ಬೆಂಗಳೂರು(ಸೆ.18): ಡಿಜಿ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ ರಾಜ್ಗೆ ಮತ್ತೆ ಸಿಸಿಬಿ ನೊಟೀಸ್ ಜಾರಿ ಮಾಡಿದೆ. ಆದರೆ, ಮಾಜಿ ಮೇಯರ್ಗೆ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಇಂದು ವಿಚಾರಣೆಗೆ ಹಾಜರಾಗುವುದು ಬಹುತೇಕ ಅನುಮಾನವಾಗಿದೆ. ಈಗಾಗಲೇ ನೊಟೀಸ್ ನೀಡಲು ಮನೆ ಬಳಿ ಸಿಸಿಬಿ ಪೊಲೀಸರು ಹೋಗಿದ್ದರು. ಆದರೆ ಸಂಪತ್ ರಾಜ್ ಮನೆಯಲ್ಲಿ ಇಲ್ಲದ ಕಾರಣಕ್ಕೆ ವಾಪಸ್ ಬಂದು ವಾಟ್ಸಾಪ್ ಮೂಲಕ ನೊಟೀಸ್ ಕಳುಹಿಸಿದ್ದರು. ನೊಟೀಸ್ ನೀಡಿದ್ದರೂ ಇದುವರೆಗೂ ಯಾವುದೇ ಸಂಪತ್ ರಾಜ್ ಪ್ರತಿಕ್ರಿಯಿಸಿರಲಿಲ್ಲ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿತ್ತು. ಆದರೀಗ ಕೊರೋನಾ ಕಾಣಿಸಿಕೊಂಡಿದ್ದರಿಂದ ವಿಚಾರಣೆಗೆ ಗೈರಾಗುವ ಸಾಧ್ಯತೆಯಿದೆ. ಹೀಗಾಗಿ ಸಿಸಿಬಿ ಪೊಲೀಸರು ಮತ್ತೊಂದು ದಿನ ನೊಟೀಸ್ ನೀಡಿ ವಿಚಾರಣೆಗೆ ಕರೆಯಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಗಲಭೆ ಪ್ರಕರಣದಲ್ಲಿ ಕಳೆದ ಆಗಸ್ಟ್ 18ರಂದು ಸಂಪತ್ ರಾಜ್ ಹಾಗೂ ಫ್ರೇಜರ್ ಟೌನ್ ವಾರ್ಡ್ ಕಾರ್ಪೋರೇಟರ್ ಜಾಕೀರ್ ಹುಸೇನ್ಗೆ ನೊಟೀಸ್ ಜಾರಿ ಮಾಡಿ ಸಿಸಿಬಿ ತನಿಖಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಂಪತ್ ರಾಜ್ ಬಳಸುತ್ತಿದ್ದ ಹೈಪೋನ್ ವಶಕ್ಕೆ ಪಡೆದುಕೊಂಡಿದ್ದರು. ರಿಟ್ರೈವ್ಗಾಗಿ ತಿವೆಂಡ್ರಮ್ನಲ್ಲಿರುವ ಎಫ್ಎಸ್ಎಲ್ಗೆ ಕಳುಹಿಸಿದ್ದರು. ಇದರ ವರದಿ ಇನ್ನಷ್ಟೇ ಬರಬೇಕಿದೆ.
ಇನ್ನು, ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ನವೀನ್ ಧರ್ಮವೊಂದರ ಪ್ರವಾದಿ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಇದರಿಂದ ಅಸಮಾಧಾನಗೊಂಡ ಗಲಭೆಕೋರರು ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮೇಲೆ ದಾಳಿ ನಡೆಸಿದ್ದರು.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆಗಳಿಗೆ ಧ್ವಂಸಗೊಳಿಸಿದ್ದರು. ಗಲಭೆ ಹಿಂದೆ ಸಂಪತ್ ರಾಜ್ ಕೈವಾಡವಿದೆ ಎಂದು ಹೇಳಲಾಗಿತ್ತು. ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿ ಈ ಗಲಭೆಗೆ ಪ್ರಚೋದನೆ ನೀಡಿರಬಹುದು ಎಂಬ ಆರೋಪ ಕೇಳಿ ಬಂದಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಪತ್ ರಾಜ್ ಪುಲಕೇಶಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಪ್ರಕರಣ ಸಂಬಂಧ ಮಾಜಿ ಮೇಯರ್ ಆಪ್ತ ಅರುಣ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ