ಬೆಂಗಳೂರು: ಸಿಎಎ ಜಾಗೃತಿ ಸಮಾವೇಶಕ್ಕಾಗಿ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ನಿರೀಕ್ಷೆಯಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಸಂಪುಟ ವಿಸ್ತರಣೆಗೆ ನನ್ನ ಅಭ್ಯಂತರವಿಲ್ಲ. ಸಂಪುಟ ವಿಸ್ತರಣೆ ಮಾಡಿ. ಗೆದ್ದ ಎಲ್ಲ ಶಾಸಕರನ್ನೂ ಮಂತ್ರಿ ಮಾಡಿ. ದಾವೋಸ್ಗೆ ಹೋಗಿ ಬಂದ ಬಳಿಕ ದೆಹಲಿಗೆ ಬನ್ನಿ ಮಾತನಾಡೋಣ ಎಂದು ಸಿಎಂ ಬಿಎಸ್ವೈಗೆ ಅಮಿತ್ ಶಾ ಅಭಯ ನೀಡಿದ್ದಾರೆ.
ಸಂಪುಟ ವಿಸ್ತರಣೆ ವಿಷಯವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಹಾಗೂ ಬಿ ಎಲ್ ಸಂತೋಷ್ ಜೊತೆ ಮಾತಾಡಿ. ಬಳಿಕ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡ್ತೀವಿ. ಸಂಪುಟ ವಿಸ್ತರಣೆ ವಿಳಂಭವಾಗಲ್ಲ. ನಿಮ್ಮ ವಿದೇಶ ಪ್ರವಾಸದ ಬಳಿಕ ವಿಸ್ತರಣೆ ಮಾಡಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ, ಕೇವಲ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಇದೇ ಕೆಲಸವಾಗಬಾರದು. ಸರ್ಕಾರವಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನಹರಿಸಿ ಎಂದು ಸಿಎಂ ಬಿಎಸ್ವೈಗೆ ಸೂಚಿಸಿದ್ದಾರೆ.
ಇದನ್ನು ಓದಿ: ಸಿಎಎ ಕುರಿತು ಹುಬ್ಬಳ್ಳಿಯಲ್ಲಿ ಜನಜಾಗೃತಿ ಸಮಾವೇಶ; ವಿರೋಧ ಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ