• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • CBI Notice: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ಶಾಕ್! CBI ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

CBI Notice: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸಿಬಿಐ ಶಾಕ್! CBI ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ

ಮಾಜಿ ಸಚಿವ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರ

ಮಾಜಿ ಸಚಿವ ಜನಾರ್ದನ ರೆಡ್ಡಿ ಚುನಾವಣಾ ಪ್ರಚಾರ

ಸುಮಾರು 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುವುದಾಗಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ. ಈ ನಡುವೆಯೇ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ಅವರಿಗೆ ಸಮನ್ಸ್ ಜಾರಿ ಮಾಡಿದೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ (Gali Janardhana Reddy) ಮತ್ತೆ ಸಿಬಿಐ (CBI) ಸಂಕಷ್ಟ ಎದುರಾಗಿದೆ. 2009-10ರ ಅವಧಿಯಲ್ಲಿ ಅಕ್ರಮ ಅದಿರು (Iron Ore Exports) ಮಾರಾಟಕ್ಕೆ ಸಂಬಂಧಿಸಿದಂತೆ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯದಿಂದ (Court) ಸಮನ್ಸ್ ಜಾರಿಯಾಗಿದೆ. ಅಲ್ಲದೇ ವಿವಿಧ ದೇಶಗಳಲ್ಲಿ ಬಂಡವಾಳ ಹೂಡಿಕೆ (Capital Investment) ಆರೋಪ ಹಿನ್ನೆಲೆ ಆಸ್ತಿಗಳ ವಿವರ ನೀಡುವಂತೆ ಸ್ವಿಡ್ಜರ್ ಲ್ಯಾಂಡ್ (Switzerland), ಸಿಂಗಾಪುರ (Singapore), ಅರಬ್ (Arab) ದೇಶಗಳಿಗೆ CBI ಮನವಿ ಮಾಡಿದೆ.


ಜನಾರ್ದನ ರೆಡ್ಡಿ ಆಸ್ತಿಗಳ ವಿವರ ನೀಡುವಂತೆ ಮನವಿ


ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಬಿಜೆಪಿ ಹಾಗೂ ಕಾಂಗ್ರೆಸ್​ ಸೇರಿದಂತೆ ಎದುರಾಳಿಗಳಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು, ಹೊಸ ಪಕ್ಷ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪನೆ ಮಾಡಿ ಭರ್ಜರಿ ಪ್ರಚಾರ ನಡೆಸಿದ್ದಾರೆ.




ಸುಮಾರು 30ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಸ್ಪರ್ಧೆಗೆ ಇಳಿಸುವುದಾಗಿ ಜನಾರ್ದನ ರೆಡ್ಡಿ ತಿಳಿಸಿದ್ದಾರೆ. ಈ ನಡುವೆಯೇ ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ಜನಾರ್ದನ ರೆಡ್ಡಿ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಅಲ್ಲದೆ ಜನಾರ್ದನ ರೆಡ್ಡಿ ಆಸ್ತಿಗಳ ವಿವರ ನೀಡುವಂತೆ ವಿವಿಧ ನಾಲ್ಕು ದೇಶಗಳ ಸಕ್ಷಮ ಪ್ರಾಧಿಕಾರಗಳಿಗೆ ನ್ಯಾಯಾಲಯ ಮನವಿ ಮಾಡಿದೆ.


ಇದನ್ನೂ ಓದಿ: Madal Virupakshappa: ಲೋಕಾಯುಕ್ತ ಕಚೇರಿಗೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ಹಾಜರು; ವಕೀಲರು ಹೇಳಿದ್ದೇನು?


ನ್ಯಾಯಾಲಯದ ಮೋರೆ ಹೋದ ಸಿಬಿಐ ಅಧಿಕಾರಿಗಳು


ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿವಿಧ ದೇಶಗಳಲ್ಲಿ ಬಂಡವಾಳ ಹೂಡಿಕೆ ಆರೋಪ ಹಿನ್ನೆಲೆಯಲ್ಲಿ ಬಂಡವಾಳ ಪತ್ತೆ ಹಚ್ಚಲು ತನಿಖಾ ಸಂಸ್ಥೆಗೆ ಸಹಾಯ ಮಾಡುವಂತೆ ಮನವಿ ಮಾಡಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಇ. ಚಂದ್ರಕಲಾ ಅವರು ಸಿಆರ್‌ಪಿಸಿ ಸೆಕ್ಷನ್ 166(ಎ) ಪ್ರಕಾರ ಆದೇಶ ನೀಡಿದ್ದು, ಸ್ವಿಡ್ಜೆರ್‌ಲ್ಯಾಂಡ್, ಸಿಂಗಾಪುರ, ಯುಎಇ ದೇಶಗಳ ನ್ಯಾಯಾಂಗ ಅಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಲು ಕೋರಲಾಗಿದೆ.


ಸಿಬಿಐ ತನಿಖಾ ಅಧಿಕಾರಿಗಳು ಜಿಎಲ್‌ಎ (ಗಾಲಿ ಜನಾರ್ದನ ರೆಡ್ಡಿ) ಟ್ರೇಡಿಂಗ್ ಇಂಟರ್ ನ್ಯಾಶನಲ್ ಪ್ರೈವೇಟ್ ಲಿಮಿಟೆಡ್ ಮಾಹಿತಿಯನ್ನು ಸಂಗ್ರಹಿಸಲು ನ್ಯಾಯಾಂಗದ ಸಹಾಯವನ್ನು ಕೋರಿದ್ದರು. ಬ್ಯಾಂಕ್ ಖಾತೆಗೆ ಸಂಬಂಧಿಸಿದ ವಿವರ, ಮಾಲೀಕರು ಮತ್ತು ಅಧಿಕೃತವಾಗಿ ಸಹಿ ಹಾಕಿರುವ ವ್ಯಕ್ತಿಯ ವಿವರಗಳನ್ನು ಸಿಬಿಐ ಅಧಿಕಾರಿಗಳು ಕೇಳಿದ್ದಾರೆ.


ಆರೋಪವೇನು?


ಗಾಲಿ ಜನಾರ್ದನ ರೆಡ್ಡಿಯವರು ತಮ್ಮ ಕಂಪನಿಯ ಮೂಲಕ 2009-10ರ ಅವಧಿಯಲ್ಲಿ ಸುಮಾರು 7 ರಿಂದ 8 ಮಿಲಿಯನ್ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಅಕ್ರಮ ಮಾರಾಟ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದೆ. ಗಾಲಿ ಜನಾರ್ದನ ರೆಡ್ಡಿ ಅವರು ವಿವಿಧ ದೇಶಗಳೊಂದಿಗೆ ವಹಿವಾಟು ನಡೆಸಿ ಅಕ್ರಮ ಅದಿರು ಮಾರಾಟ ಮಾಡಿ ಬಂದ ಹಣವನ್ನು ವಿವಿಧ ದೇಶಗಳಲ್ಲಿ ಇಟ್ಟಿದ್ದಾರೆ ಎನ್ನಲಾಗಿದೆ. ಅದಿರು ಮಾರಾಟ ಮಾಡಿ ಅದರ ಮುಂದಿನ ಫಲಾನುಭವಿಗಳು, ಕಂಪೆನಿಯ ಷೇರುಗಳ ವಿವರ ನೀಡಲಿ ಸಿಬಿಐ ಅಧಿಕಾರಿಗಳು ಮನವಿ ಮಾಡಿದ್ದಾರೆ.




ಇದನ್ನೂ ಓದಿ: Bombay Return Days: ಆಪರೇಷನ್​ ಕಮಲಕ್ಕೆ ಒಳಗಾದ ಶಾಸಕರಿಗೆ ಟೆನ್ಶನ್ ಶುರು! ಬಿಡುಗಡೆಗೆ ಸಿದ್ಧವಾಯ್ತು ಬಾಂಬೆ ಡೇಸ್ ಸ್ಟೋರಿ


ರಾಜಕೀಯದಲ್ಲಿ ಯಾರೊಂದಿಗೂ ಕಾಂಪ್ರಮೈಸ್ ಆಗುವುದಿಲ್ಲ


ಸಿಬಿಐ ಸಮನ್ಸ್ ನೀಡಿದರೂ ಕೂಡ ಚುನಾವಣೆಯ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಅವರು ತಮ್ಮ ಪ್ರಚಾರವನ್ನು ಮುಂದುವರಿಸಿದ್ದಾರೆ. ಕಲಬುರಗಿಯ ಸೇಡಂನಲ್ಲಿ ಜನಾರ್ದನ ರೆಡ್ಡಿ ಭರ್ಜರಿ ರೋಡ್​ ಶೋ ನಡೆಸಿದ್ದಾರೆ. ಇದಕ್ಕೂ ಮುನ್ನ ವಿವಿಧ ದೇವಾಲಯಗಳಿಗೂ ಜನಾರ್ದನ ರೆಡ್ಡಿ ಭೇಟಿ ನೀಡಿದ್ದಾರೆ.


ಇದಕ್ಕೂ ಮುನ್ನ ಚಿತ್ತಾಪುರದಲ್ಲಿ ಮಾತನಾಡಿದ ಗಾಲಿ ಜನಾರ್ದನ ರೆಡ್ಡಿ ಅವರು, ಬಿಜೆಪಿಯೊಂದಿಗೆ ಮತ್ತೆ ಸಂಧಾನ ಮಾಡಿಕೊಳ್ಳುವ ಪ್ರಮೇಯವಿಲ್ಲ. ರಾಜಕೀಯದಲ್ಲಿ ಯಾರೊಂದಿಗೂ ಕಾಂಪ್ರಮೈಸ್ ಆಗುವುದಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ 30 ಕ್ಷೇತ್ರಗಳಲ್ಲಿ ಕೆಆರ್​​ಪಿಪಿಯಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಬಳ್ಳಾರಿ, ಗಂಗಾವತಿ, ಕೊಪ್ಪಳ, ಸಿಂಧನೂರು, ಕನಕಗಿರಿ, ಹಿರಿಯೂರು, ಪಾವಗಡ, ನಾಗಥಾಣ, ಇಂಡಿ ಸೇರಿದಂತೆ ಸೇಡಂ ಕ್ಷೇತ್ರದಲ್ಲಿ ಇಂದು ಅಭ್ಯರ್ಥಿಯ ಘೋಷಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

Published by:Sumanth SN
First published: