ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ : 57 ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳು ವಶ

ಡಿ ಕೆ ಶಿವಕುಮಾರ್​ ಅವರ ಮೇಲೆ ಸುಮಾರು 74.93 ಕೋಟಿ ಅಕ್ರಮ ಆದಾಯ ಗಳಿಕೆ ಆರೋಪವಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಬಿಐಗೆ ಆದೇಶಿಸಿತ್ತು

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

  • Share this:
ಬೆಂಗಳೂರು(ಅಕ್ಟೋಬರ್​. 05): ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ ಕೆ ಸುರೇಶ್ ಮನೆಯ ಮೇಲೆ ನಡೆದ ಸಿಬಿಐ ದಾಳಿ ವೇಳೆ ಸುಮಾರು 57 ಲಕ್ಷ ನಗದು ಪತ್ತೆಯಾಗಿದೆ. ಇದೇ ವೇಳೆ ಡಿ ಕೆ ಶಿವಕುಮಾರ್ ಅವರ ಮನೆಯಲ್ಲಿ ಕೆಲ ಆಸ್ತಿ ಪತ್ರಗಳು, ಬ್ಯಾಂಕ್ ಪತ್ರಗಳು ಮತ್ತು ಕಂಪ್ಯೂಟರ್ ಹಾರ್ಡ್ ಡಿಸ್ಕ್ ನ್ನ ಸಿಬಿಐ ಆಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇಂದು ಬೆಳಗಿನ ಜಾವ ಡಿಕೆ ಸಹೋದರರಿಗೆ ಸೇರಿದ ಸುಮಾರು 14 ಕಡೆ ಸಿಬಿಐ ಆಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದರು. ಡಿಕೆ ಶಿವಕುಮಾರ್​ ಅವರಿಗೆ ಸೇರಿದ ದೆಹಲಿ, ಮುಂಬೈ ಮತ್ತು ಬೆಂಗಳೂರಿನ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ದಾಳಿ ವೇಳೆ 57 ಲಕ್ಷ ರೂಪಾಯಿ ನಗದು, ಹಾರ್ಡ್ ಡಿಸ್ಕ್ ಮತ್ತು ಆಸ್ತಿ ಪತ್ರಗಳು ಸೇರಿ ಕೆಲ ದಾಖಲೆಗಳನ್ನ ಸಿಬಿಐ ಜಪ್ತಿ ಮಾಡಿದೆ.

ಡಿ ಕೆ ಶಿವಕುಮಾರ್​ ಅವರ ಮೇಲೆ ಸುಮಾರು 74.93 ಕೋಟಿ ಅಕ್ರಮ ಆದಾಯ ಗಳಿಕೆ ಆರೋಪವಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಬಿಐಗೆ ಆದೇಶಿಸಿತ್ತು. ಈ ಹಿನ್ನಲೆ  U/s 6  Delhi special police establishment ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮಾರ್ಚ್ 2020 ರಲ್ಲಿ ಪ್ರಾಥಮಿಕ ತನಿಖೆಯನ್ನ ಆರಂಭಿಸಲಾಗಿತ್ತು ಎಂದು ಸಿಬಿಐ ಉಲ್ಲೇಖಿಸಿದೆ. ಸದ್ಯ ಹಲವು ಮಹತ್ವದ ಮಾಹಿತಿಗಳನ್ನ ಸಂಗ್ರಹ ಮಾಡಿರುವ ಸಿಬಿಐ ತನಿಖೆಯನ್ನ ಮುಂದುವರೆಸಿದೆ.


ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ. ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಿಂದ ಹಣ ಗಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿಂದೆ ಐಟಿ ಮತ್ತು ಇಡಿ ಅಧಿಕಾರಿಗಳು ಕೂಡ ಡಿ.ಕೆ. ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು.

ದಾಳಿ ಈ ವೇಳೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಡಿಕೆ ಶಿವಕುಮಾರ್ ಜೈಲು ಸೇರಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು
Published by:G Hareeshkumar
First published: