​​ನಲ್ಲಿ ಬಿಜೆಪಿಯ ಸಿ ಎಂ ಉದಾಸಿ ಅವರ ನಿಧನದ ನಂತರ ತೆರವಾದ ಸ್ಥಾನಗಳಿಗೆ ಉಪಚುನಾವಣೆ ಅನಿವಾರ್ಯವಾಗಿತ್ತು.


ಇದನ್ನೂ ಓದಿ:  Haveri: ಪೊಲೀಸರ ಜೊತೆ ಬಾಗಿಲು ಒಡೆದು ಒಳಗೆ ಬನ್ನಿ ಅಂತಾ ಹಾಕಲಾಗಿದ್ದ ಬೋರ್ಡ್ ನೋಡಿ ಬೆಚ್ಚಿಬಿದ್ದ ಜನ..! 


ಯಾವ ಪಕ್ಷದ ಯಾರಿಗೆ ಮತದಾರ ಮಣೆ ಹಾಕಲಿದ್ದಾನೆ?


ಬಿಜೆಪಿ ಸಿಂದಗಿಯಿಂದ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಿದ್ದರೆ, ಹಾನಗಲ್​​ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ಸಿಂದಗಿಯಿಂದ ಎಂಸಿ ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿಯನ್ನು ಕಣಕ್ಕಿಳಿಸಿದ್ದರೆ, ಮಾಜಿ ಎಂಎಲ್ ಸಿ ಶ್ರೀನಿವಾಸ ಮಾನೆ ಹಾನಗಲ್​​ ನಿಂದ ಸ್ಪರ್ಧಿಸಿದ್ದಾರೆ. ಸಿಂದಗಿಯಿಂದ 33 ವರ್ಷದ ಸ್ನಾತಕೋತ್ತರ ಪದವೀಧರೆ ನಾಜಿಯಾ ಶಕೀಲ್ ಅಹ್ಮದ್ ಅಂಗಡಿ ಮತ್ತು ಹಾನಗಲ್ ನಿಂದ 35 ವರ್ಷದ ಬಿಇ, ಎಂಟೆಕ್ ಪದವೀಧರ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್​ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್​ ನೀಡಿದ್ದರ ಸಂಬಂಧ ಜೆಡಿಎಸ್​-ಕಾಂಗ್ರೆಸ್​​ ಮಧ್ಯೆ ಚುನಾವಣಾ ಪ್ರಚಾರದ ವೇಳೆ ವಾಕ್ಸಮರವೇ ನಡೆದಿತ್ತು.

Published by:Mahmadrafik K
First published: