ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ (KPCC President) ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಬಿಐ (CBI) ಶಾಕ್ ಕೊಟ್ಟಿದೆ. ಡಿಕೆಶಿ ಒಡೆತನ ಶಿಕ್ಷಣ ಸಂಸ್ಥೆ (educational institution) ಮೇಲೆ ಸಿಬಿಐ ಅಧಿಕಾರಿಗಳು (CBI officers) ಇಂದು ದಾಳಿ (Raid) ಮಾಡಿದ್ದಾರೆ. ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರದಲ್ಲಿರುವ (Rajarajeshwari Nagar) ಡಿಕೆ ಶಿವಕುಮಾರ್ ಒಡೆತನದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ (Global Academy of Technology) ಎಂಬ ಕಾಲೇಜ್ (College) ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಡಿಕೆಶಿಗೆ ಶಾಕ್ ಕೊಟ್ಟ ಸಿಬಿಐ ಅಧಿಕಾರಿಗಳು!
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಈಗಾಗಲೇ ಜಾರಿ ನಿರ್ದೇಶನಾಲಯದಜ (ಇಡಿ) ತನಿಖೆಯಿಂದ ಈಗಾಗಲೇ ಶಾಕ್ ಮೇಲೆ ಶಾಕ್ ಕೊಡುತ್ತಿದ್ದಾರೆ. ಈ ನಡುವೆ ಸಿಬಿಐ ಅಧಿಕಾರಿಗಳೂ ಕೂಡ ಡಿಕೆಶಿಗೆ ಶಾಕ್ ಕೊಟ್ಟಿದ್ದಾರೆ.
ಡಿಕೆಶಿ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ
ಬೆಂಗಳೂರಿನ ಆರ್.ಆರ್. ನಗರದಲ್ಲಿರುವ ಡಿಕೆಶಿ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಕೆಶಿ ಒಡೆತನದ ಗ್ಲೋಬಲ್ ಅಕಾಡೆಮಿ ಕಾಲೇಜಿನಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಡಿಕೆಶಿ ಹಾಗೂ ಪುತ್ರಿಯ ಆಸ್ತಿ ದಾಖಲೆ ಪರಿಶೀಲನೆ
ಡಿಕೆಶಿ ಮತ್ತು ಅವರ ಪುತ್ರಿ ಐಶ್ವರ್ಯಾ ಅಸೆಟ್ಸ್ ವ್ಯಾಲ್ಯುಯೇಷನ್ ಗೆ ಬಂದಿರೋ ಅಧಿಕಾರಿಗಳು ದಾಖಲೆ ಪರಿಶೀಲಿಸಿದ್ದಾರೆ. ಕಾಲೇಜಿಗೆ ಸಂಬಂಧಿಸಿದಂತೆ ಅಸೆಟ್ಸ್ ಮೌಲ್ಯಮಾಪನ ಮಾಡಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾ ಗ್ಲೋಬಲ್ ಕಾಲೇಜು ಸಂಸ್ಥೆಯ ಕಾರ್ಯದರ್ಶಿಯಾಗಿದ್ದು, ಫೈನಾನ್ಸ್ ಡಿಪಾರ್ಟ್ಮೆಂಟ್ ನಲ್ಲಿ ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ಸುಮಾರು ಹೊತ್ತು ದಾಖಲೆ ಪರಿಶೀಲನೆ ಮಾಡಿದ್ದ ಅಧಿಕಾರಿಗಳು, ಇದೀಗ ಅಲ್ಲಿಂದ ಹೊರಟಿದ್ದಾರೆ ಎನ್ನಲಾಗಿದೆ. ಇಂದು ಮಧ್ಹಾಹ್ನ 2.30ರ ಸುಮಾರಿಗೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಬಿಐ ದಾಳಿ ಬಗ್ಗೆ ಡಿಕೆಶಿ ಹೇಳಿದ್ದೇನು?
ಇನ್ನು ತಮ್ಮ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಲು ಅಲ್ಲಿಗೆ ತೆರಳಿರುವ ಡಿಕೆಶಿ, ಅಲ್ಲಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ದಾಳಿ ವೇಳೆಯಲ್ಲಿ ಸಿಬಿಐ ಅಧಿಕಾರಿಗಳು ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಅಂತ ಮಾಹಿತಿ ನೀಡಿದ್ರು.
“ನನ್ನ ವಿರುದ್ಧ ಷಂಡ್ಯಂತ್ರ ನಡೆಯುತ್ತಿದೆ”
ನನ್ನ ವಿರುದ್ದ ಕೇಸ್ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದ್ರೆ ನೀಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇದನ್ನೂ ಓದಿ: Karnataka Assembly Session: ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೊ ಅನಾವರಣ, ಸರ್ಕಾರದ ವಿರುದ್ಧ ಹರಿಹಾಯ್ದ ಕಾಂಗ್ರೆಸ್
ಡಿಕೆಶಿ ವಿರುದ್ಧ ಇಡಿ ತನಿಖೆ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಕ್ರಮ ಆಸ್ತಿ ಗಳಿಕೆ ಮತ್ತು ಅನಧಿಕೃತವಾಗಿ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು 2019ರ ಸೆಪ್ಟಂಬರ್ ತಿಂಗಳಿಂದ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ಎದುರಿಸುತ್ತಿದ್ದಾರೆ. ಅಕ್ಟೋಬರ್ 2020ರಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣ ದಾಖಲಿಸಿತ್ತು. ಡಿಕೆಶಿ ಹಾಗೂ ಅವರ ಕುಟುಂಬಸ್ಥರು 74.93 ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬುವುದು ಸಿಬಿಐ ಆರೋಪವಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ