ಕರುಣಾನಿಧಿ ನಿಧನ ಹಿನ್ನೆಲೆ ಇಂದು ರಾಷ್ಟ್ರೀಯ ಶೋಕಾಚರಣೆ

news18
Updated:August 8, 2018, 8:52 AM IST
ಕರುಣಾನಿಧಿ ನಿಧನ ಹಿನ್ನೆಲೆ ಇಂದು ರಾಷ್ಟ್ರೀಯ ಶೋಕಾಚರಣೆ
news18
Updated: August 8, 2018, 8:52 AM IST
ನ್ಯೂಸ್​ 18 ಕನ್ನಡ

ತಮಿಳುನಾಡು ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ನಿನ್ನೆ ಸಂಜೆ ನಿಧನರಾಗಿದ್ದು, ಅವರ ಸಾವಿಗೆ ಕೇಂದ್ರ ಸರ್ಕಾರ ಸಂತಾಪ ಸೂಚಿಸಿದೆ.

ಅವರ ಸಾವಿನ ಹಿನ್ನೆಲೆಯಲ್ಲಿ ಅಗಲಿದ ಹಿರಿಯ ಮುಖಂಡನಿಗೆ ರಾಷ್ಟ್ರೀಯ ಗೌರವ ಸಲ್ಲಿಸಲು ದೇಶಾದ್ಯಂತ ರಾಷ್ಟ್ರೀಯ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಈ ಪ್ರಯುಕ್ತ ಇಂದು ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧ ಮಾತ್ರ ಹಾರಿಸಲಾಗುತ್ತದೆ.

ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಅಧಿಕೃತ ಆದೇಶ ಹೊರಡಿಸಿದ್ದು, ದೆಹಲಿ ಸೇರಿದಂತೆ ಎಲ್ಲ ರಾಜ್ಯಗಳಲ್ಲೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ. ತಮಿಳುನಾಡು ಮಾತ್ರವಲ್ಲದೆ ದೇದ ಹಿರಿಯ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ ಕರುಣಾನಿಧಿ ಅವರ ಸಾವಿನ ಪ್ರಯುಕ್ತ ಚೆನ್ನೈನಲ್ಲಿನ ಪೆಟ್ರೋಲ್ ಪಂಪ್ ಗಳು ಇಂದು ಸಂಜೆ 6 ಗಂಟೆಯವರೆಗೂ ಮುಚ್ಚಲ್ಪಟ್ಟಿರುತ್ತದೆ.

ಅದೇರೀತಿ, ಕರ್ನಾಟಕದಲ್ಲೂ ಒಂದು ದಿನ ಶೋಕಾಚರಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಚೆನ್ನೈನ ರಾಜಾಜಿ ಹಾಲ್​ನಲ್ಲಿ ಕುಮಾರಸ್ವಾಮಿ ಕರುಣಾನಿಧಿ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು ಬೆಂಗಳೂರಿನಿಂದ ತಮಿಳುನಾಡಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್​ಗಳನ್ನು ಸ್ಥಗಿತಗೊಳಿಸಲಾಗಿದೆ.

 
First published:August 8, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...