ಐಟಿ ಕಚೇರಿ ಮುಂದೆ ಪ್ರತಿಭಟನೆ; ಸಿಎಂ ಎಚ್​​ಡಿಕೆ, ಸಿದ್ದರಾಮಯ್ಯ ಸೇರಿ ದೋಸ್ತಿ ನಾಯಕರ ವಿರುದ್ಧ ಪ್ರಕರಣ ದಾಖಲು!

ಮೊದಲಿಗೆ 'ತಮ್ಮ ಆಪ್ತರು ಮತ್ತು ಸಂಬಂಧಿಕರ ಮೇಲೆ ಐ.ಟಿ ದಾಳಿ ನಡೆಯಲಿದೆ' ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಮಂಡ್ಯದಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಬೆಳಕು ಹರಿಯುವುದರೊಳಗೆ ಅವರ ಮಾತು ಅಕ್ಷರಶಃ ನಿಜವಾಗಿತ್ತು.

Ganesh Nachikethu | news18
Updated:April 17, 2019, 10:29 AM IST
ಐಟಿ ಕಚೇರಿ ಮುಂದೆ ಪ್ರತಿಭಟನೆ; ಸಿಎಂ ಎಚ್​​ಡಿಕೆ, ಸಿದ್ದರಾಮಯ್ಯ ಸೇರಿ ದೋಸ್ತಿ ನಾಯಕರ ವಿರುದ್ಧ ಪ್ರಕರಣ ದಾಖಲು!
ಐಟಿ ಕಚೇರಿ ಮುಂದೆ ಪ್ರತಿಭಟನೆ
Ganesh Nachikethu | news18
Updated: April 17, 2019, 10:29 AM IST
ಬೆಂಗಳೂರು(ಏ.17): ಐಟಿ ದಾಳಿ ಖಂಡಿಸಿ ಆದಾಯ ತೆರಿಗೆ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್​​-ಜೆಡಿಎಸ್​​ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಎಚ್​​.ಡಿ ಕುಮಾರಸ್ವಾಮಿ, ಸಚಿವ ಡಿ.ಕೆ ಶಿವಕುಮಾರ್​,​ ಡಿಸಿಎಂ ಡಾ. ಜಿ ಪರಮೇಶ್ವರ್ ಸೇರಿದಂತೆ ​​​ಹಲವು ಮುಖಂಡರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ಖುದ್ದು ಪ್ರತಿಕ್ರಿಯಿಸಿರುವ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರು, ಐಟಿ ಅಧಿಕಾರಿಗಳ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ಧಾರೆ.

ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ರಮವಾಗಿ ಗುಂಪು ಸೇರುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಐಪಿಸಿ 504, 506ರಡಿ ದೂರು ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 9 ರಂದು ಐಟಿ ಅಧಿಕಾರಿಗಳು ದೋಸ್ತಿ ನಾಯಕರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅಲ್ಲದೇ ಪೊಲೀಸ್ ಇಲಾಖೆಗೂ ದೂರು ನೀಡುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಆರೋಪಿಸಿದ್ದರು ಎನ್ನಲಾಗಿದೆ.

ಇತ್ತೀಚೆಗೆ ಮಂಡ್ಯ, ಹಾಸನ, ಶಿವಮೊಗ್ಗ ಹಾಗೂ ಬೆಂಗಳೂರು ಒಳಗೊಂಡಂತೆ 15 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿತ್ತು. ಕೇಂದ್ರ ಮೀಸಲು ಪೊಲೀಸರ (ಸಿಆರ್‌ಪಿಎಫ್‌) ಭದ್ರತೆಯೊಂದಿಗೆ ಸಣ್ಣ ನೀರಾವರಿ ಸಚಿವ ಸಿ. ಪುಟ್ಟರಾಜು ಅವರ ಸಂಬಂಧಿಗಳು, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರ ಆಪ್ತರ ಮನೆಗಳನ್ನು ಶೋಧಿಕಾರ್ಯ ಮುಂದುವರಿಸಿತ್ತು.

ಇದನ್ನೂ ಓದಿ: ನಾಳೆ ಕರ್ನಾಟಕ ಮೊದಲ ಹಂತದ ಮತದಾನ; ಬಹಿರಂಗ ಪ್ರಚಾರ ಅಂತ್ಯ; ಇಂದು ಮನೆಮನೆ ಪ್ರಚಾರಕ್ಕೆ ಅವಕಾಶ!

ಮೊದಲಿಗೆ 'ತಮ್ಮ ಆಪ್ತರು ಮತ್ತು ಸಂಬಂಧಿಕರ ಮೇಲೆ ಐ.ಟಿ ದಾಳಿ ನಡೆಯಲಿದೆ' ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರೇ ಮಂಡ್ಯದಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಬೆಳಕು ಹರಿಯುವುದರೊಳಗೆ ಅವರ ಮಾತು ಅಕ್ಷರಶಃ ನಿಜವಾಗಿತ್ತು.

ಇದು ರಾಜಕೀಯ ದುರುದ್ದೇಶಪೂರಿತ ದಾಳಿ ಎಂದು ಆರೋಪಿಸಿ ಕಾಂಗ್ರೆಸ್​​-ಜೆಡಿಎಸ್​​ ನಾಯಕರು ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಅಂದಿನ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ, ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ, ಸಾ.ರಾ.ಮಹೇಶ್ ಕೂಡ ಭಾಗಿಯಾಗಿದ್ದರು.
Loading...

ಇದನ್ನೂ ಓದಿ: ಕೋಮು ಪ್ರಚೋದನಾತ್ಮಕ ಭಾಷಣ; ಕಾಂಗ್ರೆಸ್​​​ ಸ್ಟಾರ್​​ ಪ್ರಚಾರಕ ನವಜ್ಯೋತ್ ಸಿಂಗ್ ಸಿಧು ವಿರುದ್ಧ ಎಫ್​​ಐಆರ್​​!

ಅಂದೇ ಮಿತ್ರ ಪಕ್ಷಗಳ ನಾಯಕರು ಬೆಂಗಳೂರಿನ ಐ.ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಳಿಯನ್ನು ರಾಜಕೀಯವಾಗಿ ಎದುರಿಸುವುದಾಗಿ ಉಭಯ ಪಕ್ಷಗಳ ನಾಯಕರು ಗುಡುಗಿದರು. ಅಧಿಕಾರಿಗಳು ಒಂದು ಪಕ್ಷದ ಕೈಗೊಂಬೆಯಾಗಿ ವರ್ತಿಸುವುದರ ವಿರುದ್ಧ ಎಚ್ಚರಿಕೆ ನೀಡಿದರು. ಈ ನಡುವೆ, ಆದಾಯ ತೆರಿಗೆ ಇಲಾಖೆ ಸುದೀರ್ಘ ಸ್ಪಷ್ಟನೆ ನೀಡಿದೆ. ಐ.ಟಿ ಅತ್ಯಂತ ವೃತ್ತಿಪರವಾಗಿದ್ದು, ಕಾನೂನಿನ ಚೌಕಟ್ಟಿನೊಳಗೇ ಕೆಲಸ ಮಾಡುತ್ತಿದೆ. ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿರುವ ಇಲಾಖೆಗೆ ರಾಜಕೀಯ ಕಳಂಕ ಹಚ್ಚಬಾರದು ಎಂದು ಮನವಿ ಮಾಡಿತ್ತು.
----------
First published:April 17, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

But the job is not done yet!
vote for the deserving condidate
this year

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626