Madal Virupakshappa: ಈ ಹಣ ಕೊಂಡೊಯ್ಯಲು ಅಮಿತ್ ಶಾ ಬಂದ್ರಾ? ಕಾಂಗ್ರೆಸ್ ಪ್ರಶ್ನೆ

ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿರುವ ಹಣ

ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿರುವ ಹಣ

PayPM ಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ ಎಂದು ಕಾಂಗ್ರೆಸ್ ಉತ್ತರ ಕೇಳಿದೆ.

  • Share this:

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (BJP MLAVirupakshappa Madal) ಪುತ್ರ ಪ್ರಶಾಂತ್ ಮಾಡಾಳ್ (Prashanth Madal) ನಿವಾಸ ಮತ್ತು ಕಚೇರಿ ಗುರುವಾರ ಸಂಜೆ ಲೋಕಾಯುಕ್ತ (Karnataka Lokayukta) ಅಧಿಕಾರಿಗಳು ದಾಳಿ ನಡೆಸಿತ್ತು. ಚುನಾವಣೆ (Election) ಸಂದರ್ಭದಲ್ಲಿ ಕಾಂಗ್ರೆಸ್​ಗೆ ಮಹಾ ಅಸ್ತ್ರ ಲಭ್ಯವಾಗಿದೆ. ಈಗ ಇದನ್ನೇ ಪೇಸಿಎಂ (Pay CM Poster) ಮತ್ತು 40 ಪರ್ಸೆಂಟ್ ಕಮಿಷನ್ (40 percent commission Allegation) ಆರೋಪಕ್ಕೆ ಆಧಾರವಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ. ಈಗಾಗಲೇ ಸಾಲು ಸಾಲು ಕಾಂಗ್ರೆಸ್ (Congress) ಮಾಡುತ್ತಿದ್ರೆ, ಕೈ ಕಾರ್ಯಕರ್ತರು (Congress Activist) ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.


ಕಮಿಷನ್​​​ ಪರ್ಸೆಂಟೂ ನಲವತ್ತು, ಪಡೆಯುತ್ತಿದ್ದ ಲಂಚವೂ ನಲವತ್ತು, ನಲವತ್ತು ನಲವತ್ತು, ತೋಳ ಹಳ್ಳಕ್ಕೆ ಬಿತ್ತು. ಶಾಸಕರ ಪರವಾಗಿ ಶಾಸಕರ ಪುತ್ರ ಲಂಚ ಸ್ವೀಕರಿಸುವಾಗ ಸಿಕ್ಕಿಬೀಳುವ ಮೂಲಕ ಬಿಜೆಪಿಯ ಕಮಿಷನ್ ದಂಧೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಂತಾಗಿದೆ. ಈಗ ಬಸವರಾಜ್ ಬೊಮ್ಮಾಯಿ ಅವರು ರಾಜೀನಾಮೆ ಕೊಡ್ತಾರಾ ಎಂದು ಕಾಂಗ್ರೆಸ್ ಕೇಳಿದೆ.


ಸಂಪತ್ತು ಕೊಂಡೊಯ್ಯುವುದಕ್ಕಾ ಶಾ ಬಂದ್ರಾ?


ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ. ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ 'ಸಂಪತ್ತು' ಕೊಂಡೊಯ್ಯುವುದಕ್ಕಾ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.


ಕಮಿಷನ್ ಲೂಟಿಗೆ ದಾಖಲೆ ಕೇಳುವ ಬಸವರಾಜ್ ಬೊಮ್ಮಾಯಿ ಅವರೇ, ದಾಖಲೆಗಳು ಕಂತೆ ಕಂತೆಯಾಗಿ ಸಿಕ್ಕಿವೆ ನೋಡಿ. ಈಗ ಕಮಿಷನ್ ಆರೋಪ ಒಪ್ಪುವಿರಾ? ಚುನಾವಣೆ ಖರ್ಚಿಗಾಗಿ ಬಿಜೆಪಿಯ #ElectionCollection ಬಿರುಸಿನಿಂದ ಸಾಗಿದೆ. ಅಧಿಕಾರಾವಧಿ ಮುಗಿಯುತ್ತಿದೆ, ಮತ್ತೆಂದೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಬಕಾಸುರನಂತೆ ದೋಚಿ ಬಾಚುತ್ತಿದೆ ಎಂದು ಆರೋಪಿಸಿದೆ.




ಕರ್ನಾಟಕ ಎಟಿಎಂ ಆಗಿದೆಯೇ?


ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು?  ಈ ಹಣ #PayCM ಗೆ ತಲುಪಿಸುವುದಕ್ಕಾ ಅಥವಾ #PayPM ಗೆ ತಲುಪಿಸುವುದಕ್ಕಾ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ ಎಂದು ಕಾಂಗ್ರೆಸ್ ಉತ್ತರ ಕೇಳಿದೆ.


ಇದು ಡಬಲ್ ಲೂಟಿಯ ಸರ್ಕಾರ


"ನಾ ಖಾವುಂಗಾ, ನಾ ಖಾನೆದುಂಗಾ" ಎನ್ನುವ ನರೇಂದ್ರ ಮೋದಿ ಅವರೇ, ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? "ಶಬಾಷ್" ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಇದನ್ನೂ ಓದಿ: Lokayukta Raid: KSDL ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಶಾಸಕ ಮಾಡಾಳ್;  ಪುತ್ರನಿಗೆ ನ್ಯಾಯಾಂಗ ಬಂಧನ


ಐಟಿ, ಇಡಿ, ಸಿಬಿಐ ಏನ್ ಮಾಡ್ತಿವೆ?


ಕಮಿಷನ್ ಲೂಟಿಯ ಹಣ ಇಡಲು ಮನೆಗಳು ಸಾಲದೆ ಬಿಜೆಪಿಗರು ದೊಡ್ಡ ದೊಡ್ಡ ಗೋಡೌನ್‌ಗಳನ್ನೇ ಕಟ್ಟಿಸಿರುವಂತಿದೆ. ಒಬ್ಬೊಬ್ಬರಲ್ಲೂ ಲಾರಿಯಲ್ಲಿ ಲೋಡ್ ಮಾಡುವಷ್ಟು ಭ್ರಷ್ಟ ಹಣ ತುಂಬಿ ತುಳುಕುತ್ತಿದೆ. ಹೀಗಿದ್ದರೂ ಬಿಜೆಪಿಗರತ್ತ ಸುಳಿಯದ ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ ಎಂದು ಆಕ್ರೋಶ ಹೊರ ಹಾಕಿದೆ.

Published by:Mahmadrafik K
First published: