ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ

ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

news18-kannada
Updated:August 6, 2020, 7:04 PM IST
ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಪರಿಹಾರ - ಸಿಎಂ ಯಡಿಯೂರಪ್ಪ ಘೋಷಣೆ
ಸಿಎಂ ಬಿಎಸ್​ ಯಡಿಯೂರಪ್ಪ
  • Share this:
ಬೆಂಗಳೂರು(ಆ.06): ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ರಾಜ್ಯದ ಜನ ತತ್ತರಿಸಿದ್ದಾರೆ. ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಜೋರು ಮಳೆಯಿಂದಾಗಿ ಜನ ಭೂಕುಸಿತ ಮತ್ತು ಪ್ರವಾಹದ ಆಂತಕದ ನಡುವೆ ಜೀವಭಯದಲ್ಲಿ ಬದುಕುತ್ತಿದ್ದಾರೆ. ಹೀಗಿರುವಾಗ ಮಳೆಯಿಂದ ಹಾನಿಯಾದ ಕುಟುಂಬಗಳಿಗೆ ಹಿಂದಿನ‌ ರೀತಿಯೇ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯಿಂದ‌ ಹಾನಿಗೊಳಗಾದ ಕುಟುಂಬಗಳಿಗೆ ತಕ್ಷಣ ಪರಿಹಾರ 10 ಸಾವಿರ ನೀಡಬೇಕು ಹಾಗೆಯೇ ಸಂಪೂರ್ಣವಾಗಿ ಪೂರ್ಣ ಮನೆ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ಕೊಡಬೇಕು. ಇನ್ನಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದಾರೆ ಹಾನಿಗೆ ಅನುಗುಣವಾಗಿ ಪರಿಹಾರ ವಿತರಿಸಿ ಎಂದು ಆದೇಶಿಸಿದ್ದಾರೆ.
ಇನ್ನು, ಖಾಲಿಯಿರುವ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಟ್ಟಡಗಳನ್ನು ನಿರಾಶ್ರಿತರ ಕೇಂದ್ರವಾಗಿ ಬದಲಿಸಿ. ನಿರಾಶ್ರಿತರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆಯಬ್ಬರ; ಕದ್ರಾ ಡ್ಯಾಂನಿಂದ ಕಾಳಿ ನದಿಗೆ 60 ಕ್ಯೂಸೆಕ್ಸ್​​ ನೀರು; ಆತಂಕದಲ್ಲಿ ನದಿ ಪಾತ್ರದ ಜನ

ಬೆಳೆ ಹಾನಿ ಬಗ್ಗೆ ಅಧಿಕಾರಿಗಳು ಕೂಡಲೇ ಸರ್ವೆ‌ ಮಾಡಬೇಕು. ಆದಷ್ಟು ಬೇಗ ನನಗೆ ಈ ಬಗ್ಗೆ ವರದಿ ನೀಡಬೇಕು. ವರದಿ ಆಧರಿಸಿ ಬೆಳೆ ಹಾನಿಗೆ ಸರ್ಕಾರ ಪರಿಹಾರ ನೀಡಲಿದೆ ಎಂದರು.
Published by: Ganesh Nachikethu
First published: August 6, 2020, 7:00 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading