ಕೃಷ್ಣಭಾಗ್ಯ ಜಲ ನಿಗಮ ಸೇರಿದಂತೆ ಹಲವು ಇಲಾಖೆಗಳು ಉತ್ತರ ಕರ್ನಾಟಕಕ್ಕೆ ಶಿಫ್ಟ್​; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

news18
Updated:September 6, 2018, 8:59 PM IST
ಕೃಷ್ಣಭಾಗ್ಯ ಜಲ ನಿಗಮ ಸೇರಿದಂತೆ ಹಲವು ಇಲಾಖೆಗಳು ಉತ್ತರ ಕರ್ನಾಟಕಕ್ಕೆ ಶಿಫ್ಟ್​; ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
news18
Updated: September 6, 2018, 8:59 PM IST
ಶ್ರೀನಿವಾಸ್​ ಹಳಕಟ್ಟಿ, ನ್ಯೂಸ್​ 18 ಕನ್ನಡ

ಬೆಂಗಳೂರು (ಸೆ.06): ಉತ್ತರ ಕರ್ನಾಟಕದ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಹಲವು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರ ಮಾಡಲು ಸರ್ಕಾರ ಮುಂದಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈ ಗೊಳ್ಳಲಾಗಿದೆ. ಕೃಷ್ಣಭಾಗ್ಯ ಜಲನಿಗಮ, ಕರ್ನಾಟಕ ನೀರಾವರಿ ನಿಗಮ, ಸಕ್ಕರೆ ಅಭಿವೃದ್ಧಿ ನಿರ್ದೇಶನಾಲಯ,ಕಬ್ಬು ಅಭಿವೃದ್ಧಿ ಆಯುಕ್ತರ ಕಚೇರಿ, ಕರ್ನಾಟಕ ವಿದ್ಯುತ್ ಮಗ್ಗ ನಿಗಮ, ಉ.ಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ರಚನೆ ಹಾಗೂ ಮಾನವಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಚೇರಿ, ಒಬ್ಬ ಮಾಹಿತಿ ಹಕ್ಕು ಆಯುಕ್ತರ ಕಚೇರಿ, ಪ್ರಾಚ್ಯವಸ್ತು ನಿರ್ದೇಶನಾಲಯವನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಬಂದಿದೆ.

ಉತ್ತರ ಕರ್ನಾಟಕಕ್ಕೆ ಪ್ರಮುಖ ಇಲಾಖೆಗಳ ಸ್ಥಳಾಂತರಿಸಲು ಮುಖ್ಯಕಾರ್ಯದರ್ಶಿ ಪ್ರಸ್ತಾವನೆ ಸಲ್ಲಿಸಿದ್ದು , ಯಾವ ಕಚೇರಿ ಎಲ್ಲಿಗೆ, ಯಾವಾಗ ಸ್ಥಳಾಂತರಿಸಬೇಕು ಎಂಬುದನ್ನು ಉಪಸಮಿತಿ ನಿರ್ಧರಿಸಲಿದೆ.

ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕಿನ ಮಾಜಿ ಪ್ರಧಾನಿ ಹೆಚ್.ಡಿ‌.ದೇವೇಗೌಡರ ಹುಟ್ಟೂರಾದ ಹರದನಹಳ್ಳಿಯಲ್ಲಿ ಮಾದರಿ ವಸತಿಯುಕ್ತ ಮಹಿಳಾ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ  15 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

 
Loading...

ಕಿದ್ವಾಯಿ ಸಂಸ್ಥಯಲ್ಲಿ 27 ಕೋಟಿ ರೂ. ವೆಚ್ಚದಲ್ಲಿ ಸಿಟಿ ಸ್ಕ್ಯಾನರ್,ಬೋನ್ಸ್ ಮ್ಯಾರೋ ಟ್ರಾನ್ಸ್​​ಪ್ಲಾಂಟ್ ಯೂನಿಟ್ ಸ್ಥಾಪನೆಗೆ ಸಂಪುಟ ಅನುಮತಿ ನೀಡಿದೆ.

ಸಂಶೋಧನೆಗೆ ಆದ್ಯತೆ ನೀಡಲು ಅಸೋಸಿಯೇಷನ್ ಜೊತೆ ಒಡಂಬಡಿಕೆ ಹಾಗೂ ಇಂಡಿಯನ್ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್ ಅಸೋಸಿಯೇಷನ್ ಜತೆ ಒಪ್ಪಂದ ಹಾಗೂ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ಸಚಿವ ಸಂಪುಟ ಸಮ್ಮತಿ ಸೂಚಿಸಲಾಗಿದೆ

ಕೃಷಿ ಬೆಳೆ ಮಾಹಿತಿಗೆ ಮೊಬೈಲ್ ಆಪ್ ಮೂಲಕ ಸರ್ವೆ ಮಾಡುವ 25 ಕೋಟಿ ರೂ.ಅಂದಾಜು ವೆಚ್ಚದ ಯೋಜನೆ ಹಾಗೂ ಕಾರವಾರ ಜಿಲ್ಲೆಯಲ್ಲಿ ಬೆಡ್ತಿ ನದಿಗೆ ಮೇಲ್ಸೇತುವೆ ನಿರ್ಮಾಣ ಹಾಗೂ ರಾಮನಗರ ಜಿಲ್ಲಾ ಸಂಕೀರ್ಣ ನಿರ್ಮಾಣ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದರು.
First published:September 6, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...