ನಾಳೆಯಿಂದ ಎಲ್ಲಾ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ; ಸಚಿವ ಮಾಧುಸ್ವಾಮಿ

ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಸಲುವಾಗಿ ಸುರಕ್ಷಾದೀಪ, ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಭಯಾ ಯೋಜನೆಯ ಅಡಿಯಲ್ಲಿ 667 ಕೋಟಿ ರೂ. ಯೋಜನೆಗೆ ಸಂಪುಟ ಸಣೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.

MAshok Kumar | news18-kannada
Updated:October 22, 2019, 1:55 PM IST
ನಾಳೆಯಿಂದ ಎಲ್ಲಾ ಸಚಿವರು ಪ್ರವಾಹಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ; ಸಚಿವ ಮಾಧುಸ್ವಾಮಿ
ಸಚಿವ ಮಾಧುಸ್ವಾಮಿ
  • Share this:
ಬೆಂಗಳೂರು (ಅಕ್ಟೋಬರ್ 22); ರಾಜ್ಯ ಸಚಿವ ಸಂಪುಟದ ಎಲ್ಲಾ ಸಚಿವರುಗಳು ವಿವಿಧ ತಂಡಗಳಾಗಿ ನಾಳೆಯಿಂದ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ನೆರೆ ಸಂತ್ರಸ್ತರಿಗೆ ನೆರವಾಗಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಇಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, “ನೆರೆ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಹಿಂದಿನಂತೆ ಮಂತ್ರಿಗಳ ತಂಡ ರಚನೆ ಮಾಡಿ ಪರಿಹಾರ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಲ್ಲದೆ, ನಾಳೆಯಿಂದ ಎಲ್ಲಾ ಸಚಿವರು ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ನೆರೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕರ್ನಾಟಕದ ತತ್ತರಿಸಿ ಹೋಗಿದೆ. ಪ್ರವಾಹಕ್ಕೆ ಈವರೆಗೆ 84 ಜನ ಮೃತಪಟ್ಟಿದ್ದು, 14 ಜನ ಕಣ್ಮರೆಯಾಗಿದ್ದಾರೆ ಎನ್ನಲಾಗಿತ್ತು. ಆದರೆ, ಕಳೆದ ಎರಡು ದಿನಗಳಿಂದ ಮತ್ತೆ ಎಡೆಬಿಡದೆ ಸುರಿಯುತ್ತಿರುವ ಮಳೆಗೆ 11 ಜನ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಈ ಎಲ್ಲರಿಗೂ ಸೂಕ್ತ ಪರಿಹಾರ ನೀಡುವುದಾಗಿ ಸಚಿವ ಮಾಧುಸ್ವಾಮಿ ಆಶ್ವಾಸನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವ ಸಲುವಾಗಿ ಸುರಕ್ಷಾದೀಪ, ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಭಯಾ ಯೋಜನೆಯ ಅಡಿಯಲ್ಲಿ 667 ಕೋಟಿ ರೂ. ಯೋಜನೆಗೆ ಸಂಪುಟ ಸಣೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದಲ್ಲದೆ ಇಂದಿನ ಸಂಪುಟ ಸಭೆಯಲ್ಲಿ ಕೃಷಿ ಇಲಾಖೆಯಲ್ಲಿ 400 ಕೋಟಿ ರೂ. ಕೃಷಿ ಸಾಲಕ್ಕೆ ಮಾರಾಟ ಮಂಡಳಿಗೆ ಖಚಿತತೆ. ದೇವರಾಜ್ ಅರಸು ಹಿಂದುಳಿದ ವರ್ಗಗಳ ನಿಗಮಕ್ಕೆ 18 ಕೋಟಿ ರೂ.ಸಾಲಕ್ಕೆ ಖಾತ್ರಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ.

ಹಿಂದುಳಿದ ಕಲ್ಯಾಣ ನಿಧಿಯಲ್ಲಿ ಪೂರ್ವಮೆಟ್ರಿಕ್ ಹಾಸ್ಟೆಲ್ ಗಳಲ್ಲಿ ಸಿರಿಗಂಧ ಕಿಟ್ ಪ್ರತಿ ತಿಂಗಳು ನೀಡಲು 18.6 ಕೋಟಿ ರೂ. ಹೆಚ್ಚುವರಿ ಹಣ, ಹಿರೇಕೇರೂರಿನ ರಟ್ಟಿಹಳ್ಳಿ ಕೆರೆ ನೀರು ತುಂಬಲು 177 ಕೋಟಿ ರೂ, ಸಂಡೂರಿನ 77.47 ಕೋಟಿ ರೂ. ವೆಚ್ಚದಲ್ಲಿ ನೀರು ಸರಬರಾಜು, ಗದಗ ಜಿಲ್ಲೆ ಮೂಗನೂರಿನಲ್ಲಿ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಏತನೀರಾವರಿಗೆ 311 ಕೋಟಿ ರೂ. ಜಲಸಂಪನ್ಮೂಲ ಇಲಾಖೆಯಲ್ಲಿ 1000 ಕೋಟಿ ರೂ. ಟರ್ಮ್ ಲೋನ್ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ, ಭದ್ರಾವತಿಯ ಬಹುಗ್ರಾಮ ಯೋಜನೆ 18 ಕೋಟಿ ರೂ. ದೇವದುರ್ಗ ತಾಲೂಕಿನ 3 ಕಾಮಗಾರಿಗಳಿಗೆ 110 ಕೋಟಿ, ಚಿತ್ರದುರ್ಗ ಜಿಲ್ಲೆಯ ವಿವಿಧ ಕಟ್ಟಡಕ್ಕೆ 28 ಕೋಟಿ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ 17 ಕೋಟಿ ರೂ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.ಇದನ್ನೂ ಓದಿ : ಶೇ.93 ರಷ್ಟು ಅತ್ಯಾಚಾರ ಪ್ರಕರಣಗಳ ಆರೋಪಿ ಸಂತ್ರಸ್ತೆಯ ಪರಿಚಿತನೇ ಆಗಿದ್ದಾನೆ; ಆಂತಕಕ್ಕೆ ಕಾರಣವಾದ ಎನ್​ಆರ್​ಸಿಬಿ ವರದಿ

First published:October 22, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading