CBSE Board Exam: ಸಿಬಿಎಸ್​ಇ 10, 12ನೇ ತರಗತಿ ಪರೀಕ್ಷೆಗಳ ಡೇಟಾಶೀಟ್ ಬಿಡುಗಡೆ; ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ

CBSE Exam Date: 10 ಮತ್ತು 12ನೇ ತರಗತಿಯ ಡೇಟಾಶೀಟ್​ಅನ್ನು ಸಿಬಿಎಸ್​ಇ ಅಧಿಕೃತ ವೆಬ್​ಸೈಟ್​ನಲ್ಲಿ ಪರಿಶೀಲಿಸುವಂತೆ ಎಲ್ಲ ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್​ ಕಡ್ಡಾಯ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್​ಇ) 10 ಮತ್ತು 12ನೇ ತರಗತಿ ಪರೀಕ್ಷೆಯನ್ನು ಈ ವರ್ಷದ ಜುಲೈನಲ್ಲಿ ನಡೆಸಲು ಸಮಯ ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಕೊರೋನಾ ವೈರಸ್ ಕಾರಣದಿಂದ ಬಾಕಿ ಉಳಿದಿದ್ದ ಸಿಬಿಎಸ್​ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಇಂದು ಟ್ವಿಟರ್​ನಲ್ಲಿ ಬಿಡುಗಡೆ ಮಾಡಿದ್ದಾರೆ. ಪರಿಷ್ಕೃತ ವೇಳಾಪಟ್ಟಿಯನ್ನು ಸಿಬಿಎಸ್​ಇ ವೆಬ್​ಸೈಟ್​ನಲ್ಲಿ ನೇರವಾಗಿ ನೋಡಬಹುದಾಗಿದೆ. cbse.nic.in.



    ಪರಿಷ್ಕೃತ ಡೇಟಾ‌ಶೀಟ್​‌ನಲ್ಲಿ ಈಶಾನ್ಯ ದೆಹಲಿ ಶಾಲೆಗಳ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಾಕಿ ಇರುವ ಪರೀಕ್ಷೆಗಳನ್ನು ಜುಲೈ 1 ರಿಂದ ಜುಲೈ 15 ರವರೆಗೆ ನಡೆಸಲಾಗುವುದು ಎಂದು ಉಲ್ಲೇಖಿಸಲಾಗಿದೆ.



    ಪರಿಷ್ಕೃತ ವೇಳಾಪಟ್ಟಿಯನ್ನು ಇದಕ್ಕೂ ಮುನ್ನ ಮೇ 16ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣದಿಂದ ಅದನ್ನು ಮುಂದೂಡಲಾಗಿತ್ತು.  ಬೋರ್ಡ್ ಪರೀಕ್ಷೆಗಳ ಡೇಟಾಶೀಟ್ ಅಂತಿಮಗೊಳಿಸುವ ಮೊದಲು ಕೆಲವು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಪರಿಗಣಿಸಿ, ಇಂದು ಸಂಜೆ 5 ಗಂಟೆಗೆ 10 ಮತ್ತು 12ನೇ ತರಗತಿಯ ಸಿಬಿಎಸ್‌ಇ ಡೇಟಾ‌ಶೀಟ್ ಅನ್ನು ಸೋಮವಾರ (18-05-2020) ರೊಳಗೆ ಪ್ರಕಟಿಸಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು ಟ್ವೀಟ್ ಮಾಡಿದ್ದರು.

    ಇದನ್ನು ಓದಿ: ಲಾಕ್​​ಡೌನ್​​-4: ಕರ್ನಾಟಕದಲ್ಲಿ ನಾಳೆಯಿಂದ ಬಸ್, ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶ; ಏನಿರಲಿದೆ? ಏನಿಲ್ಲ?

    10 ಮತ್ತು 12ನೇ ತರಗತಿಯ ಡೇಟಾಶೀಟ್​ಅನ್ನು ಸಿಬಿಎಸ್​ಇ ಅಧಿಕೃತ ವೆಬ್​ಸೈಟ್​ನಲ್ಲಿ ಪರಿಶೀಲಿಸುವಂತೆ ಎಲ್ಲ ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್​ ಕಡ್ಡಾಯ ಮಾಡಲಾಗಿದೆ.
    First published: