ಬೆಂಗಳೂರು: ಬಿಜೆಪಿ (BJP) ಪಕ್ಷದ ವಿರುದ್ಧ ಅಸಮಾಧಾನಗೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (Kalyana Rajya Pragati Party) ಸ್ಥಾಪನೆ ಮಾಡಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ದನ ರೆಡ್ಡಿ ಅವರ ಆಸ್ತಿ ಜಪ್ತಿಗೆ (Ilegal Property) ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಸಿಬಿಐ (CBI) ಸದ್ಯ ಹೈಕೋರ್ಟ್ (High Court) ಮೊರೆ ಹೋಗಿದ್ದು, ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಸಿಬಿಐ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅಕ್ರಮ ಹಣದ ಮೂಲದಿಂದ ಜನಾರ್ದನ ರೆಡ್ಡಿ ಅವರು ಆಸ್ತಿ ಖರೀದಿಸಿದ್ದಾರೆ ಎಂದು ಸಿಬಿಐ ಆರೋಪ ಮಾಡಿದೆ.
ರೆಡ್ಡಿ ಅಕ್ರಮವಾಗಿ 219 ಆಸ್ತಿ ಖರೀಸಿದ ಆರೋಪ
ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿರುವ ಸಿಬಿಐ, ಜನಾರ್ದನ ರೆಡ್ಡಿಯ 219 ಆಸ್ತಿಗಳನ್ನು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಆಸ್ತಿ ಪತ್ತೆ ಹಚ್ಚಿದ್ದೇವೆ. ಇದು ಅಕ್ರಮ ಹಣದ ಮೂಲದಿಂದ ಖರೀದಿಸಿದ ಆಸ್ತಿ ಎಂದು ಆರೋಪ ಮಾಡಲಾಗಿದೆ. ಅಲ್ಲದೇ ಆಕ್ಟೋಬರ್ 30, 2022 ರಂದೇ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿದರೂ ಸರ್ಕಾರ ಅನುಮತಿ ನೀಡಿಲ್ಲ. ಜನಾರ್ದನ ರೆಡ್ಡಿ ಅವರು ಈಗ ಆ ಆಸ್ತಿಗಳನ್ನು ಮಾರಾಟ ಮಾಡಲು ಮುಂದಾಗುತ್ತಿದ್ದಾರೆ. ಹೀಗಾಗಿ ಈ ಆಸ್ತಿ ಜಪ್ತಿಗೆ ಅನುಮತಿ ಕೋರಿ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಿಬಿಐ ಅರ್ಜಿ ಮಾಡಿದೆ.
ಇದನ್ನೂ ಓದಿ: BJP ಯಡಿಯೂರಪ್ಪ ಅಧಿಕಾರ ಕಿತ್ತುಕೊಳ್ಳಬಹುದು ಆದ್ರೆ, ಅವ್ರ ಶಕ್ತಿ ಕಿತ್ತುಕೊಳ್ಳಲು ಆಗಲ್ಲ- ಜನಾರ್ದನ ರೆಡ್ಡಿ
ಬಿಜೆಪಿ ವಿರುದ್ಧ ಸಿಡಿದೆದ್ದು ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದಂತೆ ಸಿಬಿಐ ಅರ್ಜಿ ಸಲ್ಲಿಕೆ ಮಾಡಿದೆ. ಸಿಬಿಐ ಸರ್ಕಾರ ವಿರುದ್ಧ ಹೈಕೋರ್ಟ್ಗೆ ಮನವಿ ಮಾಡಿರುವುರಿಂದ ಸರ್ಕಾರವೇ ಆಸ್ತಿ ಜಪ್ತಿಗೆ ಅನುಮತಿ ನೀಡುತ್ತಾ ಅಥವಾ ಕೋರ್ಟ್ ಅರ್ಜಿ ವಿಚಾರಣೆ ಕೈಗೊಂಡು ಸರ್ಕಾರಕ್ಕೆ ಉತ್ತರಿಸಲು ಕೇಳಿದರೆ ಸರ್ಕಾರ ಯಾವ ಉತ್ತರವನ್ನು ನೀಡುತ್ತದೆ ಎಂಬುವುದನ್ನು ಕಾದು ನೋಡಬೇಕಿದೆ.
ಗಂಗಾವತಿ ಕ್ಷೇತ್ರದಲ್ಲಿ ಸಖತ್ ಆ್ಯಕ್ಟೀವ್ ಆದ ಜನಾರ್ದನ ರೆಡ್ಡಿ
ಇತ್ತ, ಹೊಸ ಪಕ್ಷ ಸ್ಥಾಪನೆ ಬಳಿಕ ಕೊಪ್ಪಳದ ಗಂಗಾವತಿ ಕ್ಷೇತ್ರದಲ್ಲಿ ಜನಾರ್ದನ ರೆಡ್ಡಿ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆದ್ದು, ಬಿಜೆಪಿ ಅಲ್ಲದೇ, ಕಾಂಗ್ರೆಸ್ ಪಕ್ಷದ ಮತಗಳ ಮೇಲೂ ಕಣ್ಣೀಟ್ಟಿದ್ದಾರೆ. ಕ್ಷೇತ್ರದ ವಿವಿಧ ಪ್ರಭಾವಿ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದು, ತಮ್ಮತ್ತ ಸೆಳೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ.
ಇದನ್ನೂ ಓದಿ: Janardhana Reddy: ಗಣಿ ಧಣಿ ಜನಾರ್ದನ ರೆಡ್ಡಿ ಗೃಹ ಪ್ರವೇಶ, ಇಲ್ಲಿವೆ ನೋಡಿ ನೂತನ ಮನೆಯ ಫೋಟೋಸ್
ಸಿದ್ದರಾಮಯ್ಯ ಆಪ್ತ ಮುಂಖಡರನ್ನು ಭೇಟಿಯಾಗಿದ್ದ ರೆಡ್ಡಿ
ನಿನ್ನೆಯಷ್ಟೇ ಜನಾರ್ದನ ರೆಡ್ಡಿ ಅವರು, ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ, ಗಂಗಾವತಿ ಕ್ಷೇತ್ರದ ಪ್ರಭಾವಿ ಕುರುಬ ಸಮುದಾಯದ ಕೊಪ್ಪಳ ತಾಲೂಕಿನ ವನಬಳ್ಳಾರಿ ಗ್ರಾಮದ ಮುಖಂಡ ಹನುಮಂತ ಅರಸನಕೇರಿನ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.
ಆ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ, ಗಂಗಾವತಿ ಕ್ಷೇತ್ರದ ಅನ್ಸಾರಿ ಅವರಿಗೆ ಶಾಕ್ ನೀಡಲು ರೆಡ್ಡಿ ನೀಡಿದ್ರಾ ಎಂಬ ಚರ್ಚೆ ಕ್ಷೇತ್ರದಲ್ಲಿ ಹೆಚ್ಚಾಗಿದೆ. ಹನುಮಂತ ಅರಸನಕೇರಿ ಅವರು ಕ್ಷೇತ್ರದಲ್ಲಿ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ