ಬೆಂಗಳೂರು; ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಪ್ರಭಾವಿಗಳಿಗೂ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಮೇಲೆ ಯುವರಾಜ್ ಎಂಬಾತನನ್ನು ಸಿಸಿಬಿ ಬಂಧಿಸಿದೆ. ಸಿಸಿಬಿ ವಶದಲ್ಲಿರುವ ಯುವರಾಜ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ. ಈ ಪ್ರಕರಣದಲ್ಲಿ ಸ್ಯಾಂಡಲ್ವುಡ್ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್ ಅವರ ಹೆಸರು ಕೇಳಿ ಬಂದಿದೆ. ಈ ಹಿಂದೆ ಸಿಸಿಬಿ ಪೊಲೀಸರು ನಟಿ ರಾಧಿಕಾ ಅವರ ಸಹೋದರ ರವಿರಾಜ್ ಅವರನ್ನು ಪ್ರಕರಣದ ಸಂಬಂಧ ವಿಚಾರಣೆಗೆ ಕರೆದಿದ್ದರು. ಇದೀಗ ಈ ಪ್ರಕರಣ ಸಂಬಂಧ ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಸಿಸಿಬಿ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನಟಿ ರಾಧಿಕಾ ಅವರಿಗೆ ಸಿಸಿಬಿ ನೋಟಿಸ್ ನೀಡಿದೆ. ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ರಾಧಿಕಾ ಕುಮಾರಸ್ವಾಮಿ ಅವರು ನೆನ್ನೆ ಸುದ್ದಿಗೋಷ್ಠಿ ನಡೆಸಿ, ಸಿನಿಮಾ ಮಾತುಕತೆ ಹೊರತಾಗಿ ಯುವರಾಜ್ ಹಾಗೂ ನನ್ನ ನಡುವೆ ಯಾವುದೇ ವ್ಯವಹಾರ ನಡೆದಿಲ್ಲ. ಈ ಸಂಬಂಧ ಸಿಸಿಬಿ ಪೊಲೀಸರು ವಿಚಾರಣೆ ಕರೆದರೆ ಹೋಗುವುದಾಗಿ ಸ್ಪಷ್ಟನೆ ನೀಡಿದ್ದರು.
ಇದನ್ನು ಓದಿ: ಜಾಡಿಸಿ ಒದ್ದರೆ ಎಲ್ಲಿಗೋಗ್ತಿಯಾ ಗೊತ್ತಾ? ರಾಸ್ಕಲ್; ಅಧಿಕಾರಿ ವಿರುದ್ಧ ಸಚಿವ ಮಾಧುಸ್ವಾಮಿ ಕೆಂಡಾಮಂಡಲ
ಯುವರಾಜ್ ಅವರು ಜ್ಯೋತಿಷಿಗಳು, 18 ವರ್ಷಗಳಿಂದ ಅವರ ಪರಿಚಯ ನಮ್ಮ ಕುಟುಂಬಕ್ಕೆ ಇದೆ. ಅವರು ಹೇಳುತ್ತಿದ್ದ ಭವಿಷ್ಯದ ಬಗ್ಗೆ ನಮ್ಮ ಪೋಷಕರಿಗೆ ನಂಬಿಕೆ ಇತ್ತು. ಅದನ್ನು ಹೊರತು ಪಡಿಸಿ ಅವರೊಂದಿಗೆ ಯಾವುದೇ ರೀತಿಯ ವ್ಯಾವಹಾರಿಕ ಸಂಬಂಧ ಮಾಡಿಲ್ಲ ಎಂದಿದ್ದಾರೆ. ಅವರ ಬಂಧನವಾದಾಗಲೇ ತನಗೆ ತಿಳಿದಿದ್ದು ಅವರು ವಂಚನೆಯ ಆರೋಪ. ನನ್ನ ತಂದೆ ಬದುಕಿದ್ದಾಗ ಅವರು ಮನೆಗೆ ಬರುತ್ತಿದ್ದರು. ಪ್ರಕರಣದ ಸಂಬಂಧ ನನ್ನ ಅಣ್ಣನನ್ನು ಸಿಸಿಬಿ ವಿಚಾರಣೆಗೆ ಕರೆದಿದ್ದರು. ನನ್ನನ್ನು ಕರೆದರೆ ನಾನು ಹೋಗುತ್ತೇನೆ ಎಂದು ರಾಧಿಕಾ ಕುಮಾರಸ್ವಾಮಿ ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ